ದಿನದ ಸುದ್ದಿ
ಲೈಂಗಿಕ ದೌರ್ಜನ್ಯ ಪ್ರಕರಣ: ಫಾಸ್ಟ್ ಟ್ರ್ಯಾಕ್ ಸ್ಪೆಷಲ್ ಕೋರ್ಟ್
ಸುದ್ದಿದಿನ ಡೆಸ್ಕ್: ದೇಶದಲ್ಲಿ ನಡೆದಿರುವ ಮಹಿಳೆಯರು ಮತ್ತು ಮಕ್ಕಳು ಲೈಂಗಿಕ ದೌರ್ಜನ್ಯ ಪ್ರಕರಣಗಳ ಇತ್ಯರ್ಥ ಮಾಡಲು 1,000 (ಒಂದು ಸಾವಿರ)ಕ್ಕೂ ಅಧಿಕ ಫಾಸ್ಟ್ ಟ್ರ್ಯಾಕ್ ಸ್ಪೆಷಲ್ ಕೋರ್ಟ್‌ಗಳ ಅವಶ್ಯಕತೆ ಇದೆ ಎಂದು ಕೇಂದ್ರ ಕಾನೂನು ಸಚಿವಾಲಯ ಅಂದಾಜು ಮಾಡಿದಿಯಂತೆ.
ಅತ್ಯಾಚಾರ ಪ್ರಕರಣಗಳ ಶೀಘ್ರ ವಿಲೇವಾರಿ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸುವುದಕ್ಕಾಗಿ ಕೋರ್ಟ್‌ಗಳಿಗೆ ಅಗತ್ಯ ಸೌಲಭ್ಯ ನೀಡಲು ಬೃಹತ್ ಯೋಜನೆ ಜಾರಿ ಚಿಂತನೆ ನಡೆಸಿದೆ. ವಿಶೇಷ ನ್ಯಾಯಾಲಯಗಳ ರಚನೆಗೆ ಕಾನೂನು ಸಚಿವಾಲಯ ಅಧೀನದ ನ್ಯಾಯಾಂಗ ಇಲಾಖೆಯು 767.25 ಕೋಟಿಗಳ ವೆಚ್ಚದ ಅಂದಾಜು ಪಟ್ಟಿ ಸಿದ್ಧಪಡಿಸಿದೆ. ಇದರಲ್ಲಿ 474 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ನೀಡಲಿದೆ ಎಂದು ಗೃಹ ಸಚಿವಾಲಯಕ್ಕೆ ತಿಳಿಸಿದೆ.
ಅತ್ಯಾಚಾರ ಮತ್ತು ಪೋಸ್ಕೋ (ಪ್ರೊಟೆಕ್ಷನ್ ಆಫ್ ಚಿಲ್ಡ್ರನ್ ಫ್ರಮ್ ಸೆಕ್ಸ್ಯುಲ್ ಅಫೆನ್ಸಸ್) ಕಾಯ್ದೆಯಡಿ ದಾಖಲಾದ ಪ್ರಕರಣಗಳ ಇತ್ಯರ್ಥಕ್ಕೆ ಅಂದಾಜು 1,023 ಎಫ್.ಟಿ.ಎಸ್.ಸಿ.(ಫಾಸ್ಟ್ ಟ್ಯ್ರಾಕ್ ಸ್ಪೆಷಲ್ ಕೋರ್ಟ್) ಅಗತ್ಯವಿದೆ. ಇವುಗಳ ರಚನೆಗೆ ಅಗತ್ಯವಿರುವ 767.25 ಕೋಟಿ ರೂ.ಗಳಲ್ಲಿ 464 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ತನ್ನ ಪಾಲಿನ (೬೧) ಅನುದಾನದಡಿ 464 ಕೋಟಿ ರೂ ನೀಡಲಿದೆ. ಇದಕ್ಕೆ ವರದಿಯನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ತಿಳಿಸಿದೆ.
12 ವರ್ಷದೊಳಗಿನ ಮಕ್ಕಳ ಮೇಲೆ ಅತ್ಯಾಚಾರ ಎಸಗಿದವರಿಗೆ ಮರಣ ದಂಡನೆ ವಿಧಿಸುವಂತ ಆದೇಶವನ್ನು ಇತ್ತೀಚೆಗೆ ಜಾರಿಗೊಳಿಸಿದ ಹೊಸ ಯೋಜನೆಯಲ್ಲಿ ಅಡಕವಾಗಿದೆ. ಐಪಿಸಿ, ಸಿಆರ್ಪಿಸಿ, ಎವಿಡರನ್ಸ್ ಆ್ಯಕ್ಟ್ ಮತ್ತು ಪೋಸ್ಕೋ ಕಾಯ್ದೆಗಳಿಗೆ ಇತ್ತೀಚೆಗೆ ತಿದ್ದುಪಡಿ ತರಲಾಗಿದೆ. ಲೈಂಗಿಕ ದೌರ್ಜನ್ಯ ಪ್ರಕರಣಗಳ ಇತ್ಯರ್ಥಕ್ಕೆ ಅಗತ್ಯವಿರುವ ಕೋರ್ಟ್‌ಗಳ ಸಂಖ್ಯೆಯನ್ನು ನಿಗದಿ ಮಾಡಿ ಯೋಜನೆ ರೂಪಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಪರಿಣಾಮಕಾರಿಯಾಗಿ ಯೋಜನೆ ಅನುಷ್ಠಾನಗೊಳಿಸಲು ನಿರ್ಧರಿಸಿದ್ದು, ಇದಕ್ಕಾಗಿ ಉತ್ತಮ ಗುಣಮಟ್ಟದ ಇನ್ಫ್ರಾಸ್ಟ್ರಕ್ಚರ್, ಕಾನೂನು ಆಡಳಿತ, ಕೆಳ ನ್ಯಾಯಾಲಯಗಳಿಗೆ ಅಗತ್ಯವಿರುವ ನ್ಯಾಯಾಂಗ ಅಧಿಕಾರಿಗಳ ಸಂಖ್ಯೆ, ಪಬ್ಲಿಕ್ ಪ್ರಾಸಿಕ್ಯುಟರ್.ಗಳ ಹೆಚ್ಚುವರಿ ಹುದ್ದೆಗಳು, ದಕ್ಷ ತನಿಖಾಧಿಕಾರಿಗಳು ಮತ್ತು ಫೋರೆನ್ಸಿಕ್ ಕಿಟ್ ಒದಗಿಸುವ ಅಂಶವನ್ನು ಯೋಜನೆ ಒಳಗೊಂಡಿದೆ.
ಮಹಿಳೆ ಮತ್ತು ಎಸ್ಸಿ, ಎಸ್ಟಿ, ಹಿರಿಯ ನಾಗರಿಕರು, ನಿರ್ಗತಿಕರಿಗೆ ಸಂಬಂಧಿಸಿದ ಪ್ರಕರಣಗಳ ಇತ್ಯರ್ಥಕ್ಕಾಗಿಯೇ ದೇಶದಲ್ಲಿ ಸರಿಸುಮಾರು 524 ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗಳು ಕಾರ್ಯನಿರ್ವಹಿಸುತ್ತಿವೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಳೆದ ವರ್ಷ ಮಾರ್ಚ್‌ನಲ್ಲಿ ನಡೆದ ಸಂಸತ್ ಸಭೆಯಲ್ಲಿ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಲಿಖಿತ ಪ್ರತಿಕ್ರಿಯೆ ನೀಡಿದ್ದರು. ಮಹಾರಾಷ್ಟ್ರದಲ್ಲಿ 100, ಉತ್ತರ ಪ್ರದೇಶದಲ್ಲಿ 83, ತಮಿಳುನಾಡಿನಲ್ಲಿ 39, ಆಂಧ್ರಪ್ರದೇಶದಲ್ಲಿ 38 ಮತ್ತು ತೆಲಂಗಾಣದಲ್ಲಿ 34 ಸೇರಿದಂತೆ 524 ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗಳಿವೆ. ಉದ್ದೇಶಿತ ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗಳು ವಿಶೇಷವಾಗಿ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳ ಬಗೆಹರಿಸಲು ಕೆಲಸ ಮಾಡಲಿವೆ ಎಂದು ಮಾಹಿತಿ ನೀಡಿದ್ದಾರೆ.
