ದಿನದ ಸುದ್ದಿ

ಮಾರಿಷಸ್ ಪ್ರಧಾನಮಂತ್ರಿ ಪ್ರವಿಂದ್ ಕುಮಾರ್ ಜುಗ್ನೌತ್ ಇಂದು ಭಾರತಕ್ಕೆ ಆಗಮನ; ಗುಜರಾತ್, ಉತ್ತರಪ್ರದೇಶ ಭೇಟಿ

Published

on

ಸುದ್ದಿದಿನ ಡೆಸ್ಕ್ : ಮಾರಿಷಸ್ ಪ್ರಧಾನಮಂತ್ರಿ ಪ್ರವಿಂದ್ ಕುಮಾರ್ ಜುಗ್ನೌತ್ ಅವರು 8ದಿನಗಳ ಭೇಟಿಗಾಗಿ ಇಂದು ಭಾರತಕ್ಕೆ ಆಗಮಿಸಲಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಜುಗ್ನೌತ್ ಅವರು ಭಾರತಕ್ಕೆ ಭೇಟಿ ನೀಡಲಿದ್ದಾರೆ.

ಇದೇ 24ರ ವರೆಗೆ ಭಾರತ ಪ್ರವಾಸದಲ್ಲಿರುವ ಮಾರಿಷಸ್ ಪ್ರಧಾನಮಂತ್ರಿ, ಇದೇ 19ರಂದು, ವಿಶ್ವ ಆರೋಗ್ಯ ಸಂಸ್ಥೆ ಸಹಯೋಗದಲ್ಲಿ ಜಾಮ್‌ನಗರದಲ್ಲಿ ನಿರ್ಮಿಸಲಾಗುತ್ತಿರುವ ಸಾಂಪ್ರದಾಯಿಕ ವೈದ್ಯಕೀಯ ಜಾಗತಿಕ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಅಲ್ಲದೆ, ಮರುದಿನ ಗಾಂಧಿನಗರದಲ್ಲಿ ಆಯೋಜಿಸಿರುವ ಆಯುಷ್ ವಲಯದ ಜಾಗತಿಕ ಹೂಡಿಕೆ ಮತ್ತು ನಾವಿನ್ಯತೆಯ ಶೃಂಗಸಭೆಯಲ್ಲೂ ಅವರು ಪಾಲ್ಗೊಳ್ಳಲಿದ್ದಾರೆ. ಈ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸಹ ಭಾಗವಹಿಸಲಿದ್ದಾರೆ. ಗುಜರಾತ್ ಮತ್ತು ನವದೆಹಲಿಯ ಅಧಿಕೃತ ಭೇಟಿಯಲ್ಲದೆ, ಉತ್ತರ ಪ್ರದೇಶದ ವಾರಾಣಸಿಗೂ ಪ್ರವಿಂದ್ ಕುಮಾರ್ ಜುಗ್ನೌತ್ ಭೇಟಿ ನೀಡುವ ಕಾರ್ಯಕ್ರಮವಿದೆ.

| Pravind Jugnauth
Prime Minister of Mauritius

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version