Connect with us

ದಿನದ ಸುದ್ದಿ

ಮಾನಸಿಕ ಖಾಯಿಲೆಗಳಿಗೆ ಮಿದುಳಿನ ರಾಸಾಯನಿಕ ಏರುಪೇರು ಕಾರಣ : ಡಾ.ಆದಿತ್ಯ ಪಾಂಡುರಂಗಿ

Published

on

ಸುದ್ದಿದಿನ,ಧಾರವಾಡ : ನಮ್ಮ ಸಮಾಜದಲ್ಲಿ ಮಾನಸಿಕ ಕಾಯಿಲೆಗಳ ಬಗ್ಗೆ ಮೂಢನಂಬಿಕೆಗಳಿವೆ. ಮಿದುಳಿನ ಒಳಭಾಗದ ರಸಾಯನಿಕ ಏರು ಪೇರಿನಿಂದ ಮಾನಸಿಕ ಖಾಯಿಲೆಗಳು ಉಂಟಾಗುತ್ತವೆ. ವಿಶ್ವದಾದ್ಯಂತ ಅಂದಾಜು ಶೇಕಡಾ 2 ರಿಂದ 3 ರಷ್ಟು ಜನರಲ್ಲಿ ಮಾನಸಿಕ ಖಾಯಿಲೆಯನ್ನು ಕಾಣಬಹುದಾಗಿದೆ ಎಂದು ಡಿಮ್ಹಾನ್ಸ್ ಮನೋರೋಗ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಆದಿತ್ಯ ಪಾಂಡುರಂಗಿ ಹೇಳಿದರು.

ಧಾರವಾಡ ಮಾನಸಿಕ ಹಾಗೂ ನರವಿಜ್ಞಾನ ಸಂಸ್ಥೆಯ (ಡಿಮ್ಹಾನ್ಸ್) ಮನೋವೈದ್ಯಕೀಯ ಸಮಾಜಕಾರ್ಯ ವಿಭಾಗದ ವತಿಯಿಂದ ಇಂದು ವಿಶ್ವ ಬೈಪೆÇೀಲಾರ್ ದಿನಾಚರಣೆ ಕಾರ್ಯಕ್ರಮ ಜರುಗಿತು. ಈ ಹೊತ್ತಿಗಾಗಿ ಸಾಮಥ್ರ್ಯ ಮತ್ತು ನಾಳೆಗಾಗಿ ಭರವಸೆ ಎಂಬ ಧ್ಯೇಯ ವಾಕ್ಯದೊಂದಿಗೆ ದಿನ ಆಚರಿಸಲಾಯಿತು.

ಈ ಸಂದರ್ಭದಲ್ಲಿ ವಿಶೇಷ ಉಪನ್ಯಾಸ ನೀಡಿದ ಡಾ. ಆದಿತ್ಯ ಪಾಂಡುರಂಗಿ ಅವರು, ಮಾನಸಿಕ ರೋಗದಲ್ಲಿ ಕೆಲವು ದಿವಸಗಳ ಕಾಲ ರೋಗಿ ಹೆಚ್ಚು ಮಾತನಾಡುವುದು, ನೀಗಲಾರದ ವಿಷಯಗಳಲ್ಲಿ ಆಸಕ್ತಿ ತೋರಿಸುವುದು, ಕೋಪಗೊಳ್ಳುವುದು, ಕೆಲವೊಮ್ಮೆ ದುಶ್ಚಟಗಳನ್ನು ಮಾಡುವುದು ಸಾಮಾನ್ಯವಾಗಿರುತ್ತದೆ.

ಮಾನಸಿಕ ರೋಗದಿಂದ ಹೊರಬಂದ ನಂತರ ಕೆಲವು ದಿವಸಗಳ ಕಾಲ ಖಿನ್ನತೆಗೆ ಒಳಗಾಗಿ ಯಾವುದರಲ್ಲೂ ಆಸಕ್ತಿ ತೋರಿಸದೇ ದು:ಖಿತರಾಗಿ, ಜೀವನದಲ್ಲಿ ನಿರುತ್ಸಾಹಗೊಂಡು ಆತ್ಮಹತ್ಯೆಯ ವಿಚಾರಗಳನ್ನು ಕೂಡ ಮಾಡುತ್ತಾರೆ. ಇವು ಬೈಪೆÇೀಲಾರ್ ಮಾನಸಿಕ ಖಾಯಿಲೆಯ ಎರಡು ಮುಖಗಳಿದ್ದಂತೆ. ಉಳಿದಂತೆ ಅವರು ಯಾವುದೇ ರೋಗಲಕ್ಷಣಗಳಿಲ್ಲದೇ ಸಾಮಾನ್ಯ ಜೀವನ ನಡೆಸುತ್ತಾರೆ.

ಈ ರೀತಿಯ ಭಾವನೆಗಳ ಏರುಪೇರಿನಿಂದ ಅನೇಕ ಜನರು, ರೋಗಪೀಡಿತ ವ್ಯಕ್ತಿಯು ಬೇಕೆಂದೇ ಈ ರೀತಿ ವರ್ತಿಸುತ್ತಾರೆ ಎಂದು ಭಾವಿಸುತ್ತಾರೆ. ಇವುಗಳನ್ನು ವೈಜ್ಞಾನಿಕ ದೃಷ್ಠಿಯಿಂದ ನೋಡಿ, ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಿದರೆ ರೋಗಿಗಳು ಗುಣಮುಖರಾಗಿ ಎಲ್ಲರಂತೆ ಸಮಾಜದ ಮುಖ್ಯವಾಹಿನಿಯಲ್ಲಿ ಬದುಕನ್ನು ನಡೆಸುತ್ತಾರೆ.

ಮನೋವೈದ್ಯರ ಮಾರ್ಗದರ್ಶನದಂತೆ ಚಿಕಿತ್ಸೆ ಪಡೆಯುವುದು ಸೂಕ್ತ. ಅನೇಕ ಜನ ಈ ಲಕ್ಷಣಗಳು ಗುಣಮುಖವಾದ ನಂತರ ಮನೋವೈದ್ಯರ ಸಲಹೆ ಪಡೆಯದೇ ಚಿಕಿತ್ಸೆಯನ್ನು ಬಿಟ್ಟುಬಿಡುತ್ತಾರೆ. ಆಗ ರೋಗದ ಲಕ್ಷಣಗಳು ಮರುಕಳಿಸಿ ಬರುವ ಸಾಧ್ಯತೆಗಳಿರುತ್ತವೆ. ಮಾನಸಿಕ ರೋಗವನ್ನು ನಿಯಂತ್ರಿಸಲು ವೈದ್ಯರಲ್ಲಿ ವಿಶ್ವಾಸವಿಟ್ಟುಕೊಳ್ಳುವುದು ಬಹಳ ಮುಖ್ಯ ಎಂದರು.

ಕಾರ್ಯಕ್ರಮದಲ್ಲಿ ಮನೋವೈದ್ಯಕೀಯ ಸಮಾಜಕಾರ್ಯ ವಿಭಾಗದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ಎಂ.ಫಿಲ್ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮನೋವೈದ್ಯಕೀಯ ಸಮಾಜಕಾರ್ಯಕರ್ತ ಅಶೋಕ ಕೋರಿ ಸ್ವಾಗತಿಸಿದರು. ಪ್ರಶಾಂತ ಪಾಟೀಲ ವಂದಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending