ದಿನದ ಸುದ್ದಿ
ರೈತರಿಗೆ ನೀರು ಕೊರತೆ ಆಗದಂತೆ ಕ್ರಮವಹಿಸಬೇಕು: ಸಚಿವ ಸಿ.ಎಸ್.ಪುಟ್ಟರಾಜು
ಸುದ್ದಿದಿನ, ಮಂಡ್ಯ: ರೈತರಿಗೆ ಅನಾನುಕೂಲವಾಗದಂತೆ ಅಗತ್ಯವಾದ ನೀರನ್ನು ನೀಡಲು ನೀರಾವರಿ ಇಲಾಖೆಯ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಣ್ಣ ನೀರಾವರಿ ಸಚಿವರಾದ ಸಿ.ಎಸ್.ಪುಟ್ಟರಾಜು ಅವರು ತಿಳಿಸಿದರು.
ಅವರು ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಥಮ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಳವಳ್ಳಿ ಹಾಗೂ ಮದ್ದೂರು ಭಾಗದ ವಿ.ಸಿ.ನಾಲೆ ವ್ಯಾಪ್ತಿಯ ಕಡೇ ಭಾಗಕ್ಕೆ ಕನ್ನಂಬಾಡಿ ಅಣೆಕಟ್ಟೆಯ ನೀರು ತಲುಪದ ಹಿನ್ನೆಲೆ ಯಲ್ಲಿ ನೀರಾವರಿ ಇಲಾಖೆಯ ಅಧಿಕಾರಿಗಳ ಅಗತ್ಯ ಕ್ರಮವಹಿಸಬೇಕು ಎಂದು ತಿಳಿಸಿದ ಸಚಿವರು ನೀರಾವರಿ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಇಂಜಿನಿಯರ್ ಮತ್ತು ಸವಡೆಗಳ ನಡುವಿನ ಸಮನ್ವಯ ಹಾಗೂ ಹೊಂದಾಣಿಕೆ ಇಲ್ಲದೆ ರೈತರು ಪರಿತಪಿಸುವಂತಾಗಿದೆ ಈ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಳವಳ್ಳಿ ಶಾಸಕರಾದ ಡಾ.ಅನ್ನದಾನಿ ಅವರು ಮಳವಳ್ಳಿ ಕ್ಷೇತ್ರದ ವಿ.ಸಿ.ನಾಲೆ ಕಡೇ ಭಾಗಗಳಿಗೆ ಇದುವರೆಗೂ ನೀರು ಹರಿದಿಲ್ಲ. ರೈತರು ಭತ್ತ ಅಥವಾ ರಾಗಿ ನಾಟಿ ಮಾಡಲು ಸಾಧ್ಯವಾಗಿಲ್ಲ. ಈ ಬಗ್ಗೆ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಅವರು ತಿಳಿಸಿದರು.
ಇದಕ್ಕೆ ಸ್ಪಂದಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ಹೇಮಾವತಿ ನಾಲೆ ಆಧುನೀಕರಣ ಹಾಗೂ ಅಕ್ವಿಡೆಟ್ ಅಗಲೀಕರಣದಿಂದ ಆ ವ್ಯಾಪ್ತಿಯ ನಾಲೆಗಳಿಗೆ ನೀರು ಹರಿಸಲು ವಿಳಂಬವಾಗಿದೆ. ರಾಜ್ಯದ 30 ಸಾವಿರ ಕೆರೆಗಳು ನನ್ನ ವ್ಯಾಪ್ತಿಯ ಸಣ್ಣ ನೀರಾವರಿ ಇಲಾಖೆಗೆ ಒಳಪಟ್ಟಿವೆ. ಕನ್ನಂಬಾಡಿಯಲ್ಲಿ ಅಪಾರ ನೀರಿದ್ದರೂ ನಾಲೆಗಳ ಸಾಮಥ್ರ್ಯಕ್ಕೆ ತಕ್ಕಂತೆ ನೀರು ಹರಿಸಬೇಕಿದೆ. ಕೆರೆಗಳನ್ನು ತುಂಬಿಸಲು ಕಾರ್ಯೋನ್ಮುಖರಾಗಿದ್ದರೂ ಪ್ರಗತಿ ಸಾಧ್ಯವಾಗಿಲ್ಲ. ಇದಕ್ಕೆ ಮಳೆ ವೈಫಲ್ಯವೂ ಕಾರಣವಾಗಿದೆ. ತತ್‍ಕ್ಷಣ ನೀರಾವರಿ ಇಲಾಖೆ ಅಧಿಕಾರಿಗಳು, ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಇಲಾಖೆಯ ಸಹಕಾರ ಪಡೆದು, ಹೇಮಾವತಿ ವ್ಯಾಪ್ತಿಯ ಬಸರಾಳು, ದುದ್ದ ಹಾಗೂ ನಾಗಮಂಗಲ ವ್ಯಾಪ್ತಿಗೆ ನೀರು ತುಂಬಿಸಬೇಕೆಂದು ಸೂಚಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಸಾರಿಗೆ ಸಚಿವರಾದ ಡಿ.