ದಿನದ ಸುದ್ದಿ
ಅಂಬೇಡ್ಕರ್ ‘370ನೇ ವಿಧಿ’ ಪರವಾಗಿರಲಿಲ್ಲ : ಮಾಯಾವತಿ
ಸುದ್ದಿದಿನ,ಲಖ್ನೋ: ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು, ಸದಾ ಸಮಾನತೆ, ಏಕತೆ ಮತ್ತು ದೇಶದ ಅಖಂಡತೆಯ ಪರವಾಗಿದ್ದರು. ಜಮ್ಮು-ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯನ್ವಯ ಸವಲತ್ತು ಕೊಡುವುದರ ಪರವಾಗಿ ಅವರು ಇರಲಿಲ್ಲ. ಆದ್ದರಿಂದ ಸಂವಿಧಾನದ 370ನೇ ವಿಧಿ ರದ್ದನ್ನು ಬಿಎಸ್ಪಿ ಬೆಂಬಲಿಸಿತು ಎಂದು ಮಾಯಾವತಿ ಟ್ವೀಟ್ ಮಾಡಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರದ ನಡೆಯನ್ನು ಬಿಎಸ್ಪಿ ಬೆಂಬಲಿಸಿದೆ.
ಆದರೆ, ದೇಶದಲ್ಲಿ ಸಂವಿಧಾನ ಜಾರಿಗೆ ಬಂದು 69 ವರ್ಷಗಳ ನಂತರ 370ನೇ ವಿಧಿಯನ್ನು ರದ್ದುಗೊಳಿಸಲಾಗಿದೆ. ಈಗ ಅಲ್ಲಿ ಪರಿಸ್ಥಿತಿ ಸಾಮಾನ್ಯ ಸ್ಥಿತಿಗೆ ಬರಲು ಸಮಯ ಹಿಡಿಯುತ್ತದೆ. ಇದಕ್ಕಾಗಿ ಕೆಲವು ಸಮಯ ಕಾಯುವುದು ಉತ್ತಮ. ಇದನ್ನು ಮಾನ್ಯ ಕೋರ್ಟ್ ಕೂಡ ಮಾನ್ಯ ಮಾಡಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
1. जैसाकि विदित है कि बाबा साहेब डा. भीमराव अम्बेडकर हमेशा ही देश की समानता, एकता व अखण्डता के पक्षधर रहे हैं इसलिए वे जम्मू-कश्मीर राज्य में अलग से धारा 370 का प्रावधान करने के कतई भी पक्ष में नहीं थे। इसी खास वजह से बीएसपी ने संसद में इस धारा को हटाये जाने का समर्थन किया।
— Mayawati (@Mayawati) August 26, 2019
ಇಂತಹ ಸಮಯದಲ್ಲಿ ಅನುಮತಿ ಇಲ್ಲದೆ ಕಾಂಗ್ರೆಸ್ ಅಥವಾ ಅನ್ಯಪಕ್ಷಗಳ ನಾಯಕರು ಭೇಟಿ ನೀಡುವುದು ಕೇಂದ್ರ ಅಥವಾ ಅಲ್ಲಿಯ ರಾಜ್ಯಪಾಲರಿಗೆ ರಾಜಕೀಯ ಮಾಡಲು ನೀಡುವ ಅವಕಾಶವಲ್ಲವೇ? ಎಂದು ಪ್ರಶ್ನಿಸಿರುವ ಅವರು, ಅಲ್ಲಿಗೆ ಹೋಗುವ ಮುನ್ನ ಈ ಕುರಿತು ಕೂಡ ಯೋಚಿಸಿದ್ದರೆ ಉಚಿತವಾಗಿರುತ್ತಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.
2. लेकिन देश में संविधान लागू होने के लगभग 69 वर्षों के उपरान्त इस धारा 370 की समाप्ति के बाद अब वहाँ पर हालात सामान्य होने में थोड़ा समय अवश्य ही लगेगा। इसका थोड़ा इंतजार किया जाए तो बेहतर है, जिसको माननीय कोर्ट ने भी माना है।
— Mayawati (@Mayawati) August 26, 2019
3. ऐसे में अभी हाल ही में बिना अनुमति के कांग्रेस व अन्य पार्टियों के नेताओं का कश्मीर जाना क्या केन्द्र व वहां के गवर्नर को राजनीति करने का मौका देने जैसा इनका यह कदम नहीं है? वहाँ पर जाने से पहले इस पर भी थोड़ा विचार कर लिया जाता, तो यह उचित होता।
— Mayawati (@Mayawati) August 26, 2019
ಕೃಪೆ : ಡೆಮಾಕ್ರಟಿಕ್ ನ್ಯೂಸ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಶೀಘ್ರದಲ್ಲೇ ದೈಹಿಕ ಶಿಕ್ಷಕರ ನೇಮಕ : ಸಚಿವ ಎಸ್. ಮಧು ಬಂಗಾರಪ್ಪ

ಸುದ್ದಿದಿನ ಡೆಸ್ಕ್ : ಪ್ರಾಥಮಿಕ ಶಾಲಾ ವಿಭಾಗದಲ್ಲಿ ಖಾಲಿ ಇರುವ 2120 ದೈಹಿಕ ಶಿಕ್ಷಕರು ಹಾಗೂ ಪ್ರೌಢಶಾಲಾ ವಿಭಾಗದಲ್ಲಿ 2500 ಹುದ್ದೆಗಳ ಭರ್ತಿ ಪ್ರಸ್ತಾವನೆ ಆರ್ಥಿಕ ಇಲಾಖೆಯ ಸಮಾಲೋಚನೆಯಲ್ಲಿದೆ.
