ದಿನದ ಸುದ್ದಿ
ನೆಲಮಂಗಲ ಸಮೀಪದ ದಾಸನಪುರದಲ್ಲಿ 306 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಕೃಷಿ ಮಾರುಕಟ್ಟೆ ನಿರ್ಮಾಣ : ಸಚಿವ ಶಿವಾನಂದಪಾಟೀಲ್

ಸುದ್ದಿದಿನ,ಬೆಂಗಳೂರು:ರಾಜ್ಯದಲ್ಲಿ ಪ್ರಸ್ತುತ 171 ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳು ಹಾಗೂ 410 ಉಪ ಮಾರುಕಟ್ಟೆಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ಸಚಿವ ಶಿವಾನಂದ ಪಾಟೀಲ್ ವಿಧಾನಪರಿಷತ್ತಿಗೆ ಇಂದು ತಿಳಿಸಿದರು.
ಪ್ರಶ್ನೋತ್ತರ ಅವಧಿಯಲ್ಲಿ ಉತ್ತರಿಸಿದ ಸಚಿವರು, ಸ್ವತಂತ್ರಮಾರುಕಟ್ಟೆ ಸಮಿತಿ ಸ್ಥಾಪನೆಗೆ ಸಂಬಂಧಪಟ್ಟಂತೆ ಬರುವ ಬೇಡಿಕೆಗಳನ್ನು ಕುರಿತು ಆರ್ಥಿಕ ಸಮೀಕ್ಷೆ ನಡೆಸಿದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಬೆಂಗಳೂರಿನ ಯಶವಂತಪುರ, ಎಪಿಎಂಸಿ ಮಾರುಕಟ್ಟೆಯಲ್ಲಿ ವಾಹನದಟ್ಟಣೆ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನೆಲಮಂಗಲ ಸಮೀಪದ ದಾಸನಪುರದಲ್ಲಿ 306 ಕೋಟಿ ರೂಪಾಯಿ ವೆಚ್ಚದಲ್ಲಿ ವಿಶಾಲ ಮಾರುಕಟ್ಟೆ ಅಭಿವೃದ್ಧಿಪಡಿಸಲಾಗಿದೆ.
ಎಪಿಎಂಸಿಗಳನ್ನು ಹೊರತುಪಡಿಸಿ ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು ಕಾಯ್ದೆಯಡಿ ಅವಕಾಶ ಕಲ್ಪಿಸಿ 4 ಖಾಸಗಿ ಮಾರುಕಟ್ಟೆ ಹಾಗೂ 65 ನೇರ ಖರೀದಿ ಕೇಂದ್ರಗಳನ್ನು ಆರಂಭಿಸಲು ಅನುಮತಿ ನೀಡಲಾಗಿದೆ. ಯಶವಂತಪುರ ಮಾರುಕಟ್ಟೆಯಿಂದ ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ ಮತ್ತು ಶುಂಠಿ ಸೇರಿದಂತೆ 4 ಉತ್ಪನ್ನಗಳನ್ನು ದಾಸನಪುರ ಉಪಮಾರುಕಟ್ಟೆಗೆ ಸ್ಥಳಾಂತರಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೆರೆಬಿಳಚಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ; 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ಚನ್ನಗಿರಿ:ತಾಲೂಕಿನ ಕೆರೆಬಿಳಚಿಯಲ್ಲಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ ,ಕ್ರಿಶ್ಚಿಯನ್, ಜೈನ್ ,ಬೌದ್ಧ ಸಿಖ್ ಪಾರ್ಸಿ ಧರ್ಮದವರಿಗೆ 75% ಸ್ಥಾನ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ 25% ಸ್ಥಾನಗಳು ಮೀಸಲಾಗಿವೆ.ವಿದ್ಯಾರ್ಥಿಗಳನ್ನು ಪ್ರವೇಶ ಪರೀಕ್ಷೆಯ ಆಧಾರದ ಮೇಲೆ ಮತ್ತು ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://sevasindhuservices.karnataka.gov.in/
ಪ್ರವೇಶ ಪಡೆಯಲು ಅರ್ಹತೆಗಳು
- 05 ನೇ ತರಗತಿಯಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
- ಪೋಷಕರ ಆದಾಯದ ಮಿತಿ ಎಸ್.ಸಿ/ಎಸ್.ಟಿ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ
- 1 ಲಕ್ಷ ರೂ.ಗಳು ಮತ್ತು ಅಲ್ಪಸಂಖ್ಯಾತರಿಗೆ 2.5ಲಕ್ಷ ರೂ.ಗಳು ಮತ್ತು ಹಿಂದುಳಿದ ವರ್ಗದವರಿಗೆ 44500/- ರೂ.ಗಳಿಗೆ ಮೀರಿರಬಾರದು.
