ದಿನದ ಸುದ್ದಿ
ಕಾನೂನು ಚೌಕಟ್ಟಿನಲ್ಲಿ ವ್ಯವಹರಿಸಿ, ಸಾಲ ಕಟ್ಟಿಸಲು ಬಲವಂತದ ಕ್ರಮಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ : ಡಿಸಿ ಜಿ.ಎಂ.ಗಂಗಾಧರಸ್ವಾಮಿ
ಸುದ್ದಿದಿನ,ದಾವಣಗೆರೆ:ಆರ್ಥಿಕಾಭಿವೃದ್ದಿಗೆ ಮೈಕ್ರೋ ಫೈನಾನ್ಸ್, ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಮತ್ತು ಲೇವಾದೇವಿ, ಗಿರಿವಿದಾರರ ಕೊಡುಗೆ ಇದ್ದು ನಿಯಮಬದ್ದವಾಗಿ ವ್ಯವಹಾರ ಮಾಡಿ, ಆದರೆ ಸಾಲಕಟ್ಟಿಸಿಕೊಳ್ಳುವಾಗ ಬಲವಂತದ ಕ್ರಮಕ್ಕೆ ಮುಂದಾಗದೇ ನಿಯಮಬದ್ದವಾಗಿ ವ್ಯವಹರಿಸಬೇಕೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚನೆ ನೀಡಿದರು.
ಅವರು ಶುಕ್ರವಾರ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ನಡೆದ ಮೈಕ್ರೋ ಫೈನಾನ್ಸ್, ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಮತ್ತು ಲೇವಾದೇವಿ ಹಾಗೂ ಗಿರಿವಿದಾರರೊಂದಿಗೆ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಫೈನಾನ್ಸ್ ಮತ್ತು ಎನ್ ಬಿಎಫ್‍ಸಿ ಹಣಕಾಸು ಸಂಸ್ಥೆಯವರು ಗ್ರಾಮಾಂತರ ಪ್ರದೇಶ ಸೇರಿದಂತೆ ನಗರ ಪ್ರದೇಶದಲ್ಲಿ ಸಾಲವನ್ನು ನೀಡಿವೆ. ಆದರೆ ಸಾಲ ವಸೂಲಾತಿಯಲ್ಲಿ ನಿಯಮ ಮೀರಿ ಘಾಸಿಯಾಗುವಂತೆ ವಸೂಲಾತಿ ಮಾಡಿದ್ದರಿಂದ ಮನಃನೊಂದು ಆತ್ಮಹತ್ಯೆ ಪ್ರಕರಣಗಳು ರಾಜ್ಯದಲ್ಲಿ ಕಂಡು ಬಂದಿದ್ದರಿಂದ ಅಮಾನವೀಯ ಕ್ರಮಗಳ ನಿಯಂತ್ರಣಕ್ಕಾಗಿ ಸರ್ಕಾರ ಸುಗ್ರೀವಾಜ್ಞೆಯನ್ನು ಜಾರಿಗೊಳಿಸಿದೆ.
ಕಾಯ್ದೆಯನ್ವಯ ಎಲ್ಲಾ ಹಣಕಾಸು ಸಂಸ್ಥೆಯವರು ಮಾರ್ಚ್ 12 ರೊಳಗಾಗಿ ಆಯಾ ಜಿಲ್ಲಾಧಿಕಾರಿಗಳಿಂದ ನೊಂದಣಿ ಮಾಡಿಸಿಕೊಂಡು ನಿಯಮಬದ್ದವಾಗಿ ವ್ಯವಹಾರ ಮಾಡಲು ಆದೇಶ ಮಾಡಲಾಗಿದೆ. ಈ ಸುಗ್ರೀವಾಜ್ಞೆ ಎಲ್ಲಾ ಫೈನಾನ್ಸ್ ಸಂಸ್ಥೆಯವರಿಗೆ ಮಾಹಿತಿ ಇದ್ದು ನೊಂದಣಿಗೆ ಮುಂದಾಗಬೇಕೆಂದು ಸೂಚನೆ ನೀಡಿದರು.