ಪದವಿ ಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಕರನ್ನು ಆದಷ್ಟು ಶೀಘ್ರದಲ್ಲಿ ನೇಮಕ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ವಿಧಾನಪರಿಷತ್ತಿಗೆ ಸೋಮವಾರ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ

ಸುದ್ದಿದಿನ, ಚನ್ನಗಿರಿ (ಬಸವಾಪಟ್ಟಣ) : ಭಾರತೀಯ ಸಮಾಜದಲ್ಲಿ ಮೀಸಲಾತಿಯಿಂದ ಮಾತ್ರ ಮಹಿಳಾ ಪ್ರಗತಿ ಸಾಧ್ಯವಿಲ್ಲ. ಅವಳಿಗೆ ಪುರುಷನಂತೆ ಸಮಾನವಾದ ಪ್ರಾತಿನಿಧ್ಯ ನೀಡಿದಲ್ಲಿ ಮಾತ್ರವೇ ಮಹಿಳಾ ಪ್ರಗತಿ ಸಾಧ್ಯ. ಆಗ ಮಾತ್ರವೇ ಸದೃಢವಾದ ಭಾರತ ನಿರ್ಮಾಣವಾಗಲು ಸಾಧ್ಯ ಎಂದು ಸಂತೆಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ಜ್ಯೋತಿಯವರು ಅಭಿಪ್ರಾಯ ವ್ಯಕ್ತಪಡಿಸಿದರು.
ಜನತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಐಕ್ಯತ ಸಪ್ತಾಹದ ಅಡಿಯಲ್ಲಿ ‘ಭಾರತೀಯ ಸಮಾಜ ಹಾಗೂ ರಾಷ್ಟ್ರದ ಪ್ರಗತಿಯಲ್ಲಿ ಮಹಿಳೆಯರ ಪ್ರಾಮುಖ್ಯತೆ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಮಹಿಳೆಗೆ ಎಲ್ಲಿಯವರೆಗೆ ಮುಕ್ತವಾದ ಪ್ರಾತಿನಿಧ್ಯ ಲಭಿಸುವುದಿಲ್ಲವೋ ಅಲ್ಲಿಯವರೆಗೆ ಎಷ್ಟೇ ಕಾಯ್ದೆ, ಕಾನೂನುಗಳು ಜಾರಿಯಾದರೂ ಮಹಿಳೆಯರ ಬದುಕಿನಲ್ಲಿ ಸಮಗ್ರ ಬದಲಾವಣೆ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಪ್ರಾಂಶುಪಾಲರಾದ ಡಾ.ಎಂ.ಆರ್. ಲೋಕೇಶ್ ಅವರು ಮಾತನಾಡಿ ಭಾರತೀಯ ಸಮಾಜದಲ್ಲಿ ಹೆಣ್ಣು ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳುವುದು ಕೇವಲ ಆರ್ಥಿಕತೆಯಿಂದ ಸಾಧ್ಯವಿಲ್ಲ ಎಂದರು.
ನೈತಿಕತೆ, ಸಂಸ್ಕಾರವು ಕೂಡ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಹೀಗಾಗಿಯೇ ಶರಣರು ಗಂಡು-ಹೆಣ್ಣು ಎಂಬ ಬೇಧವನ್ನು ಮೆಟ್ಟಿ ನಿಂತು ‘ಒಳಗೆ ಸುಳಿವ ಆತ್ಮ ಹೆಣ್ಣು ಅಲ್ಲ, ಗಂಡು ಅಲ್ಲ’ ಎಂಬ ತಾತ್ವಿಕತೆಯ ಮೂಲಕ ಸರ್ವರನ್ನು ಸಮಾನವಾಗಿ ಕಾಣುವಂತಹ ಸಮಾಜಕ್ಕಾಗಿ ಶ್ರಮಿಸಿದರು. ಭಾರತದ ನೆಲದಲ್ಲಿ ಶರಣರು, ದಾರ್ಶನಿಕರು ರೂಪಿಸಿಕೊಟ್ಟ ಮಾರ್ಗದಲ್ಲಿ ನಡೆದು ಇಂದಿನ ಮಹಿಳೆಯರು ಸಬಲರಾಗಬೇಕು ಎಂಬುದಾಗಿ ತಿಳಿಸಿದರು.
