Connect with us

ದಿನದ ಸುದ್ದಿ

ದಾವಣಗೆರೆ | ಮತದಾರರ ಅಂತಿಮ ಪಟ್ಟಿ ಪ್ರಕಟ : ಮತದಾರರ ಪಟ್ಟಿ ಪರಿಷ್ಕರಣೆ ನಂತರ 17,276 ಮತದಾರರ ಸೇರ್ಪಡೆ

Published

on

ಸುದ್ದಿದಿನ,ದಾವಣಗೆರೆ : ಭಾವಚಿತ್ರವಿರುವ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಂತರದ ಅಂತಿಮ ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ಪ್ರಕಟಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ವೇಳೆ 17,276 ಮತದಾರರು ಹೆಚ್ಚಳವಾಗಿದ್ದಾರೆ. ಪರಿಷ್ಕರಣೆಗೆ ಮುಂಚೆ 13,88,434 ಮತದಾರರಿದ್ದರು ಎಂದು ಹೇಳಿದರು.

ಪರಿಷ್ಕರಣೆ ನಂತರ ಜಗಳೂರು ವಿಧಾನಸಭಾ ಕ್ಷೇತ್ರದಲ್ಲಿ 1,89,209, ಹರಿಹರದಲ್ಲಿ 2,02,813, ದಾವಣಗೆರೆ ಉತ್ತರದಲ್ಲಿ 2,32,014, ದಕ್ಷಿಣದಲ್ಲಿ 2,04,442, ಮಾಯಕೊಂಡದಲ್ಲಿ 1,87,676, ಚನ್ನಗಿರಿಯಲ್ಲಿ 1,95,797 ಹಾಗೂ ಹೊನ್ನಾಳಿಯಲ್ಲಿ 1,93,763 ಮತದಾರರಿದ್ದಾರೆ.
ಪುರುಷ ಮತದಾರರ ಸಂಖ್ಯೆ 7,05,23, ಮಹಿಳಾ ಮತದಾರರು 7,00,357 ಹಾಗೂ ಇತರರು 120. ಜಿಲ್ಲೆಯಲ್ಲಿ ಪ್ರತಿ ಸಾವಿರ ಪುರುಷ ಮತದಾರರಿಗೆ 993 ಮಹಿಳಾ ಮತದಾರರಿದ್ದಾರೆ ಎಂದವರು ಹೇಳಿದರು.

ಜಿಲ್ಲೆಯಲ್ಲಿ ಒಟ್ಟು 7 ವಿಧಾನಸಭಾ ಕ್ಷೇತ್ರಗಳಿದ್ದು, 103-ಜಗಳೂರು ವಿಧಾನಸಭಾ ಕ್ಷೇತ್ರದಲ್ಲಿ 262 ಮತಗಟ್ಟೆಗಳು, 262 ಮತಗಟ್ಟೆ ಅಧಿಕಾರಿಗಳು, 26 ಮೇಲ್ವಿಚಾರಕರು, 105-ಹರಿಹರ ವಿಧಾನಸಭಾ ಕ್ಷೇತ್ರದಲ್ಲಿ 228 ಮತಗಟ್ಟೆಗಳು, 228 ಮತಗಟ್ಟೆ ಅಧಿಕಾರಿಗಳು, 24 ಮೇಲ್ವಿಚಾರಕರು, 106-ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ 242 ಮತಗಟ್ಟೆಗಳು, 242 ಅಧಿಕಾರಿಗಳು, 23 ಮೇಲ್ವಿಚಾರಕರು, 107-ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 212 ಮತಗಟ್ಟೆಗಳು, 212 ಮತಗಟ್ಟೆ ಅಧಿಕಾರಿಗಳು, 20 ಮೇಲ್ವಿಚಾರಕರು, 108-ಮಾಯಕೊಂಡ ವಿಧಾನಸಭಾ ಕ್ಷೇತ್ರದಲ್ಲಿ 240 ಮತಗಟ್ಟೆಗಳು, 240 ಮತಗಟ್ಟೆ ಅಧಿಕಾರಿಗಳು, 24 ಮೇಲ್ವಿಚಾರಕರು, 109-ಚನ್ನಗಿರಿ ವಿಧಾನಸಭಾ ಕ್ಷೇತ್ರದಲ್ಲಿ 254 ಮತಗಟ್ಟೆಗಳು, 254 ಮತಗಟ್ಟೆ ಅಧಿಕಾರಿಗಳು, 25 ಮೇಲ್ವಿಚಾರಕರು, ಮತ್ತು 110-ಹೊನ್ನಾಳಿ ವಿಧಾನಸಭಾ ಕ್ಷೇತ್ರದಲ್ಲಿ 245 ಮತಗಟ್ಟೆಗಳು, 245 ಮತಗಟ್ಟೆ ಅಧಿಕಾರಿಗಳು, 24 ಮೇಲ್ವಿಚಾರಕ ಅಧಿಕಾರಿಗಳನ್ನು ಹೊಂದಿದ್ದು, ಒಟ್ಟಾರೆಯಾಗಿ 1683 ಮತಗಟ್ಟೆಗಳು, 1683 ಮತಗಟ್ಟೆ ಅಧಿಕಾರಿಗಳು, 166 ಮೇಲ್ವಿಚಾರಕರ ಅಧಿಕಾರಿಗಳನ್ನು ಒಳಗೊಂಡಿದೆ ಎಂದು ಹೇಳಿದರು.

