ದಿನದ ಸುದ್ದಿ
ಮೇ 16 ಬುದ್ಧ ಪೂರ್ಣಿಮೆಯಂದು ಪ್ರಧಾನಿ ನರೇಂದ್ರ ಮೋದಿ ನೇಪಾಳಕ್ಕೆ ಭೇಟಿ
ಸುದ್ದಿದಿನ ಡೆಸ್ಕ್ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬುದ್ಧ ಪೂರ್ಣಿಮೆ ಅಂಗವಾಗಿ ನಾಡಿದ್ದು, ಸೋಮವಾರ ನೇಪಾಳದ ಲುಂಬಿನಿಗೆ ಭೇಟಿ ನೀಡಲಿದ್ದಾರೆ. ಬುದ್ಧನ ಜನ್ಮಸ್ಥಳವಾದ ಲುಂಬಿನಿಗೆ ಆಗಮಿಸುವಂತೆ ನೇಪಾಳ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಅವರ ಆಹ್ವಾನದ ಮೇರೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅಲ್ಲಿಗೆ ಭೇಟಿ ನೀಡುತ್ತಿದ್ದಾರೆ.
2014ರಲ್ಲಿ ಪ್ರಧಾನಿಯಾದ ನಂತರ ನರೇಂದ್ರ ಮೋದಿ ಅವರ 5ನೇ ನೇಪಾಳ ಭೇಟಿ ಇದಾಗಿದೆ. ಭೇಟಿ ವೇಳೆ ಅವರು ಲುಂಬಿನಿಯ ಮಾಯಾದೇವಿ ದೇವಸ್ಥಾನದಲ್ಲಿ ಪೂಜೆ ನೆರವೇರಿಸಲಿದ್ದಾರೆ. ಬಳಿಕ ಲುಂಬಿನಿ ಅಭಿವೃದ್ಧಿ ಟ್ರಸ್ಟ್ ಆಯೋಜಿಸಿರುವ ಬುದ್ಧ ಜಯಂತಿ ಕಾರ್ಯಕ್ರಮ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ನಂತರ ಬೌದ್ಧ ಸಂಸ್ಕೃತಿ ಮತ್ತು ಪಾರಂಪರಿಕ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಗವಹಿಸಲಿದ್ದು, ನಂತರ ಅಲ್ಲಿನ ಪ್ರಧಾನಿಯೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243