Connect with us

ದಿನದ ಸುದ್ದಿ

ಮಾಧ್ಯಮ ಜ್ಞಾನ ಕುರಿತು ಹೊಸ ಕೋರ್ಸ್ ಸೇರ್ಪಡೆಗೆ ಕ್ರಮ: ಪ್ರೊ.ಎಸ್.ಆರ್.ನಿರಂಜನ ಅಭಿಮತ

Published

on

ಸುದ್ದಿದಿನ,ಬೆಂಗಳೂರು: ಇಂದಿನ ವಿದ್ಯಾರ್ಥಿಗಳಲ್ಲಿ ಮಾಧ್ಯಮ ಸಾಕ್ಷರತೆ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ. ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಮಾಧ್ಯಮ ಸಾಕ್ಷರತೆ, ಸಂವಹನ ಪ್ರಾಮುಖ್ಯತೆ ಕುರಿತಾದ ನವೀನವಾದ ನಾನಾ ಕೋರ್ಸ್‌ಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಕುರಿತು ಗಂಭೀರವಾಗಿ ಚಿಂತಿಸಲಿದೆಂದು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ‌.ಎಸ್.ಆರ್.ನಿರಂಜನ ಹೇಳಿದರು.

ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದ ಸುವರ್ಣ ಮಹೋತ್ಸವದ (1973-2023) ಪ್ರಯುಕ್ತ ‘ಮೀಡಿಯಾ ಸ್ಪಿಯರ್- 2024, “ಭಾರತೀಯ ಮಾಧ್ಯಮ ಉದ್ಯಮದ’ ರೂಪಾಂತರ” ರಾಷ್ಟ್ರೀಯ ಸಮ್ಮೇಳನವನ್ನು ಬೆಂಗಳೂರು ವಿವಿಯ ಸಂವಹನ ವಿಭಾಗ, ಭಾರತೀಯ ಸಂವಹನ ಕಾಂಗ್ರೆಸ್ (ಐಸಿಸಿ) ಹಾಗೂ ಕರ್ನಾಟಕ ರಾಜ್ಯ ಪತ್ರಿಕೋದ್ಯಮ ಮತ್ತು ಸಂವಹನ ಶಿಕ್ಷಕರ ಸಂಘ (ಕೆಎಸ್ ಜೆಸಿಟಿಎ) ಸಹಯೋಗದೊಂದಿಗೆ ಜ್ಞಾನಭಾರತಿ ಆವರಣದಲ್ಲಿರುವ ಪ್ರೊ.ವೆಂಕಟಗಿರಿಗೌಡ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅಡಿಯಲ್ಲಿ ಕೌಶಲ್ಯಧಾರಿತ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಮಾಧ್ಯಮ ಸಾಕ್ಷರತೆ ಮತ್ತು ಸಂವಹನ ಜ್ಞಾನ ಕೂಡ ಪ್ರಮುಖ ಕೌಶಲ್ಯವಾಗಿದ್ದು ವಿದ್ಯಾರ್ಥಿಗಳ ಪಠ್ಯಶಿಕ್ಷಣ ಕ್ರಮದಲ್ಲಿ ಮಾಧ್ಯಮ ಜ್ಞಾನವನ್ನು ಕೂಡ ವಿಷಯವಾಗಿ ಸೇರ್ಪಡಿಸಲಾಗುವುದೆಂದು ಭರವಸೆ ನೀಡಿದರು.