ಹೊಸ ಕಾಯ್ದೆಯಡಿ ಸಾಲ ನೀಡಿಕೆಯ ಎಲ್ಲಾ ಒಡಂಬಡಿಕೆ ಪತ್ರಗಳನ್ನು ಸ್ಥಳೀಯ ಭಾಷೆ ಕನ್ನಡದಲ್ಲಿ ಮುದ್ರಣ ಮಾಡಿ ಎಲ್ಲಾ ಷರತ್ತುಗಳ ಸಂಪೂರ್ಣ ವಿವರ ಸಾಲ ಪಡೆಯುವವರಿಗೆ ಮಾಹಿತಿ ನೀಡಬೇಕು. ಸಾಮಥ್ರ್ಯವನ್ನಾಧರಿಸಿ ಸಾಲ ನೀಡಬೇಕು, ಫೈನಾನ್ಸ್ ನವರು ಯಾವುದೇ ಅಡಮಾನಗಳನ್ನು ಪಡೆಯದೇ ಸಾಲ ನೀಡಬೇಕು, ಸಾಲ ಪಡೆಯುವಾಗ ಅನೇಕ ಸಹಿಯನ್ನು ಪಡೆಯುವುದು, ಸಾಲ ತೀರಿಸಿದ್ದರೂ ಇನ್ನೂ ಕಂತುಗಳು ಬಾಕಿ ಇವೆ, ಸಾಲ ಕಟ್ಟದಿದ್ದಾಗ ಅವರ ಮನೆ ಬಾಗಿಲಿಗೆ ತೆರಳಿ ಅವಾಚ್ಯ ಶಬ್ದಗಳಿಂದ ನಿಂದಿಸುವುದು ಕಾನೂನಿನಲ್ಲಿ ಅವಕಾಶ ಇಲ್ಲ ಎಂದರು.
ನಾನ್ ಬ್ಯಾಂಕಿಂಗ್ ಹಣಕಾಸು ಸಂಸ್ಥೆಯವರು ವಾಹನಗಳ ಮೇಲೆ ಸಾಲ ನೀಡಿ ಅವರು ಒಂದು ಕಂತು ಕಟ್ಟಲು ವಿಫಲವಾದರೂ ವಾಹನ ವಶಕ್ಕೆ ಪಡೆದು ಬೇರೆಯವರಿಗೆ ಮಾರಾಟ ಮಾಡಿರುವ ಅನೇಕ ಪ್ರಕರಣಗಳಿವೆ. ಆದರೆ ಯಾವುದೇ ಸಂಸ್ಥೆಗಳಿಗೆ ಸೀಜ್ ಮಾಡುವ ಅಧಿಕಾರ ಇಲ್ಲ, ನ್ಯಾಯಾಲಯದ ಮೂಲಕ ಮುಟ್ಟುಗೋಲಿಗೆ ಆದೇಶ ಪಡೆದ ನಂತರವೇ ಅಂತಹ ವಾಹನಗಳನ್ನು ಮುಟ್ಟುಗೋಲು ಹಾಕಿ ಹರಾಜು ಮೂಲಕ ವಿಲೆ ಮಾಡಬಹುದು. ಓರ್ವ ಸಂಸ್ಥೆ ಟ್ರ್ಯಾಕ್ಟರ್‍ಗೆ ಸಾಲ ನೀಡಿದ್ದು ರೈತ 7 ಲಕ್ಷದಲ್ಲಿ 5 ಲಕ್ಷ ಸಾಲವನ್ನು ಮರುಪಾವತಿಸಿದ್ದರೂ ಅದನ್ನು ವಶಕ್ಕೆ ಪಡೆದು ಬೇರೆಯವರಿಗೆ ಮಾರಾಟ ಮಾಡಿದ ಪ್ರಕರಣ ದಾವಣಗೆರೆಯಲ್ಲಿ ಕಂಡುಬಂದಿದೆ. ಆ ಸಂಸ್ಥೆಯಿಂದಲೇ ರೈತನಿಗೆ ಟ್ರ್ಯಾಕ್ಟರ್ ಕೊಡಿಸುವ ಕೆಲಸವನ್ನು ಮಾಡಲಾಗುತ್ತದೆ ಎಂದ ಅವರು ಯಾವುದೇ ಹಣಕಾಸು ಸಂಸ್ಥೆಯಾಗಿರಲಿ, ಈ ಜಿಲ್ಲೆಯಲ್ಲಿ ವ್ಯವಹರಿಸುತ್ತಿದ್ದಲ್ಲಿ ಪ್ರಾದೇಶಿಕ ಕಚೇರಿ ಹೊಂದುವುದು ಕಡ್ಡಾಯವಾಗಿದೆ ಎಂದರು.