ಜಗಳೂರು ವಿಧಾನಸಭಾ ಕ್ಷೇತ್ರದ ಮತದಾರರ ನೊಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳ ವಿವರ: 103-ಜಗಳೂರು ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿಯಾಗಿ ಉಪವಿಭಾಗದ ಉಪವಿಭಾಗಾಧಿಕಾರಿ ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಯಾಗಿ ಜಗಳೂರು ತಹಶೀಲ್ದಾರ್ ದೂ.ಸಂ. 08196-227242.

105-ಹರಿಹರ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ನೋಂದಣಾಧಿಕಾರಿಯಾಗಿ ಜಿಲ್ಲಾ ಉಪ ವಿಭಾಗಾಧಿಕಾರಿ ಮತ್ತು ಸಹಾಯಕ ಮತದಾರರ ನೊಂದಣಾಧಿಕಾರಿಯಾಗಿ ಹರಿಹರ ತಹಶೀಲ್ದಾರ್ ದೂ. ಸಂ.08192-242777

106-ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ನೋಂದಣಾಧಿಕಾರಿಯಾಗಿ ಮಹಾನಗರ ಪಾಲಿಕೆ ಆಯುಕ್ತರು ಮತ್ತು ಸಹಾಯಕ ನೊಂದಣಾಧಿಕಾರಿಯಾಗಿ ಮಹಾನಗರ ಪಾಲಿಕೆ ಕಂದಾಯ ಅಧಿಕಾರಿ ದೂ.ಸಂ.08192-236566

107-ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ನೋಂದಣಾಧಿಕಾರಿಯಾಗಿ ಮಹಾನಗರ ಪಾಲಿಕೆ ಆಯುಕ್ತರು ಮತ್ತು ಸಹಾಯಕ ಮತದಾರರ ನೋಂದಣಾಧಿಕಾರಿಯಾಗಿ ಮಹಾನಗರ ಪಾಲಿಕೆ ಪರಿಷತ್ ಕಾರ್ಯದರ್ಶಿ ದೂ.ಸಂ.08192-236566

108- ಮಾಯಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ನೋಂದಣಾಧಿಕಾರಿಯಾಗಿ ದಾವಣಗೆರೆ ಉಪ ವಿಭಾಗಾಧಿಕಾರಿ ಮತ್ತು ಸಹಾಯಕ ಮತದಾರರ ನೋಂದಣಾಧಿಕಾರಿಯಾಗಿ ತಹಶೀಲ್ದಾರ್ ದೂ. ಸಂ. 08192-235344

109-ಚನ್ನಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ನೋಂದಣಾಧಿಕಾರಿಯಾಗಿ ಹೊನ್ನಾಳಿಯ ಉಪವಿಭಾಗಾಧಿಕಾರಿ ಮತ್ತು ಸಹಾಯಕ ಮತದಾರರ ನೋಂದಣಾಧಿಕಾರಿಯಾಗಿ ಚನ್ನಗಿರಿ ತಹಶೀಲ್ದಾರ್ ದೂ.ಸಂ.08189-228025