ಸಮಾಜಶಾಸ್ತ್ರದ ಮುಖ್ಯಸ್ಥರಾದ ಡಾ.ಎ.ಡಿ.ಬಸವರಾಜ್ ಅವರು ಪ್ರಾಸ್ತವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಬೋಧಕರಾದ ಹನುಮಂತಪ್ಪ, ಪ್ರಕಾಶ್, ಮಧುಸೂಧನ್, ರೆಹಮತ್ಬಿ, ಸಂದೀಪ್ ಮುಂತಾದವರು ಹಾಜರಿದ್ದರು. ಕಾರ್ಯಕ್ರಮವನ್ನು ಗೋವಿಂದರೆಡ್ಡಿ ಅವರು ನಿರೂಪಿಸಿದರು. ವಿದ್ಯಾರ್ಥಿನಿ ಸೌಂದರ್ಯ ಸ್ವಾಗತಿಸಿದರು, ಯಶೋಧ, ಸಹನಾ ಪ್ರಾರ್ಥಿಸಿದರು, ರಕ್ಷಿತ ವಂದಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್

ಸುದ್ದಿದಿನ,ದಾವಣಗೆರೆ : ಸಂವಿಧಾನ ಪೂರ್ವದ ಭಾರತದ ಸ್ಥಿತಿಗತಿ ಹಾಗೂ ಸಂವಿಧಾನದ ನಂತರ ಭಾರತದಲ್ಲಾದ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಬದಲಾವಣೆಗ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹಾಗೆಯೇ ಸಂವಿಧಾನ ರಚನೆ ಮಾಡುವ ಸಮಯದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಮುಂದಿದ್ದ ಬಿಕ್ಕಟ್ಟುಗಳನ್ನು ಏಕಾಂತಗಿರಿ ಟ್ರಸ್ಟ್ ನ ಕಾರ್ಯದರ್ಶಿ ಡಾ.ಕೆ.ಎ.ಓಬಳೇಶ್ ಅವರು ತಿಳಿಸಿಕೊಟ್ಟರು.
ನಗರದ ಪ್ರೇರಣ ಮಕ್ಕಳ ಆರೈಕೆ ಕೇಂದ್ರದಲ್ಲಿ ವಿ.ಬಿ.ಪಿ ಫೌಂಡೇಷನ್ ಹಾಗೂ ಏಕಾಂತಗಿರಿ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆಯನ್ನು ಭಾನುವಾರ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ದೇವನಗರಿ ಸುದ್ಧಿದಿನ ಪತ್ರಿಕೆಯ ಸಂಪಾದಕರಾದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದು, ವಿದ್ಯಾರ್ಥಿಗಳಿಗೆ ಭಾರತದ ಸಂವಿಧಾನದ ಕಳಶದಂತಿರುವ ಸಂವಿಧಾನ ಪೀಠಿಕೆಯ ಮಹತ್ವವನ್ನು ಪರಿಚಯಿಸುವ ಮೂಲಕ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸ್ಕೈ ಲೈನ್ ಸಂಸ್ಥೆಯ ಸಂಸ್ಥಾಪಕರಾದ ಬಾಲಚಂದ್ರ ಅವರು ಸಂವಿಧಾನ ಇರುವ ಕಾಲದಲ್ಲಿಯೇ ದಲಿತರು, ದಮನಿತರು ಹಾಗೂ ಮಹಿಳೆಯರ ಸ್ಥಿತಿಯು ಅತ್ಯಂತ ಶೋಚನೀಯವಾಗಿದೆ. ಆದರೆ ಸಂವಿಧಾನವಿಲ್ಲದ ಭಾರತವನ್ನು ನಾವು ಊಹಿಸಿಕೊಳ್ಳುವುದು ಕಷ್ಟ ಸಾಧ್ಯ ಎಂಬುದಾಗಿ ತಿಳಿಸಿದರು.
ಪ್ರೇರಣ ಆರೈಕೆ ಕೇಂದ್ರದ ಶಿಕ್ಷಕರಾದ ಕುಮಾರ್ ಅವರು ಮಾತನಾಡಿ, ಸರ್ವರನ್ನು ಸಮಾನವಾಗಿ ಕಾಣುವ ಸಂವಿಧಾನವು ನಮ್ಮೆಲ್ಲರ ಪವಿತ್ರ ಗ್ರಂಥ ಎಂಬುದಾಗಿ ತಿಳಿಸಿದರು. ಕುಮಾರಿ ಪೂಜಾ ಅವರು ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಪ್ರೇರಣ ಸಂಸ್ಥೆಯ ಮಕ್ಕಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