ವಸತಿ ಶಾಲೆಯಲ್ಲಿ ದೊರೆಯುವ ಸೌಲಭ್ಯಗಳು
- ಆಯ್ಕೆಯಾದ ವಿದ್ಯಾರ್ಥಿಗಳಿಗೆ 6ನೇ ತರಗತಿಯಿಂದ 12 ತರಗತಿಯವರೆಗೆ ಉಚಿತ ಶಿಕ್ಷಣ.
- ಉಚಿತ ಪಠ್ಯ ಪುಸ್ತಕ, ಲೇಖನ ಸಾಮಗ್ರಿಗಳು, ಸಮವಸ್ತ್ರ, ಶೂ ಮತ್ತು ಸಾಕ್ಸ್, ಹಾಸಿಗೆ ಹೊದಿಕೆ ಜೊತೆಗೆ ಉತ್ತಮ ಮೂಲ ಸೌಲಭ್ಯ ಒದಗಿಸಲಾಗುವುದು.
- ಸುಸಜ್ಜಿತ ಕೊಠಡಿ ಹಾಗೂ ವಸತಿ ನಿಲಯಗಳು, ವಿದ್ಯುತ್ ವ್ಯವಸ್ಥೆ, 24×7 ಬಿಸಿ ನೀರಿನ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇದೆ.
- ನುರಿತ ಶಿಕ್ಷಕರು ಮತ್ತು ಉಪನ್ಯಾಸಕರಿಂದ ಭೋದನೆ, ಪ್ರತಿ ವಿಷಯಕ್ಕೆ ಸುಸಜ್ಜಿತ ಪ್ರಯೋಗಾಲಯ ಸೌಲಭ್ಯ ಹಾಗೂ ಡಿಜಿಟಲ್ ಗ್ರಂಥಾಲಯ ವ್ಯವಸ್ಥೆ ಇದೆ.
- ಉಚಿತ ವಸತಿ ಮತ್ತು ಭೋಜನ ವ್ಯವಸ್ಥೆ ಇದೆ. ಜೊತೆಗೆ 24×7 CCTV ನಿರೀಕ್ಷಣೆಯಲ್ಲಿ ಇರುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ : ಹೊಸ ಸದಸ್ಯರ ನೊಂದಣಿ, ನೊಂದಣಿಯಾದ ಸದಸ್ಯರನ್ನು ನವೀಕರಿಸಲು ಸೂಚನೆ

ಸುದ್ದಿದಿನ,ದಾವಣಗೆರೆ:ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959 ಹಾಗೂ ಸಹಕಾರ ಸಂಘಗಳ ನಿಯಮ 1960ರಡಿ ಜಿಲ್ಲೆಯಲ್ಲಿ ನೊಂದಣಿಯಾಗಿರುವ ಎಲ್ಲಾ ವಿಧದ ಸಹಕಾರ ಸಂಘಗಳ ಸದಸ್ಯರು ಮಾರ್ಚ್ 31ರೊಳಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಹೊಸ ಸದಸ್ಯರನ್ನು ನೊಂದಾಯಿಸುವ ಮತ್ತು ನೊಂದಣಿಯಾದ ಸದಸ್ಯರನ್ನು ನವೀಕರಿಸಲು ಮತ್ತು ಯಾವುದೇ ಒಂದು ಸಹಕಾರ ಸಂಘದ ಸದಸ್ಯರಾಗಿದ್ದರೆ, ಈ ಯೋಜನೆಯ ಫಲಾನಭವಿಗಳಾಗಬಹುದು ಎಂದು ಸಹಕಾರ ಸಂಘಗಳ ಉಪನಿಬಂಧಕ ಮಧು ಶ್ರೀನಿವಾಸ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಸಾಶನ ಪಡೆಯುತ್ತಿರುವ ಕಲಾವಿದರು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ

ಸುದ್ದಿದಿನ,ದಾವಣಗೆರೆ:ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಮಾಸಾಶನ ಪಡೆಯುತ್ತಿರುವ ಸಾಹಿತಿ, ಕಲಾವಿದರು ತಮ್ಮ ಆಧಾರ್ ಕಾರ್ಡ್, ಪಿಂಚಣಿ ಪುಸ್ತಕದ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದೊಂದಿಗೆ ಜೀವಿತಾವಧಿ ಪ್ರಮಾಣ ಪತ್ರವನ್ನು ಸಲ್ಲಿಸಲು ಸೂಚಿಸಿದೆ.
ಸಂಬಂಧಪಟ್ಟ ಬ್ಯಾಂಕ್ ಮ್ಯಾನೇಜರ್ ಸಹಿ ಪಡೆದು ನಿಗದಿತ ದಾಖಲೆಗಳೊಂದಿಗೆ ಮಾರ್ಚ್ 31 ರೊಳಗೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ 27ರಲ್ಲಿನ ಕನ್ನಡ ಮತ್ತು ಸಂಸ್ಕøತಿ ಇಲಾಖೆಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕೆಂದು ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08192-234849 ಗೆ ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ಮಾರ್ಚ್ 15 ರಂದು ಬೃಹತ್ ಉದ್ಯೋಗ ಮೇಳ ; ಸಂಜೆ ಬಿಐಇಟಿ ಸಾಂಸ್ಕೃತಿಕ ಕೇಂದ್ರದಲ್ಲಿ ಸಂಗೀತ ಪ್ರಭ
-
ದಿನದ ಸುದ್ದಿ6 days ago
ದಾವಣಗೆರೆಯಲ್ಲಿ ಉದ್ಯೋಗ ಮೇಳ | ಬನ್ನಿ ಭಾಗವಹಿಸಿ, ಉದ್ಯೋಗ ಪಡೆಯಿರಿ
-
ದಿನದ ಸುದ್ದಿ6 days ago
ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ’
-
ದಿನದ ಸುದ್ದಿ6 days ago
ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ಖಾತ್ರಿ ಯೋಜನೆಯ ಅನುಷ್ಟಾನ ಸಮಿತಿಗಳಿಂದ, ಶಾಸಕರ ಘನತೆಗೆ ಕುಂದಿಲ್ಲ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ6 days ago
ದಾವಣಗೆರೆ | ಮನೆ ಬೋರ್ ವೆಲ್ ನೀರು ವಾಣಿಜ್ಯ ಉದ್ದೇಶಕ್ಕೆ ಬಳಕೆ ; ಕ್ರಮ ಕೈಗೊಳ್ಳಲು ಸರಸ್ವತಿ ಬಡಾವಣೆ ನಿವಾಸಿಗಳ ಆಗ್ರಹ
-
ದಿನದ ಸುದ್ದಿ6 days ago
ದಾವಣಗೆರೆ | ಪೊಲೀಸ್ ಪಬ್ಲಿಕ್ ಶಾಲೆಗೆ ನುರಿತ ಶಿಕ್ಷಕರಿಂದ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ವಾಣಿಜ್ಯ ಮಳಿಗೆಗಳ ಹರಾಜು ದಿನಾಂಕ ಮುಂದೂಡಿಕೆ