ದಿನದ ಸುದ್ದಿ
ಸಮಗ್ರ ಅಭಿವೃದ್ಧಿಯ ಸದೃಢ ಕನ್ನಡ ನಾಡು ಕಟ್ಟುವ ಕೆಲಸ ಮಾಡುತ್ತೇವೆ : ಸಚಿವ ಬಸವರಾಜ ಬೊಮ್ಮಾಯಿ
ಸುದ್ದಿದಿನ,ಹಾವೇರಿ: ಹೊಸ ಚಿಂತನೆ, ಹೊಸ ಕಲ್ಪನೆ ಹೊಸ ಕಾರ್ಯಗಳ ಮೂಲಕ ಎಲ್ಲರನ್ನೂ ಒಳಗೊಂಡ ನಯಾ ಭಾರತ ನಿರ್ಮಾಣಕ್ಕೆ ಭಾರತದ ಪ್ರಧಾನಮಂತ್ರಿಗಳು ಸಂಕಲ್ಪಮಾಡಿದ್ದಾರೆ. ಕರ್ನಾಟಕದಲ್ಲೂ ಮಾನ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಸಮಗ್ರ ಅಭಿವೃದ್ಧಿಯ ಸದೃಢ ಕನ್ನಡ ನಾಡು ಕಟ್ಟುವ ಕೆಲಸ ಮಾಡುತ್ತೇವೆ ಎಂದು ಗೃಹ, ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಖಾತೆ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
72ನೇ ಭಾರತ ಗಣರಾಜ್ಯೋತ್ಸವ ಅಂಗವಾಗಿ ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಕಳೆದ ಒಂದೂವರೆ ವರ್ಷ ಸಂಕಷ್ಟದ ವರ್ಷದವಾಗಿ ಆಡಳಿತಕ್ಕೆ ಪರೀಕ್ಷೆಯ ಕಾಲ. ಕೋವಿಡ್ ಹಾಗೂ ಪ್ರಾಕೃತಿಕ ವಿಕೋಪಗಳು ಕರ್ನಾಟಕದ ಆರ್ಥಿಕತೆಯನ್ನೇ ಅಲ್ಲಾಡಿಸಿದ ವರ್ಷವಾಗಿದೆ. ಕೋವಿಡ್ ಕಾರಣದಿಂದ ದೇಶ ಸೇರಿದಂತೆ ವಿಶ್ವದ ಆರ್ಥಿಕತೆಯೇ ಅಲ್ಲಾಡಿದೆ. ಈ ಸಂಕಷ್ಟಗಳ ದಾರಿಯಲ್ಲೂ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗದಂತೆ ನಮ್ಮ ಸರ್ಕಾರಗಳು ಕಾರ್ಯನಿರ್ವಹಿಸಿವೆ ಎಂದು ಹೇಳಿದರು.
ಭಾರತದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ರಾಷ್ಟ್ರೀಯತೆ, ಎಲ್ಲರ ಒಳಗೊಂಡಂತೆ ಅಭಿವೃದ್ಧಿ ಹಾಗೂ ಆಂತರಿಕ ಹಾಗೂ ಬಾಹ್ಯ ಸುರಕ್ಷತೆಯ ಮೂರು ಅಂಶಗಳ ಆಧಾರದ ಮೇಲೆ ನಯಾ ಭಾರತದ ನಿರ್ಮಾಣಕ್ಕೆ ಕರೆ ಕೊಟ್ಟಿದ್ದಾರೆ. ಈ ಮಾದರಿಯಲ್ಲಿ ರಾಜ್ಯದ ಅಭಿವೃದ್ಧಿಯ ಕಾರ್ಯಗಳು ಮುಂದುವರೆದಿವೆ ಎಂದು ಹೇಳಿದರು.
ಕೋವಿಡ್ ಸಂಕಷ್ಟವನ್ನು ಸೈದ್ಧಾಂತಿಕವಾಗಿ ಎದುರಿಸಲಾಗಿದೆ. ಆರೋಗ್ಯ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಐ.ಸಿ.ಯು. ಲ್ಯಾಬ್, ಆಕ್ಸಿಜನ್ ವ್ಯವಸ್ಥೆ, ವೆಂಟಿಲೇಟರ್ ವ್ಯವಸ್ಥೆ ಸೇರಿದಂತೆ ಪ್ರಮುಖ ಸುಧಾರಣೆ ತರಲಾಗಿದೆ. ಆಯುಷ್ಮಾನ್ ಭಾರತ ಯೋಜನೆಯಡಿ 797 ಲಕ್ಷ ರೂ. ಅನುದಾನ ಬಳಸಿ 12,669 ಫಲಾನುಭವಿಗಳಿಗೆ ಚಿಕಿತ್ಸೆ ನೀಡಲಾಗಿದೆ. 364 ಲಕ್ಷ ರೂ. ವೆಚ್ಚದಲ್ಲಿ 1787 ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲಾಗಿದೆ.
