ದಿನದ ಸುದ್ದಿ
ದಾವಣಗೆರೆ | ಕರ್ನಾಟಕ ಶ್ರಮಿಕ ಶಕ್ತಿಯಿಂದ ಮೇ ದಿನ ಆಚರಣೆ
ಸುದ್ದಿದಿನ,ದಾವಣಗೆರೆ : ಈ ಕೆಂಪು ಬಾವುಟ ಯಾವುದೇ ಶೋಕಿಗಾಗಿ ಹುಟ್ಟಿದಲ್ಲ ಇದು ಶ್ರಮಿಕರ ಉದ್ಧಾರಕ್ಕಾಗಿ ಹುಟ್ಟಿದ್ದು ಎಂದು ಆವರಗೆರೆ ಉಮೇಶ್ ಅವರು ಹೇಳಿದರು.
ಜಿಲ್ಲೆಯ ಕರ್ನಾಟಕ ಶ್ರಮಿಕ ಶಕ್ತಿ ಯಿಂದ ಇಂದು ಮೇ ದಿನವನ್ನು ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಮಾತಾಡಿದ ಅವರು, ದೇಶದ 90%ರಷ್ಟು ಶ್ರಮಿಕವರ್ಗ ಇದೆ. ದೇಶದ ಭವಿಷ್ಯ ನಿಮ್ಮ ಕೈಯಲ್ಲಿ ಇದೆ ನೀವು ಮನಸ್ಸು ಮಾಡಿದರೆ ದೇಶವನ್ನು ಸರಿಯಾದ ರೀತಿಯಲ್ಲಿ ನಡೆಸಬಹುದು.1986 ರಲ್ಲಿ ಲಕ್ಷಾಂತರ ಕಾರ್ಮಿಕರ ಪ್ರಾಣ ತ್ಯಾಗದಿಂದ ಹುಟ್ಟಿದ ದಿನ ಮೇದಿನ ವಾಗಿದೆ ಎಂದರು.
ಚುನಾವಣೆಯಲ್ಲಿ ನಿಮ್ಮ ಜವಾಬ್ದಾರಿ ಯನ್ನು ಹೊತ್ತು ಒಳ್ಳೆಯ ಸರ್ಕಾರವನ್ನು ರಚಿಸಬೇಕು. ಜನಪ್ರತಿನಿಧಿಗಳು ಎನ್ನಿಸಿಕೊಂಡವರ ಬೇಜವಾಬ್ದಾರಿ ತನದಿಂದ ಬಡವರಿಗೆ ಸಿಗಬೇಕಾದ ಸೌಲಭ್ಯ ಸಿಗುತ್ತಿಲ್ಲ. ಆದ್ದರಿಂದ ಸಂಘಟನೆಯ ಸಂಪರ್ಕದಲ್ಲಿರಬೇಕು ಮತ್ತು ಸಂಘಟನೆ ಜೊತೆ ನೀವು ಗಟ್ಟಿಯಾಗಿ ನಿಲ್ಲಬೇಕು, ಸಂಘಟನೆ ಹೋರಾಟವೇ ಕಾರ್ಮಿಕರಿಗೆ ಜೀವಾಳವಾಗಿದೆ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದರು
ಕಾರ್ಯಕ್ರಮದಲ್ಲಿ ಹಿರಿಯ ಅಸಂಘಟಿತ ಕಾರ್ಮಿಕರಿಗೆ ಸನ್ಮಾನ ಮಾಡಿ ಗೌರವಿಸಲಾಯಿತು. ಹಾಗೆ ಟೈಲ್ ಮತ್ತು ಮನೆಕೆಲಸ ಕಾರ್ಮಿಕರಿಗೆ ಗುರುತಿನ ಚೀಟಿ ಯನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಆದೀಲ್ ಖಾನ್, ಪವಿತ್ರ ಅಶ್ಫಕ್, ಸತೀಶ್ ಅರವಿಂದ್, ಅಣ್ಣಪ್ಪ, ಏಜಾಜ್, ಹಳದಪ್ಪ, ಫರಾನ್, ಗಿರಿಯಪ್ಪ, ಸುಶೀಲಮ್ಮ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


