ದಿನದ ಸುದ್ದಿ

ಏ.29 ರಂದು ಮಿನಿ ಉದ್ಯೋಗ ಮೇಳ

Published

on

ಸುದ್ದಿದಿನ,ಹುಬ್ಬಳ್ಳಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಮಿನಿ ಉದ್ಯೋಗ ಮೇಳವನ್ನು ಏ.29ರಂದು ಬೆಳಿಗ್ಗೆ 10 ಗಂಟೆಗೆ ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.

ಮೇಳದಲ್ಲಿ 6 ಖಾಸಗಿ ಸಂಸ್ಥೆಗಳು ಭಾಗವಹಿಸಿ, ವಿವಿಧ ಖಾಲಿ ಹುದ್ದೆಗಳಿಗೆ ಅಭ್ಯರ್ಥಿಗಳ ಸಂದರ್ಶನ ನಡೆಸಲಿದ್ದಾರೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಬಿಎಸ್ಸಿ ನರ್ಸಿಂಗ್, ಎಎನ್‌ಎಮ್, ಜಿಎನ್‌ಎಮ್, ಐಟಿಐ ಮತ್ತು ಇಂಜನಿಯರಿಂಗ್ ಪುರುಷ ಅಭ್ಯರ್ಥಿಗಳು ಹಾಗೂ ಯಾವುದೇ ಪದವೀಧರರಾದ 18 ರಿಂದ 35 ವಯಸ್ಸಿನ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು. ಅಭ್ಯರ್ಥಿಗಳು ತಮ್ಮ ಭಾವಚಿತ್ರ, ಆಧಾರಕಾರ್ಡ, ಬಯೋಡಾಟಾ ಪ್ರತಿಗಳೊಂದಿಗೆ (ಕನಿಷ್ಟ 5 ಪ್ರತಿಗಳು) ತಮ್ಮ ಸ್ವಂತ ಖರ್ಚಿನಲ್ಲಿ ಭಾಗವಹಿಸಬೇಕು.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0836-2225288, 8951852818, 8453208555 ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿದೇರ್ಶಕರು ಗಿರೀಶ್ ಕೆ. ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version