ಸಿ.ತಮ್ಮಣ್ಣ ಅವರು ಬರಗಾಲದ ಅವಧಿಯಲ್ಲೂ 2000 ರಲ್ಲಿ ನೀರು ಹರಿಸಲಾಗಿತ್ತು. ಸ್ಥಳೀಯ ಪರಿಸ್ಥಿತಿಯನ್ನು ಅರಿತಿರುವ ಇಂಜಿನಿಯರ್‍ಗಳು ಅಲಭ್ಯರಾಗಿದ್ದಾರೆ. ಮೇಲ್ಭಾಗದ ರೈತರಿಗೆ ಮಿತ ನೀರು ನೀಡಿ, ನಿಗದಿತವಾಗಿ ಕೆಳ ಭಾಗಕ್ಕೆ ನೀರು ಹರಿಸಬೇಕು. ಅಧಿಕಾರಿಗಳ ನಡುವೆ ಸಮನ್ವಯತೆ ಕಡಿಮೆಯಾಗಿದೆ. ಈ ಬಗ್ಗೆ ನೀರಾವರಿ ಸಚಿವರು ಅಗತ್ಯ ಕ್ರಮ ಕೈಗೊಂಡು ಸಮಸ್ಯೆ ಬಗೆಹರಿಸಬೇಕೆಂದರು.
ಈ ಸಮಸ್ಯೆಗೆ ಅಗತ್ಯ ಕ್ರಮವಹಿಸಲಾಗುವುದು ಎಂದು ತಿಳಿಸಿದ ಮಂಡ್ಯ ಜಿಲ್ಲಾಧಿಕಾರಿ ಮಂಜುಶ್ರೀ ಅವರು ನೀರು ನಿರ್ವಹಣೆ ಬಗ್ಗೆ ಈಗಾಗಲೇ ಜಾಗೃತ ಪಡೆ ರಚಿಸಲಾಗಿದೆ. ನೀರಾವರಿ ಇಲಾಖೆ ಅಧಿಕಾರಿಗಳು ಪೊಲೀಸ್ ಹಾಗೂ ಕಂದಾಯ ಇಲಾಖೆಯ ಸಹಕಾರ ಪಡೆದು ಕಡೇ ಭಾಗದ ಕೆರೆಗಳನ್ನು ತುಂಬಿಸಲು ಮತ್ತು ನಾಲೆಗಳಿಗೆ ನೀರು ಹರಿಸಲು ನೀರಾವರಿ ಇಲಾಖೆಯ ಕಾರ್ಯ ಪ್ರವೃತ್ತರಾಗಬೇಕೆಂದು ಸೂಚಿಸಿದರು.
ಸಭೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ.ಶ್ರೀನಿವಾಸ್, ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ವಿಧಾನ ಪರಿಷತ್ ಶಾಸಕರಾದ ಎನ್.ಅಪ್ಪಾಜಿಗೌಡ, ಕೆ.ಟಿ.ಶ್ರೀಂಠೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ನಾಗರತ್ನ ಸ್ವಾಮಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಗಾಯಿತ್ರಿ, ಉಸ್ತುವಾರಿ ಕಾರ್ಯದರ್ಶಿ ಜಾವೇದ್ ಆಖ್ತರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಯಾಲಕ್ಕಿಗೌಡ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoಫೆ.14 ರಂದು ಸಂತ ಸೇವಾಲಾಲ್‌ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ4 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ6 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ4 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ21 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ20 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