ಸಾಲಗಾರರಿಗೆ ಕಿರುಕುಳ, ಮಾನಸಿಕ ಒತ್ತಡ ನೀಡಿದಲ್ಲಿ ಪೊಲೀಸ್ ಉಪ ಅಧೀಕ್ಷಕರ ಮೂಲಕ ಸುಮೋಟೋ ಪ್ರಕರಣ ದಾಖಲಿಸುವ ಅಧಿಕಾರ ಕಾಯಿದೆಯಲ್ಲಿದೆ. ತಪ್ಪಿತಸ್ಥರೆಂದು ಕಂಡುಬಂದಲ್ಲಿ 10 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ದಂಡವಿರುತ್ತದೆ. ಒಂದು ವೇಳೆ ಸಾಲ ವಸೂಲಾತಿಯಾಗುತ್ತಿಲ್ಲವೆಂದರೆ ಅದನ್ನು ಸಂಸ್ಥೆಯ ಕಾನೂನು ಚೌಕಟ್ಟಿನಲ್ಲಿ ವಸೂಲಾತಿಗೆ ಕ್ರಮ ವಹಿಸಬೇಕು, ಮಾನಸಿಕ, ದೈಹಿಕ ಹಿಂಸೆಗೆ ಅವಕಾಶವಿಲ್ಲ ಎಂದರು.
ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಮಾತನಾಡಿ ಸುಗ್ರೀವಾಜ್ಞೆಯಲ್ಲಿ ಬಹಳ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಲಾಗಿದೆ. ನಿಯಮಬದ್ದ ಹಾಗೂ ಪಾರದರ್ಶಕವಾಗಿ ವ್ಯವಹಾರ ಮಾಡಲು ಯಾವುದೇ ಸಮಸ್ಯೆ ಇರುವುದಿಲ್ಲ. ಆದರೆ ನಿಯಮ ಮೀರಿ ವಸೂಲಾತಿ ಕ್ರಮ ಕೈಗೊಳ್ಳುವಂತಿಲ್ಲ, ಹೊಸ ಕಾನೂನಿನ ಅವಕಾಶಗಳ ದುರ್ಬಳಕೆ ಮಾಡಿಕೊಂಡಲ್ಲಿ ಫೈನಾನ್ಸ್ ಸಂಸ್ಥೆಯವರು ಸಹ ಹತ್ತಿರದ ಠಾಣೆಗೆ ಮಾಹಿತಿ ನೀಡಬಹುದಾಗಿದೆ ಎಂದರು.
ಸಭೆಯಲ್ಲಿ ಸಹಕಾರ ಸಂಘಗಳ ಉಪನಿಬಂಧಕರಾದ ಮಧು ಶ್ರೀನಿವಾಸ್ ಲೇವಾದೇವಿ, ಗಿರಿವಿದಾರರ ಮತ್ತು ಚಿಟ್ಸ್ ಫಂಡ್‍ಗಳ ವ್ಯವಹಾರದ ಬಗ್ಗೆ ಮತ್ತು ನಿಯಮಗಳ ಬಗ್ಗೆ ಮಾತನಾಡಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ್ ಎಂ.ಸಂತೋಷ್, ಮಂಜುನಾಥ್ ಹಾಗೂ ಫೈನಾನ್ಸ್ ಸಂಸ್ಥೆಯವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ
ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.
ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಸುದ್ದಿದಿನ,ದಾವಣಗೆರೆ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ಸಿ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days agoಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
-
ದಿನದ ಸುದ್ದಿ2 days agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
-
ದಿನದ ಸುದ್ದಿ1 day agoಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

