ರಾಜಕೀಯ
ಸಚಿವ ಕೆ. ಎಸ್ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಸದನದಲ್ಲಿ ಕಾಂಗ್ರೆಸ್ ನಾಯಕರ ಅಹೋರಾತ್ರಿ ಧರಣಿ
ಸುದ್ದಿದಿನ,ಬೆಂಗಳೂರು : ರಾಷ್ಟ್ರ ಧ್ವಜದ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡಿದ ಸಚಿವ ಕೆ. ಎಸ್ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ನಾಯಕರು ಪಟ್ಟು ಹಿಡಿದಿದ್ದು, ಸದನದಲ್ಲಿ ಅಹೋರಾತ್ರಿ ಧರಣಿಗೆ ಮುಂದಾಗಿದ್ದಾರೆ.
ಮಧ್ಯಾಹ್ನದ ಕಲಾಪದ ಬಳಿಕ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರು ಈಶ್ವರಪ್ಪ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ, ಅವರನ್ನು ವಜಾ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಈ ನಡುವೆ ಸದನದಲ್ಲಿ ಧರಣಿಗೆ ಮುಂದಾಗಿರುವ ಹಿನ್ನಲೆ ಸಿದ್ದರಾಮಯ್ಯ ಅವರನ್ನು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಮನವೊಲಿಸುವ ಪ್ರಯತ್ನ ನಡೆಸಿದರೂ ಯಶಸ್ವಿಯಾಗಿಲ್ಲ.
ರಾಷ್ಟ್ರಧ್ವಜ, ರಾಷ್ಟ್ರ ಗೀತೆ ಮತ್ತು ಸಂವಿಧಾನ ರಾಷ್ಟ್ರದ ಪ್ರಮುಖ ಸಂಕೇತಗಳು. ಇವುಗಳಿಗೆ ಅವಮಾನ ಎಸಗುವ ಯಾವುದೇ ವ್ಯಕ್ತಿಯ ಕೃತ್ಯ ರಾಷ್ಟ್ರದ್ರೋಹದ್ದು. ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿರುವ ಗ್ರಾಮೀಣ ಅಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪನವರ ವಿರುದ್ಧ ರಾಷ್ಟ್ರ ದ್ರೋಹದ ಪ್ರಕರಣ ದಾಖಲಿಸಿ ಅವರನ್ನು ಗುರುವಾರ 11 ಗಂಟೆಯೊಳಗೆ ವಜಾಮಾಡದೆ ಇದ್ದರೆ ವಿಧಾನಮಂಡಲದ ಉಭಯ ಸದನಗಳಲ್ಲಿ ಪ್ರತಿಭಟನೆ ಮುಂದುವರೆಸುತ್ತೇವೆ ಎಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ತಿಳಿಸಿದ್ದಾರೆ.
ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿರುವ ಗ್ರಾಮೀಣ ಅಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪನವರ ವಿರುದ್ಧ ರಾಷ್ಟ್ರ ದ್ರೋಹದ ಪ್ರಕರಣ ದಾಖಲಿಸಿ ಅವರನ್ನು ಗುರುವಾರ 11 ಗಂಟೆಯೊಳಗೆ ವಜಾಮಾಡದೆ ಇದ್ದರೆ ವಿಧಾನಮಂಡಲದ ಉಭಯ ಸದನಗಳಲ್ಲಿ ಪ್ರತಿಭಟನೆ ಮುಂದುವರೆಸುತ್ತೇವೆ.
1/13#ದೇಶದ್ರೋಹಿಈಶ್ವರಪ್ಪ #ದೇಶದ್ರೋಹಿಬಿಜೆಪಿ— Siddaramaiah (@siddaramaiah) February 16, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243