12ವರ್ಷದೊಳಗಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದರೆ ಮರಣ ದಂಡನೆ ಹಾಗೂ 16ರಿಂದ 12 ವರ್ಷದೊಳಗಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಗಳಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಲಿದೆ. ಅತ್ಯಾಚಾರ ಪ್ರಕರಣಗಳನ್ನು ಎರಡು ತಿಂಗಳ ಒಳಗೆ ತನಿಖೆ ಪೂರ್ಣಗೊಳಿಸಬೇಕು. ಆರು ತಿಂಗಳೊಳಗೆ ಪ್ರಕರಣ ಇತ್ಯರ್ಥವಾಗುವಂತ ನಿಯಮವಿದೆ. ಆಸ್ಪತ್ರೆ ಮತ್ತು ಪೊಲೀಸ್ ಠಾಣೆಗಳಿಗೆ ವಿಶೇಷ ಫೋರೆನ್ಸಿಕ್ ಕಿಟ್ ಪೂರೈಕೆಯಾಗಲಿದೆ. ಅತ್ಯಾಚಾರ ಪ್ರಕರಣಗಳ ಇತ್ಯರ್ಥಗೊಳಿಸಲಿಜ್ಕಾಗೇ ಎಲ್ಲ ರಾಜ್ಯಗಳಲ್ಲಿ ಅತ್ಯಾಧುನಿಕ ಫೋರೆನ್ಸಿಕ್ ಪ್ರಯೋಗಾಲಯ ಆರಂಭವಾಗಲಿವೆ.

ದಿನದ ಸುದ್ದಿ
ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : 2023-24 ನೇ ಸಾಲಿನ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಒಳಪಡುವ ಮೆಟ್ರಿಕ್ ಪೂರ್ವ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್ಲೈನ್ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ) ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಇಲಾಖೆಗಳ ವಿದ್ಯಾರ್ಥಿನಿಲಯಗಳಲ್ಲಿ 5 ನೇ ತರಗತಿಯಿಂದ 10 ನೇ ತರಗತಿಯವರೆಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ ಎಸ್.ಎಸ್.ಪಿ ಐಡಿಯೊಂದಿಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ವಿಳಾಸ: https://shp.karnataka.gov.in ಇಲ್ಲಿ ಸಂದರ್ಶಿಸಿ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬೇಕೆಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ನಾಗರಾಜ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಜಗಳೂರು | ಸಿಡಿಲು ಬಡಿದು ಇಬ್ಬರು ರೈತರು ಸಾವು

ಸುದ್ದಿದಿನ, ದಾವಣಗೆರೆ : ಸಿಡಿಲು ಬಡಿದು, ಇಬ್ಬರು ರೈತರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಅಣಬೂರು ಗೊಲ್ಲರಹಟ್ಟಿಯಲ್ಲಿ ನಿನ್ನೆ ಸಂಜೆ ನಡೆದಿದೆ.