110-ಹೊನ್ನಾಳಿ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ನೋಂದಣಾಧಿಕಾರಿಯಾಗಿ ಹೊನ್ನಾಳಿಯ ಉಪ ವಿಭಾಗಾಧಿಕಾರಿ ಮತ್ತು ಸಹಾಯಕ ಮತದಾರರ ನೋಂದಣಾಧಿಕಾರಿಯಾಗಿ ಹೊನ್ನಾಳಿ ತಹಶೀಲ್ದಾರ್ ದೂ. ಸಂ. 081888-251025

ಪ್ರತಿಯೊಬ್ಬ ಮತದಾರನು ಅಂತಿಮ ಮತದಾರರ ಪಟ್ಟಿಯಲ್ಲಿ ತನ್ನ ಹೆಸರಿನ ನೋಂದಣಿ ಪರಿಶೀಲಿಸಿಕೊಳ್ಳಬಹುದು. ಎಫಿಕ್ ಹೊಂದಿರುವ ಮತದಾರರು ಹಾಗೂ ಹಿಂದಿನ ಸಾಲಿನ ಮತದಾರರ ಪಟ್ಟಿಯಲ್ಲಿ ಹೆಸರಿದ್ದ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿರುವ ಬಗ್ಗೆ ಮತ್ತೊಮ್ಮೆ ಪರಿಶೀಲನೆ ನಡೆಸಿ ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಬಗ್ಗೆ ದೃಡಪಡಿಸಿಕೊಳ್ಳಬಹುದು. ಒಂದು ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಮಾತ್ರ ಹೆಸರು ನೊಂದಾಯಿತಿಸಿಕೊಂಡಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು.

ಭಾರತ ಚುನಾವಣಾ ಆಯೋಗದ ಸುತ್ತೋಲೆಯಂತೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ತಿದ್ದುಪಟ್ಟಿಗೆ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ರ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕ್ಕೆ 10 ದಿನದ ಮುಂಚಿನವರೆಗೂ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಮತದಾರರ ಪಟ್ಟಿಯಲ್ಲಿ ಈವರೆಗೆ ನೋಂದಣಿಯಾಗದ ಹಾಗೂ ದಿ:01.01.2024ಕ್ಕೆ 18 ವರ್ಷ ಪೂರ್ಣಗೊಳ್ಳುವ ಯುವ ಮತದಾರರು ತಮ್ಮ ಹೆಸರನ್ನು ನೊಂದಾಯಿಸಲು ನಿರ್ದಿಷ್ಟ ಪಡಿಸಿದ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದು.
ಮತದಾರರ ಹೆಸರು ನೋಂದಾಯಿಸಲು ತೆಗೆದುಹಾಕಲು ತಿದ್ದುಪಡಿ ಮಾಡಲು ಹಾಗೂ ಸ್ಥಳಾಂತರಕ್ಕಾಗಿ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಸಲ್ಲಿಸಬಹುದು.

ಮೇಲ್ಕಂಡಂತೆ ಅರ್ಜಿಗಳನ್ನು ಆನ್‍ಲೈನ್ ಮುಖಾಂತರ Voter Helpline app (VHA) http://voterportal.eci.gov.in or http://www.nvsp.in ಸಲ್ಲಿಸಬಹುದು. ವಿದೇಶಗಳಲ್ಲಿ ಉದ್ಯೋಗ/ಶಿಕ್ಷಣದ ನಿಮಿತ್ತ ನೆಲೆಸಿರುವ ಭಾರತೀಯ ಪ್ರಜೆಗಳಿಗೆ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಲು ಅವಕಾಶ ಕಲ್ಪಿಸಲಾಗಿದೆ. ನಮೂನೆ 6ಎರಲ್ಲಿ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಂಬಧಿಸಿದ ಮತದಾರರ ನೋಂದಾಣಾಧಿಕಾರಿಗಳಿಗೆ ಅಂಚೆ/ಆನ್ ಲೈನ್ ಮೂಲಕ ಸಲ್ಲಿಸಿ ಹೆಸರನ್ನು ನೋಂದಾಯಿಸಿಕೊಳ್ಳಬಹುದು.

