ದಿನದ ಸುದ್ದಿ

ಜಲಾನಯನ ಯೋಜನೆಗಳ ಅನುಷ್ಠಾನದಲ್ಲಿ ಕರ್ನಾಟಕ ಅತ್ಯುತ್ತಮ ಕಾರ್ಯ ನಿರ್ವಹಣೆ : ಸಚಿವ ಗಿರಿರಾಜ್ ಸಿಂಗ್

Published

on

ಸುದ್ದಿದಿನ ಡೆಸ್ಕ್ : ಜಲಾನಯನ ಅಭಿವೃದ್ಧಿ ಇಲಾಖೆಯಿಂದ ವಿಶ್ವ ಬ್ಯಾಂಕ್ ನೆರವಿನ ಮಟ್ಟದ ರಿವಾರ್ಡ್ ಯೋಜನೆ, ಜಲಾನಯನ ಉತ್ಕೃಷ್ಟತಾ ಕೇಂದ್ರದ ಉದ್ಘಾಟನೆ, ಎಫ್‌ಬಿಒಗಳ ಏಕರೂಪ ಬ್ರಾಂಡಿಂಗ್ ಸ್ಪರ್ಧೆಯ ಅನಾವರಣ ಕಾರ್ಯಕ್ರಮ ಬೆಂಗಳೂರಿನ ಜಿಕೆವಿಕೆಯಲ್ಲಿ ನಿನ್ನೆ ನಡೆಯಿತು.

ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಗಿರಿರಾಜ್ ಸಿಂಗ್, ಗ್ರಾಮೀಣಾಭಿವೃದ್ಧಿ ಮತ್ತು ಉಕ್ಕು ಖಾತೆ ರಾಜ್ಯಸಚಿವ ಫಗನ್ ಸಿಂಗ್ ಕುಲಸ್ತೆ, ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಜಲಾನಯನ ಯೋಜನೆಗಳ ಅನುಷ್ಠಾನದಲ್ಲಿ ಕರ್ನಾಟಕ ಅತ್ಯುತ್ತಮ ಕಾರ್ಯ ನಿರ್ವಹಿಸುತ್ತಿದೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಮೆಚ್ಚುಗೆ ವ್ಯಕ್ತಪಡಿಸಿದರು. ಆಲ್ಲದೇ, ಮಹಾತ್ಮ ಗಾಂಧೀಜಿ, ದೀನ್ ದಯಾಳ್ ಉಪಾಧ್ಯಾಯ, ರಾಮ್ ಮನೋಹರ್ ಲೋಹಿಯಾ ಮತ್ತಿತರರು ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಯ ಕನಸು ಕಂಡಿದ್ದರು.

ಆ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕ್ರಮ ಕೈಗೊಂಡು, ಹಲವು ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಇದರ ಪರಿಣಾಮ ಆಹಾರ ಉತ್ಪಾದನೆ ಹೆಚ್ಚಾಗಿದೆ ಎಂದರು. ಸಾಫ್ಟ್ ವೇರ್ ವಲಯಕ್ಕೆ ಮಾತ್ರ ತಂತ್ರಜ್ಞಾನದ ಅಗತ್ಯವಲ್ಲ, ಕೃಷಿ ಕ್ಷೇತ್ರಕ್ಕೂ ಅಗತ್ಯವಿದೆ. ಕೃಷಿಯಲ್ಲಿ ಇನ್ನೂ ಹೆಚ್ಚಿನ ತಂತ್ರಜ್ಞಾನ ಹಾಗೂ ನಾವಿನ್ಯತೆ ಅಳವಡಿಕೆಗೆ ಹೆಚ್ಚಿನ ಒತ್ತು ಹಾಗೂ ಪ್ರೋತ್ಸಾಹ ನೀಡಲಾಗುತ್ತಿದೆ. ಜೊತೆಗೆ ಪಶು ಸಂಗೋಪನೆ, ತೋಟಗಾರಿಕೆ ಮತ್ತು ಜಲಾನಯನ ಅಭಿವೃದ್ಧಿಯಲ್ಲೂ ತಾಂತ್ರಿಕತೆಗೆ ಆದ್ಯತೆ ನೀಡಲಾಗುತ್ತಿದೆ. ಇದಕ್ಕಾಗಿ ಶ್ರೇಷ್ಠತಾ ಸಂಸ್ಥೆ ಸ್ಥಾಪಿಸಲಾಗುವುದು ಎಂದು ಗಿರಿರಾಜ್ ಸಿಂಗ್ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version