ದಿನದ ಸುದ್ದಿ
ಪಠ್ಯ ಪುಸ್ತಕ ಪರಿಷ್ಕರಣೆ ಲೋಪ ಸರಿಪಡಿಸಲು ಕ್ರಮ : ಬಿ.ಸಿ.ನಾಗೇಶ್
ಸುದ್ದಿದಿನ ಡೆಸ್ಕ್ : ಪಠ್ಯ ಪುಸ್ತಕ ಪರಿಷ್ಕರಣೆ ವೇಳೆ ತಪ್ಪಾಗಿದ್ದನ್ನು ಸರಿಪಡಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಧಾರವಾಡದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಪದೋಷಗಳನ್ನು ಸರಿಪಡಿಸಲಾಗುವುದು, ಯಾವುದೇ ತಪ್ಪನ್ನು ಮುಚ್ಚಿಡಲು ಪ್ರಯತ್ನಿಸುವುದಿಲ್ಲ ಎಂದರು. ಈಗಾಗಲೇ ಶೇಕಡಾ 84 ರಷ್ಟು ಪುಸ್ತಕಗಳು ಕ್ಷೇತ್ರ ಶಿಕ್ಷಾಣಧಿಕಾರಿಗಳ ಕಚೇರಿ ತಲುಪಿದ್ದು, ಶೀಘ್ರದಲ್ಲಿಯೇ ಎಲ್ಲ ಪುಸ್ತಕಗಳನ್ನು ಪೂರೈಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ 27 ಸಾವಿರ ಅತಿಥಿ ಶಿಕ್ಷಕರನ್ನು ತೆಗೆದುಕೊಳ್ಳಲಾಗಿದೆ. ಮುಂಬರುವ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆಗೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಅವರು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243