ಇ ಸಂಜೀವಿನಿ ಟೆಲಿಮೆಡಿಷನ್ ಯೋಜನೆಯಡಿ 3184 ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಈವರೆಗೆ 11,250 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ 11,046 ಜನ ಗುಣಮುಖರಾಗಿದ್ದಾರೆ. 8280 ಡೋಸ್ ಕೋವಿಡ್ ಲಸಿಕೆ ಜಿಲ್ಲೆಗೆ ಪೂರೈಕೆಯಾಗಿದ್ದು, ಈಗಾಗಲೇ 3387 ಜನರಿಗೆ ಲಸಿಕೆ ನೀಡಲಾಗಿದೆ ಎಂದು ಹೇಳಿದರು.
ಮುಂದಿನ ಶೈಕ್ಷಣಿಕ ವರ್ಷಾರಂಭದಲ್ಲಿ ಸರ್ಕಾರಿ ಆಸ್ಪತ್ರೆಯನ್ನು ಬಳಸಿಕೊಂಡು ವೈದ್ಯಕೀಯ ತರಗತಿಗಳನ್ನು ಆರಂಭಿಸಲು ಪ್ರಯತ್ನಿಸಲಾಗುವುದು. ಈ ವರ್ಷಾಂತ್ಯಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಮಾಡಲಾಗುವುದು. ಶಿಗ್ಗಾಂವಿಯಲ್ಲಿ ಜವಳಿ ಪಾರ್ಕ್ ವರ್ಷಾಂತಕ್ಕೆ ಪೂರ್ಣಗೊಳಿಸಿ ಮೂರರಿಂದ ಐದುಸಾವಿರ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡಲಾಗುವುದು.
ಜಿಲ್ಲೆಯ ಪ್ರವಾಸೋದ್ಯಮದ ಬೆಳವಣಿಗೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಬಂಕಾಪುರ ನವಿಲು ಧಾಮವನ್ನು ಉನ್ನತೀಕರಿಸಲಾಗುವುದು. ಉದ್ಯೋಗಖಾತ್ರಿ ಯೋಜನೆಯನ್ನು ಅರ್ಥಪೂರ್ಣವಾಗಿ ಹಾಗೂ ಜನೋಪಯೋಗಿ ಕಾರ್ಯಕ್ರಮವಾಗಿ ರೂಪಿಸಲು ಸೂಚನೆ ನೀಡಲಾಗಿದೆ. ಶೀಘ್ರವೇ ವಿಜನ್ 2021-2025 ಯೋಜನೆ ರೂಪಿಸಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ವಿಶ್ವ ಆರ್ಥಿಕ ಒಪ್ಪಂದ ಪ್ರಕಾರ ಮುಕ್ತ ಮಾರುಕಟ್ಟೆಯಲ್ಲಿ ರೈತರಿಗೆ ಉತ್ತಮ ಬೆಲೆದೊರಕಿಸಿಕೊಡಲು ಕಾಯ್ದೆಗಳನ್ನು ಜಾರಿಗೊಳಿಸಲಾಗಿದೆ. ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯಗಳು ಸಹಜ. ಒಟ್ಟಾಗಿ ಕೂತು ಚರ್ಚಿಸಿ ನಿರ್ಣಯ ಕೈಗೊಳ್ಳಬೇಕಾಗಿದೆ. ರೈತರ ಅನುಕೂಲಕ್ಕಾಗಿ ಸಬ್ಸಿಡಿ ಸಾಲ, ಬಡ್ಡಿ ರಹಿತ ಸಾಲ, ಸಬ್ಸಿಡಿ ಯೋಜನೆಳನ್ನು ಜಾರಿಗೊಳಿಸಲಾಗಿದೆ. ರೈತಪರವಾದ ನಮ್ಮ ಸರ್ಕಾರ ಕಳೆದ ಸಾಲಿನ ಮುಂಗಾರು ಹಂಗಾಮಿನ ಬೆಳೆವಿಮೆ ಪರಿಹಾರವಾಗಿ 76,000 ರೈತರಿಗೆ 179 ಕೋಟಿ ರೂ. ಹಾಗೂ ಹಿಂಗಾರು ಹಂಗಾಮಿನಲ್ಲಿ 30 ಕೋಟಿ ರೂ. ಅನುದಾನವನ್ನು 293 ರೈತರಿಗೆ ಪರಿಹಾರ ನೀಡಲಾಗಿದೆ.
