ದಿನದ ಸುದ್ದಿ
ಉದ್ಯೋಗವಂಚಿತ ಯುವಜನತೆಯಿಂದ ಸೆ.19 ರಂದು ಫ್ರೀಡಂ ಪಾರ್ಕ್ ನಲ್ಲಿ ‘ಬೃಹತ್ ಪ್ರತಿಭಟನೆ’ : ಭವ್ಯ ನರಸಿಂಹಮೂರ್ತಿ ಕರೆ
ಸುದ್ದಿದಿನ,ಬೆಂಗಳೂರು : ಸೆಪ್ಟೆಂಬರ್ 19 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗ ವಂಚಿತರಾದನಾವು ನಮ್ಮ ಕರ್ನಾಟಕ ಸ್ಟೇಟ್ ಎಕ್ಸಾಮಿನೇಶನ್ ಆಸ್ಪಿರನ್ಟ್ಸ್ ಅಸೋಸಿಯೇಷನ್ ನಿಂದ ಬೆಂಗಳೂರು ನಗರದ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿರುತ್ತೇವೆ ಎಂದು ಹೋರಾಟಗಾರ್ತಿ ಭವ್ಯ ನರಸಿಂಹಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದ ಯುವಜನತೆ ಸಹಸ್ರಾರು ಸಂಖ್ಯೆಯಲ್ಲಿ ಈ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಕರೆ ನೀಡಿರುವ ಅವರು, ನಮ್ಮ ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಖಾಲಿಯಿರುವ 2.5 ಲಕ್ಷಕ್ಕೂ ಹೆಚ್ಚಿನ ಸರ್ಕಾರಿ ಉದ್ಯೋಗವನ್ನು ಭರ್ತಿ ಮಾಡುವಲ್ಲಿ ವಿಫಲವಾಗಿದ್ದು ಈಗಾಗಲೇ ನಡೆದಿರುವ ಭರ್ತಿ ಪ್ರಕ್ರಿಯೆಗಳಲ್ಲಿ ವ್ಯಾಪಕವಾಗಿ ಭ್ರಷ್ಟಾಚಾರ ಬೆಳಕಿಗೆ ಬಂದಿದೆ. ಸರ್ಕಾರ ಇದರ ವಿರುದ್ಧ ಕ್ರಮ ಕೈಗೊಳ್ಳದ ಕಾರಣ ಉದ್ಯೋಗ ವಂಚಿತರಾದ ನಾವು ಈ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೇವೆ ಎಂದಿದ್ದಾರೆ.
KPSC, KSP, KEA ಮತ್ತು KFD ನಡೆಸುವ ಪ್ರತಿಯೊಂದು ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿಯನ್ನು ಅಧಿಸೂಚನೆಯೊಂದಿಗೆ ಪ್ರಕಟಿಸಬೇಕು ಹಾಗೂ UPSC ಮಾದರಿಯಲ್ಲಿ ವಾರ್ಷಿಕ ವೇಳಾಪಟ್ಟಿ ಪ್ರಕಟಿಸಬೇಕು ಎಂದು ಆಗ್ರಹಿಸಿದ್ದಾರೆ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ನಡೆದ ಹಗರಣದ ವಿಚಾರಣೆಯನ್ನು ಶೀಘ್ರವಾಗಿ ಮುಗಿಸಿ 545 ಮತ್ತು 402 PSI ಅಧಿಸೂಚನೆಯ ಪರೀಕ್ಷೆಯನ್ನು ಅತಿ ಶೀಘ್ರದಲ್ಲಿ ನಡೆಸಬೇಕು. ಪೊಲೀಸ್ ಕಾಸ್ಟೇಬಲ್ ಪರೀಕ್ಷೆಗೆ ಅರ್ಹತಾ ವಯೋಮಿತಿಯನ್ನು ಹೆಚ್ಚಿಸಲು ಆಗ್ರಹಿಸುತ್ತೇವೆ ಎಂದಿದ್ದಾರೆ.
KEA ನಡೆಸಿದ KPTCL ಪರೀಕ್ಷೆಯ ಹಗರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಹಾಗೂ ರಾಜಸ್ಥಾನ ಮಾದರಿಯಲ್ಲಿ ಪರೀಕ್ಷಾ ಅಕ್ರಮದಲ್ಲಿ ಭಾಗವಹಿಸಿದವರಿಗೆ ಕಠಿಣ ಜೈಲು ಶಿಕ್ಷೆ ಮತ್ತು ದಂಡವನ್ನು ವಿಧಿಸಲು ಮಸೂದೆಯನ್ನು ಜಾರಿಗೆ ತರಬೇಕೆಂದು ಸರಕಾರಕ್ಕೆ ಆಗ್ರಹಿಸಿ ಪ್ರತಿಭಟಿಸಲಿದ್ದೇವೆ ಎಂದು ತಿಳಿಸಿದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243