“ಮಾಧ್ಯಮ ಸಮಾಜದ ಬಹುಮುಖ್ಯ ಅಂಗವಾಗಿದ್ದು,
ಸಮಾಜದ ಗಟ್ಟಿಧ್ವನಿಯಾಗಿ, ಕನ್ನಡಿಯಾಗಿ ಕಾರ್ಯ ನಿರ್ವಹಿಸುತ್ತಿದೆ.1970-1980 ಅವಧಿಯ ದಶಕದ ಬಳಿಕ‌ ಮಾಧ್ಯಮ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳಾಗಿದೆ. ಹಾಗೆಯೇ ಒಂದು ಕಾಲದಲ್ಲಿ ನಿರ್ದಿಷ್ಟ ವಿಷಯದ ಕುರಿತು ಮಾಹಿತಿ ತಿಳಿದುಕೊಳ್ಳಲು ಅಷ್ಟೇ ಸೀಮಿತವಾಗಿದ್ದ ಮಾಧ್ಯಮ ಇಂದು ಬಹುದೊಡ್ಡ ಉದ್ಯಮವಾಗಿ ಬೆಳೆದುನಿಂತಿದೆ. ದೇಶದ ಆರ್ಥಿಕತೆಯ ಪ್ರಮುಖ ವಲಯವಾಗಿ ಮಾಧ್ಯಮ ನಿಂತಿದೆ. ಭಾರತದ ಜಿಡಿಪಿ ಏರಿಕೆಗೆ ಮನರಂಜನಾ ಮತ್ತು ಮಾಧ್ಯಮ ಕ್ಷೇತ್ರಗಳ ಕೊಡುಗೆ ಕೂಡ ಅಪಾರವಾಗಿದೆ.ಭಾರತದ ಮಾಧ್ಯಮ ಮನರಂಜನೆ, ಕ್ರೀಡೆ, ತಂತ್ರಜ್ಞಾನ, ಮುದ್ರಣ, ಡಿಜಿಟಲ್, ಸಾಮಾಜಿಕ ಜಾಲತಾಣ ಸೇರಿದಂತೆ ಅನೇಕ ರೂಪಾಂತರಗಳು ತಲೆ ಎತ್ತಿ ಬೃಹತ್ ಉದ್ಯಮವಲಯವಾಗಿದೆ.