ನೀರಾವರಿ ಕ್ಷೇತ್ರಕ್ಕೆ 7300 ಕೋಟಿ ರೂ.ಗಳನ್ನು ಜಿಲ್ಲೆಗೆ ನೀಡಲಾಗಿದೆ. 2021ರ ವರ್ಷಾಂತ್ಯಕ್ಕೆ ಜಿಲ್ಲೆಯ ನೀರಾವರಿ ಯೋಜನೆಗಳು ಪೂರ್ಣಗೊಳ್ಳಲಿವೆ ಎಂದು ಹೇಳಿದರು.
ಸ್ವಚ್ಛ ಭಾರತ, ಗ್ರಾಮೀಣ ಆವಾಸ್ ಯೋಜನೆ, ಗ್ರಾಮೀಣ ವಿದ್ಯುದ್ದೀಕರಣ ಯೋಜನೆ, ಗ್ರಾಮಸಡಕ್ ಯೋಜನೆ, ಉಜ್ವಲ್ ಯೋಜನೆ ಗಳು ನಿರ್ಲಕ್ಷಿತ ವಲಯದ ಏಳಿಗೆಗಾಗಿ ರೂಪಿಜಾರಿಗೊಳಿಸಲಾಗಿದೆ ಎಂದು ಹೇಳಿದರು.
ಜನವರಿ 26 ಭಾರತಕ್ಕೆ ಸಂವಿಧಾನ ಸಿಕ್ಕ ದಿನ, ಆಡಳಿತ ವ್ಯವಸ್ಥೆ ಸಿಕ್ಕ ದಿನ, ವಿಶ್ವಕ್ಕೆ ಮಾದರಿಯಾದ ದೊಡ್ಡ ಲಿಖಿತ ಸಂವಿಧಾನವನ್ನು ಜಾರಿಗೆ ತಂದದಿನ. ಸ್ವತಂತ್ರ ಭಾರತಕ್ಕೊಂದು ಸದೃಢ ಸಂವಿಧಾನ ಕಟ್ಟಿಕೊಟ್ಟದ್ದು ಡಾ. ಬಿ.ಆರ್.ಅಂಬೇಡ್ಕರ್ ನೇತೃತ್ವದ ಹಿರಿಯರ ತಂಡ. ಅವರ ಅವಿರತ ಪ್ರಯತ್ನ ಫಲವಾಗಿ ವಿಶ್ವಕ್ಕೆ ಮಾದರಿಯಾಗಿರುವ ನಮ್ಮ ಸಂವಿಧಾನ ರೂಪುಗೊಂಡಿದೆ. ಇವರನ್ನು ಹೃದಯಪೂರ್ವಕವಾಗಿ, ಚಿರಸ್ಮರಣೀಯವಾಗಿ ಅಭಿನಂದಿಸುತ್ತೇನೆ ಎಂದು ಸ್ಮರಿಸಿದರು.
ಇದೇ ಸಂದರ್ಭದಲ್ಲಿ ಪದ್ಮಶ್ರೀ, ಪದ್ಮವಿಭೂಷಣ ಪ್ರಶಸ್ತಿ ಪಡೆದವರನ್ನು ಅಭಿನಂದಿಸುತ್ತ ಕರ್ನಾಟಕದ ಚಂದ್ರಶೇಖರ ಕಂಬಾರ ಹಾಗೂ ವೈದ್ಯ ಬಿ.ಎಂ. ಹೆಗಡೆ ಅವರಿಗೆ ಅಭಿನಂದಿಸಿದರು.
ಸಮಾರಂಭದಲ್ಲಿ ಜನಪದ ಕಲಾವಿದ ಬಸವರಾಜ ಶಿಗ್ಗಾಂವ, ಉದಯವಾಣಿ ದಿನಪತ್ರಿಕೆಯ ಜಿಲ್ಲಾ ವರದಿಗಾರ ವಿರೇಶ ಮಡ್ಲೂರ ಹಾಗೂ ಟಿವಿ-9 ಮಾಧ್ಯಮದ ವಿಡಿಯೋ ಜರ್ನಲಿಸ್ಟ್ ರವಿ ಹೂಗಾರ ಅವರನ್ನು ಸನ್ಮಾನಿಸಲಾಯಿತು. ಇದಕ್ಕೂ ಮುಂಚೆ ಆಕರ್ಷಕ ಪಥಸಂಚಲನ ಹಾಗೂ ಧ್ವಜ ವಂದನೆ ಕಾರ್ಯಕ್ರಮದಲ್ಲಿ ಗೃಹ ಸಚಿವರು ಭಾಗವಹಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.
ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.
ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
ಸುದ್ದಿದಿನಡೆಸ್ಕ್:ಜಪಾನ್ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.
ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!
ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಾಲಿಯ ಕನಸು ಒಂದೇ ಹೀರೋ ಆಗೋದು
ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!
ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!
ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.
ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!
ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ3 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ5 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ದಿನದ ಸುದ್ದಿ1 day agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ1 day agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ15 hours agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ1 day agoಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
-
ದಿನದ ಸುದ್ದಿ2 days agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ

