ದಿನದ ಸುದ್ದಿ

ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಗಳ ನೇರ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ದೇಶನ

Published

on

ಸುದ್ದಿದಿನಡೆಸ್ಕ್:ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಗಳು ಮತ್ತು ಭದ್ರತಾ ಪಡೆಗಳ ಚಲನವಲನಗಳ ನೇರ ಪ್ರಸಾರ ಮಾಡದಂತೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯವು ಎಲ್ಲಾ ಮಾಧ್ಯಮ ವಾಹಿನಿಗಳಿಗೆ ಸಲಹೆ ನೀಡಿದೆ.

ರಾಷ್ಟ್ರೀಯ ಭದ್ರತೆಯನ್ನು ಕಾಪಾಡುವಲ್ಲಿ ಮಾಧ್ಯಮಗಳು, ಡಿಜಿಟಲ್ ವೇದಿಕೆಗಳು ಮತ್ತು ವ್ಯಕ್ತಿಗಳು ಪ್ರಮುಖ ಪಾತ್ರ ವಹಿಸುತ್ತಾರೆ. ರಕ್ಷಣಾ ಕಾರ್ಯಾಚರಣೆಗಳು ಅಥವಾ ಚಲನವಲನಗಳಿಗೆ ಸಂಬಂಧಿಸಿದ ಮೂಲ ಆಧಾರಿತ ಮಾಹಿತಿಯನ್ನು ಆಧರಿಸಿ ವರದಿ ಮಾಡುವುದನ್ನು ನಿಲ್ಲಿಸುವಂತೆ ಸಚಿವಾಲಯ ನಿರ್ದೇಶಿಸಿದೆ.

ಸೂಕ್ಷ್ಮ ಮಾಹಿತಿಯನ್ನು ಅಕಾಲಿಕವಾಗಿ ಬಹಿರಂಗಪಡಿಸುವುದು, ಕಾರ್ಯಾಚರಣೆಯ ಪರಿಣಾಮಕಾರಿತ್ವ ಮತ್ತು ಸಿಬ್ಬಂದಿಗಳ ಸುರಕ್ಷತೆಗೆ ಅಪಾಯವನ್ನುಂಟು ಮಾಡುತ್ತದೆ ಎಂದು ಸಚಿವಾಲಯ ಹೇಳಿದೆ.

Trending

Exit mobile version