ದಿನದ ಸುದ್ದಿ
59 ಲಕ್ಷ 45 ಸಾವಿರ ಫಲಾನುಭವಿಗಳಿಗೆ ಮಾಸಾಶನ ಹೆಚ್ಚಳ
ಸುದ್ದಿದಿನ ಡೆಸ್ಕ್ : ವಿವಿಧ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯಡಿ 59 ಲಕ್ಷ 45 ಸಾವಿರ ಫಲಾನುಭವಿಗಳಿಗೆ ನೀಡುತ್ತಿರುವ ಮಾಸಾಶನವನ್ನು ಹೆಚ್ಚಳ ಮಾಡಲಾಗಿದೆ.
ಅವಿವಾಹಿತ, ವಿಚ್ಛೇದಿತ ಮಹಿಳೆಯರಿಗೆ ಹಾಗೂ ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ಒಂದು ಲಕ್ಷ 32 ಸಾವಿರ ಫಲಾನುಭವಿಗಳಿಗೆ ಇದರಿಂದ ಪ್ರಯೋಜನವಾಗಲಿದೆ. ಫಲಾನುಭವಿಗಳಿಗೆ ತಕ್ಷಣ ಸಾಮಾಜಿಕ ಭದ್ರತಾ ಪಿಂಚಣಿ ಲಭ್ಯವಾಗುವಂತೆ ಮಾಡಿರುವ ಅಂಶಕ್ಕೆ ಮುಖ್ಯಮಂತ್ರಿ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಸಣ್ಣ ತಾಲೂಕುಗಳಿಗೆ ಮಿನಿ ವಿಧಾನಸೌಧ ವಿನ್ಯಾಸಗೊಳಿಸುವಾಗ ಅಗತ್ಯವಿರುವ ಇಲಾಖೆಗಳನ್ನು ಗಮನದಲ್ಲಿಟ್ಟುಕೊಂಡು, ಲಭ್ಯವಿರುವ ಸ್ಥಳಗಳಲ್ಲಿ ನಿಗದಿತ ಕಾಲಮಿತಿಯೊಳಗೆ ಕಟ್ಟಡ ನಿರ್ಮಾಣ ಪೂರ್ಣಗೊಳಿಸಿ ಎಲ್ಲ ಇಲಾಖೆಗಳನ್ನು ಒಂದೇ ಸೂರಿನಡಿ ತರುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243