ಒಬ್ಬ ಮತದಾರ ಒಂದು ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಮಾತ್ರ ಹೆಸರು ನೋಂದಾಯಿಸಿಕೊಳ್ಳಬೇಕು ಹಾಗೂ ಮತದಾರರ ಪಟ್ಟಿಯಲ್ಲಿ ಈವರೆಗೆ ನೋಂದಣಿ ಯಾಗದ ಹಾಗೂ ದಾರರು ತಮ್ಮ ಹೆಸರನ್ನು ನೋಂದಾಯಿಸಲು ನಿರ್ದಿಷ್ಟಪಡಿಸಿದ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮತದಾರರ ಉಚಿತ ಸಹಾಯವಾಣಿ 1950 ಅಥವಾ 08192-272953 ನ್ನು ಸಂಪರ್ಕಿಸಬಹುದೆಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್, ಉಪವಿಭಾಗಾಧಿಕಾರಿ ದುರ್ಗಾಶ್ರೀ, ಮಹಾನಗರಪಾಲಿಕೆ ಆಯುಕ್ತರಾದ ವಿಶ್ವನಾಥ ಮುದ್ದಜ್ಜಿ, ಚುನಾವಣಾ ಸಮನ್ವಯ ಅಧಿಕಾರಿ ರೇಷ್ಮ ಹಾನಗಲ್ ಇತರರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ “ಕುಕಿಂಗ್ ವಿಥೌಟ್ ಫೈರ್” ಎಂಬ ಬೆಂಕಿ ರಹಿತ ಆಹಾರ ತಯಾರಿ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಹಲವಾರು ತಂಡಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ಅಂಗವಾಗಿ ಆಹಾರ ಮೇಳವೂ ಏರ್ಪಡಿಸಲಾಯಿತು. ವಿದ್ಯಾರ್ಥಿನಿಯರು ಕಾರಟ್ ಹಲ್ವಾ, ಫ್ರೂಟ್ ಸಲಾಡ್, ಚುರಿ ಮುರಿ, ಮೊಸರು ಅವಲಕ್ಕಿ, ವಿವಿಧ ರುಚಿಯ ಜ್ಯೂಸ್‌ಗಳು, ಕೊಕೊನೆಟ್ ಬರ್ಫಿ, ಕುಕುಂಬರ್ ಬೋಟ್, ಟೊಮೇಟೊ ಚಾಟ್, ಆಪಲ್ ಪೇಡ ಮತ್ತು ಅವಲಕ್ಕಿ ಚಿತ್ರಾನ್ನ ಸೇರಿದಂತೆ ಹಲವಾರು ಪೌಷ್ಟಿಕ ಹಾಗೂ ರುಚಿಕರ ಆಹಾರಗಳನ್ನು ತಯಾರಿಸಿ ಪ್ರದರ್ಶನೆ ಮತ್ತು ಮಾರಾಟ ಮಾಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು ಪಾಲ್ಗೊಂಡು ಯಶಸ್ವಿ ಕಾರ್ಯಕ್ರಮವನ್ನಾಗಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ

Published

on

ಸುದ್ದಿದಿನ,ದಾವಣಗೆರೆ: ಜಿಲ್ಲೆಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್‌ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30, 2026 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ.

ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ.

ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಮತ್ತು ಪೂರಕ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಪೋಷಕರು ಈ ಜವಾಬ್ದಾರಿಯನ್ನು ಅರಿತು, ನಿಗದಿತ ಅವಧಿಯೊಳಗೆ ತಮ್ಮ ಮಕ್ಕಳ ಆಧಾರ್ ನವೀಕರಿಸುವ ಮೂಲಕ ಸರ್ಕಾರದ ಯೋಜನೆಗಳು ತಲುಪಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಹಿರಿಯ ಕ್ರಿಕೆಟ್ ಪಟು ಎನ್ಆರ್‌ಎಚ್ ರಮೇಶ್ ನಿಧನ

Published

on

ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್‌ಎಚ್‌ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್‌ನ ನಾಯಕನಾಗಿದ್ದ ಎನ್.ಆರ್‌.ಎಚ್‌.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್‌, 2ನೇ ಮೇನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.

90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್‌ ಬಾಲ್‌ ಕ್ರಿಕೆಟ್‌ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್‌ಎಚ್‌ ರಮೇಶ ನಿಧನಕ್ಕೆ ಎಫ್‌ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್‌ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್‌ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending