ಕ್ರೀಡೆ
ನಾಳೆಯಿಂದ ಬೆಂಗಳೂರಿನಲ್ಲಿ ಮಿನಿ ಓಲಂಪಿಕ್ ಕ್ರೀಡಾಕೂಟ
ಸುದ್ದಿದಿನ ಡೆಸ್ಕ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ, ಕರ್ನಾಟಕ ಓಲಂಪಿಕ್ಸ್ ಸಂಸ್ಥೆ ಜಂಟಿಯಾಗಿ ಆಯೋಜಿಸಿರುವ ಮಿನಿ ಓಲಂಪಿಕ್ ಕ್ರೀಡಾಕೂಟ – 2022 ನಾಳೆಯಿಂದ ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ.
ರಾಜ್ಯಪಾಲ ಥಾವರ್ ಚೆಂದ್ ಗೆಲ್ಹೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಂಟಿಯಾಗಿ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಈ ಮಿನಿ ಓಲಂಪಿಕ್ ಕ್ರೀಡಾಕೂಟದಲ್ಲಿ 3 ಸಾವಿರ ಅಥ್ಲೇಟ್‌ಗಳು ಭಾಗವಹಿಸಲಿದ್ದಾರೆ. ಕ್ರೀಡಾಕೂಟದಲ್ಲಿ 21 ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಲಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243