ಮಾಧ್ಯಮ ಕ್ಷೇತ್ರ ಇಷ್ಟೆಲ್ಲಾ ಪ್ರಗತಿಯನ್ನು ಕಂಡಿದ್ದರೂ ವೃತ್ತಿಪರರ ಕೊರತೆ ಎದ್ದುಕಾಣುತ್ತಿದೆ. ವಿದ್ಯಾರ್ಥಿಗಳಲ್ಲಿ ಕೌಶಲ್ಯ, ಸಂವಹನದ ಕೊರತೆ ಕಾಡುತ್ತಿದೆ. ದೇಶದ ಮುಖ್ಯವಲಯದಲ್ಲಿ ಕಾರ್ಯನಿರ್ವಹಿಸುವ ವಿದ್ಯಾರ್ಥಿಗಳಲ್ಲಿ ಗುಣಮಟ್ಟ ಹೆಚ್ಚಿಸುವ ಪಾತ್ರ ವಿಶ್ವವಿದ್ಯಾಲಯ, ಶಿಕ್ಷಣ ಸಂಸ್ಥೆಗಳ ಮೇಲಿದೆ. ರಾಜ್ಯದ ಉನ್ನತ ಶಿಕ್ಷಣ ಪರಿಷತ್ತು ಕೂಡ ಈ ಬಗ್ಗೆ ಗಂಭೀರವಾಗಿ ಚಿಂತಿಸಲಿದೆ. ಪ್ರಜಾಪ್ರಭುತ್ವದ 4ನೇ ಅಂಗವಾಗಿರುವ ಮಾಧ್ಯಮದ ಪಾತ್ರ, ಶಕ್ತಿ, ಬಳಕೆ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಸಂವಹನ ವಿಭಾಗದ ವತಿಯಿಂದ ಈ ಕುರಿತು ಒಂದು ಪ್ರಸ್ತಾವನೆ ಸಲ್ಲಿಸುವಂತೆ ಸಲಹೆ ನೀಡಿದರು. ಇದರ ಬಗ್ಗೆ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನಲ್ಲಿ ಈ ಕುರಿತು ಚರ್ಚಿಸಿ ಅನುಷ್ಠಾನಕ್ಕೆ ಕ್ರಮ‌ ವಹಿಸುವುದಾಗಿ ಭರವಸೆ ಕೂಡ ನೀಡಿದರು. ವಿದ್ಯಾರ್ಥಿಗಳಲ್ಲಿ ಕೌಶಲ್ಯ ವೃದ್ದಿಸುವ ಗುರಿ ಹೊಂದಿರುವ ರಾಜ್ಯ ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸುವುದು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಕೆ. ರವಿ , ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಶೇಕ್ ಲತೀಫ್, ಬೆಂಗಳೂರು ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ. ಶ್ರೀನಿವಾಸ್ ಚೌಡಪ್ಪ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ. ಬಿ. ಶೈಲಶ್ರೀ, ಭೂಪಾಲ್ ನ ಪತ್ರಿಕೋದ್ಯಮ ಮತ್ತು ಸಂವಹನ ಮಖನ್ ಲಾಲ್ ಚತುರ್ವೇದಿ ರಾಷ್ಟ್ರೀಯ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಕೆ.ಜಿ. ಸುರೇಶ್, ಪಶ್ಚಿಮ ಬಂಗಾಳದ ವಿಶ್ವ ಭಾರತಿ ಕೇಂದ್ರೀಯ ವಿಶ್ವವಿದ್ಯಾಲಯದ ಮುಖ್ಯಸ್ಥರಾಗಿರುವ ಪ್ರೊ. ಬಿಪ್ಲಾಬ್ ಲೋಹೋ ಚೌದರಿ, (ಒಡಿಶಾ) ಭುವನೇಶ್ವರ್ ನ ಉತ್ಕಲ್ ವಿಶ್ವವಿದ್ಯಾಲಯದ ಮಾಧ್ಯಮ ಅಧ್ಯಯನ ಸಂಸ್ಥೆಯ ನಿರ್ದೇಶಕರಾದ ಪ್ರೊ. ಉಪೇಂದ್ರ ಪಾಢಿ, ವಿವಿಯ ಮತ್ತಿತರರು ಬೋಧಕ ಮತ್ತು ಭೋಧಕೇತರ ವರ್ಗದವರು, ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿ ಸಮೂಹ, ಉಪಸ್ಥಿತರಿದ್ದರು. ಕೊನೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು.


  • ಬೆಂಗಳೂರು ವಿಶ್ವವಿದ್ಯಾಲಯ ಸಂವಹನ ವಿಭಾಗ ಸುವರ್ಣ ಮಹೋತ್ಸವ ಆಚರಿಸುತ್ತಿರುವುದು ಸಂಭ್ರಮ ಮತ್ತು ಹೆಮ್ಮೆಯ ಕ್ಷಣ. ಭಾರತದಲ್ಲಿ ದೂರದರ್ಶನ ಉದ್ಯಮದ ಬೆಳವಣಿಗೆಗೆ ಬೆಂ‌‌ಗಳೂರು ವಿವಿಯ ಸಂವಹನ ವಿಭಾಗ ಪ್ರಮುಖ ಕಾರಣವಾಗಿದೆ. ದೇಶದಲ್ಲಿ ಪ್ರಥಮಬಾರಿಗೆ ದೂರದರ್ಶನ ಶಿಕ್ಷಣ ಆರಂಭಿಸಿದ ಕೀರ್ತಿಯನ್ನು ಹೊಂದಿದೆ.
    –ಪ್ರೊ.ಬಿ.ಕೆ. ರವಿ, ಕುಲಪತಿ, ಕೊಪ್ಪಳ ವಿಶ್ವವಿದ್ಯಾಲಯ, ಕೊಪ್ಪಳ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ

Published

on

ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.

ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್.‌ ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್‌. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.

ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್‌ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.

ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.

ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ

Published

on

ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್‌ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್‌ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್‌ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್‌ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್‌, ಚೇತನ್‌ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.

ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್‌ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್‌ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್‌ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.

ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending