ದಿನದ ಸುದ್ದಿ
ಸಚಿವ ಪ್ರಿಯಾಂಕ ಖರ್ಗೆ ಪಂಚಾಯತ್ ರಾಜ್ ಇಲಾಖೆ ನಿರ್ಲಕ್ಷ್ಯ | ದೂರು ನೀಡಿ 6 ತಿಂಗಳಾದರೂ ಯಾವುದೇ ಕ್ರಮವಿಲ್ಲ ; ವಕೀಲ ಡಾ.ಕೆ.ಎ.ಓಬಳಪ್ಪ ಆರೋಪ
ಸುದ್ದಿದಿನ,ದಾವಣಗೆರೆ: ಜಿಲ್ಲಾ ಪಂಚಾಯಿತಿ ಸಹಾಯಕ ನಿರ್ದೇಶಕ ಬಸವರಾಜ್ ಅವರನ್ನು ಬೇರೆ ಜಿಲ್ಲೆಗೆ ವರ್ಗಾಹಿಸುವಂತೆ ಸಿ.ಎಂ. ಸಿದ್ಧರಾಮಯ್ಯ ಆದೇಶ ನೀಡಿದ್ದರೂ, ಅಧಿಕಾರಿಗಳು ವರ್ಗಾಹಿಸದ ಕಾರಣ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ವಕೀಲ ಡಾ.ಕೆ.ಎ.ಓಬಳಪ್ಪ ದೂರು ನೀಡಿದ್ದಾರೆ.
ಸಿ.ಎಂ. ಸಿದ್ಧರಾಮಯ್ಯ ಅಧಿಕಾರ ದುರ್ಬಳಕೆ ಮತ್ತು ಸಾರ್ವಜನಿಕ ದೂರುಗಳ ಹಿನ್ನಲೆಯಲ್ಲಿ ಬಸವರಾಜ್ ಅವರನ್ನು ಬೇರೆ ಜಿಲ್ಲೆಗೆ ವರ್ಗಾಹಿಸುವಂತೆ 9, ನವಂಬರ್ 2023 ರಂದು ಸರ್ಕಾರದ ಪ್ರಧಾನ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಇವರಿಗೆ ಪತ್ರ ನೀಡಿ 2 ವರ್ಷಗಳಾದರೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.
ಸಿ.ಎಂ ಆದೇಶಕ್ಕೆ ಅಧಿಕಾರಿಗಳು ಕಿಮ್ಮತ್ತಿನ ಬೆಲೆ ನೀಡದ ಹಿನ್ನೆಲೆಯಲ್ಲಿ 30 ಮೇ 2025 ರಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಪ್ರಿಯಾಂಕ ಖರ್ಗೆ ಅವರಿಗೆ ವಕೀಲ ಡಾ.ಕೆ.ಎ.ಓಬಳಪ್ಪ ದೂರು ನೀಡಿದ್ದರು. ಆದರೆ ಸಚಿವರಿಗೆ ದೂರು ನೀಡಿ 6 ತಿಂಗಳು ಕಳೆದರೂ ಪ್ರಿಯಾಂಕ ಖರ್ಗೆ ಅವರಿಂದ ಈ ಬಗ್ಗೆ ಯಾವುದೇ ಪ್ರತ್ಯುತ್ತರ ಬಂದಿರುವುದಿಲ್ಲ.
ಬಸವರಾಜ್ ದಾವಣಗೆರೆ ಜಿಲ್ಲಾ ಪಂಚಾಯಿತಿಯಲ್ಲಿ 25 ವರ್ಷಗಳಿಂದಲೂ ಸೇವೆ ಸಲ್ಲಿಸುತ್ತಿದ್ದು, ಇವರು ತಮ್ಮ ಅಧೀನದ ಅಧಿಕಾರಿಗಳಿಗೆ ಕಿರುಕುಳ ನೀಡುವ ಆರೋಪವಿದ್ದು, ಸಾರ್ವಜನಿಕರಿಂದಲೂ ಇವರ ಮೇಲೆ ಸಾಕಷ್ಟು ದೂರುಗಳು ಬಂದಿರುತ್ತವೆ. ಈ ಕಾರಣದಿಂದ ಸಿ.ಎಂ.ಸಿದ್ಧರಾಮಯ್ಯ ವರ್ಗಾವಣೆಯ ಆದೇಶ ಹೊರಡಿಸಿರುತ್ತಾರೆ. ಆದರೆ ಬಸವರಾಜ್ ತಮ್ಮ ಅಧಿಕಾರವನ್ನು ಬಳಸಿಕೊಂಡು ಸಿ.ಎಂ. ಆದೇಶವನ್ನು ಮೂಲೆಗುಂಪು ಮಾಡಿರುತ್ತಾರೆ ಎಂದು ವಕೀಲ ಡಾ.ಕೆ.ಎ.ಓಬಳಪ್ಪ ಆರೋಪಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243