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಮಳೆಬಂದ ಕಾರಣ ರಕ್ಷಣೆ ಪಡೆಯಲು ಮರದ ಕೆಳಗೆ ನಿಂತಿದ್ದಾಗ ಈ ದುರಂತ ಸಂಭವಿಸಿದೆ. ಮೃತರ ಕುಟುಂಬಕ್ಕೆ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಜಿಲ್ಲಾಡಳಿತ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸರ್ಕಾರಿ ಸಾರಿಗೆ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ; ನಾಡಿದ್ದು ವಿಧ್ಯುಕ್ತ ಚಾಲನೆ

ಸುದ್ದಿದಿನ, ಬೆಂಗಳೂರು : ಸರ್ಕಾರದ ಗ್ಯಾರಂಟಿ ಘೋಷಣೆಗಳಲ್ಲೊಂದಾದ ಶಕ್ತಿ ಯೋಜನೆಯಡಿ ಎಲ್ಲಾ ಮಹಿಳೆಯರಿಗೆ ಸರ್ಕಾರಿ ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಡಿದ್ದು ವಿಧ್ಯುಕ್ತ ಚಾಲನೆ ನೀಡಲಿದ್ದಾರೆ.
ಕೆಎಸ್ಆರ್ಟಿಸಿ ಸೇರಿದಂತೆ ಎಲ್ಲಾ ರಸ್ತೆ ಸಾರಿಗೆ ನಿಗಮಗಳ ಬಸ್ಗಳಲ್ಲಿ ಇದೇ 11ರಿಂದ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ದೊರೆಯಲಿದೆ.
ಈ ಯೋಜನೆಗೆ ರಾಜ್ಯಾದ್ಯಂತ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಸಂಬಂಧಪಟ್ಟ ಜಿಲ್ಲೆಗಳಲ್ಲಿ ಯೋಜನೆಗೆ ಏಕಕಾಲಕ್ಕೆ ಚಾಲನೆ ನೀಡಲಿದ್ದು, ವಿದ್ಯಾರ್ಥಿನಿಯರೂ ಸೇರಿದಂತೆ ಎಲ್ಲಾ ವರ್ಗಗಳ ಮಹಿಳೆಯರಿಗೆ ಎಸಿ ಹಾಗೂ ಲಕ್ಷುರಿ ಬಸ್ಗಳನ್ನು ಹೊರತುಪಡಿಸಿ ಇತರ ಎಲ್ಲಾ ಸರ್ಕಾರಿ ಸಾರಿಗೆ ಬಸ್ಗಳಲ್ಲಿ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯ ಒದಗಿಸಲಾಗುವುದು. ಇದರಿಂದ ಶೇಕಡ 94 ರಷ್ಟು ಮಹಿಳಾ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಬಸ್ಗಳಲ್ಲಿ ಶೇ. 50 ರಷ್ಟು ಆಸನಗಳನ್ನು ಪುರುಷರಿಗೆ ಮೀಸಲಿರಿಸಲಾಗುವುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಲೈಫ್ ಸ್ಟೈಲ್7 days ago
ರಣ ಬೇಟೆಗಾರ ‘ಕೆನ್ನಾಯಿ’ ವಿನಾಶವಾದ ಕತೆ..!
-
ದಿನದ ಸುದ್ದಿ7 days ago
ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರ
-
ದಿನದ ಸುದ್ದಿ7 days ago
ನಾಳೆ ದಾವಣಗೆರೆಗೆ ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ7 days ago
ಜೂನ್ 8 ರಿಂದ ಕೋಳಿ ಸಾಕಾಣಿಕೆ ತರಬೇತಿ ಶಿಬಿರ
-
ದಿನದ ಸುದ್ದಿ7 days ago
ಒಡಿಶಾದಲ್ಲಿ ಸಿಲುಕಿರುವ ಕನ್ನಡಿಗರು ಇಂದು ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಆಗಮನ
-
ದಿನದ ಸುದ್ದಿ5 days ago
ಗೋ ಹತ್ಯೆ ನಿಷೇಧ ಕಾಯ್ದೆ ; ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ4 days ago
ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ನಿಗದಿ
-
ದಿನದ ಸುದ್ದಿ7 days ago
ರಾಷ್ಟ್ರಮಟ್ಟದ ಖೋ-ಖೋ ಪಂದ್ಯಾವಳಿಗೆ ಕ್ರೀಡಾಪಟುಗಳ ಆಯ್ಕೆ