ದಿನದ ಸುದ್ದಿ
ದಾವಣಗೆರೆ : ಹೊಸ ವಿದ್ಯುತ್ ಮಸೂದೆ ಖಂಡಿಸಿ ರೈತರಿಂದ ಸಚಿವರಿಗೆ ಮುತ್ತಿಗೆ
ಸುದ್ದಿದಿನ,ದಾವಣಗೆರೆ : ಕೋವಿಡ್ ಸಂದರ್ಭ ದುರುಪಯೋಗ ಮಾಡಿಕೊಂಡು ಕೋವಿಡ್ 19 ಬಿಕ್ಕಟ್ಟಿನ ಮಧ್ಯೆ ಕೇಂದ್ರವು ಹೊಸ ವಿದ್ಯುತ್ ಮಸೂದೆಯನ್ನ ಜಾರಿಗೊಳಿಸುತ್ತಿರುವುದನ್ನ ಖಂಡಿಸಿ ಕರ್ನಾಟಕ ಕಿಸಾನ್ ಕಾಂಗ್ರೆಸ್ ಮಂಗಳವಾರ ಸಚಿವ ಭೈರತಿ ಬಸವರಾಜ್ ಅವರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ದಾವಣಗೆರೆ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ದಾವಣಗೆರೆ ಪ್ರವಾಸಿ ಮಂದಿರಕ್ಕೆ ಆಗಮಿಸುತ್ತಿದ್ದಂತೆ ಸಚಿವರಿಗೆ ಮುತ್ತಿಗೆ ಹಾಕಿ ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದರು. ಪ್ರಧಾನಿ ನರೇಂದ್ರ ಮೋದಿ ಅವರ ಸ್ನೇಹಿತ ವಿದ್ಯುತ್ ಉದ್ಯಮಿ ಗೌತಮ್ ಅದಾನಿ ಇತರರಿಗೆ ಲಾಬಿ ಮಾಡಿಕೊಳ್ಳಲು ಹುನ್ನಾರ ಇದರಲ್ಲಿದೆ ಎಂದು ಕರ್ನಾಟಕ ಕಿಸಾನ್ ಕಾಂಗ್ರೆಸ್ ಆರೋಪಿಸಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243