ದಿನದ ಸುದ್ದಿ
ಬ್ರೇಕಿಂಗ್: ಕೇಂದ್ರ ಸಚಿವ ಸಂಪುಟಕ್ಕೆ ಸರ್ಜರಿ?
ದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮಂತ್ರಿ ಮಂಡಲದಲ್ಲಿ ಬಜೆಟ್ ಮಂಡನೆ ಯಾದ ಬಳಿಕ ಭಾರಿ ಬದಲಾವಣೆ ಆಗಲಿದ್ದು, ಆರ್ಥಿಕ ಹಾಗೂ ಬ್ಯಾಂಕಿಂಗ್ ಕ್ಷೇತ್ರದ ಪರಿಣಿತರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆಗಳಿವೆ.
ದೇಶದ ಆರ್ಥಿಕ ಪರಿಸ್ಥಿತಿಯ ಸುಧಾರಣೆಗೆ ಮುಂದಾಗಿರುವ ಕೇಂದ್ರ ಸರ್ಕಾರದ ಆರ್ಥಿಕ, ಬ್ಯಾಂಕಿಂಗ್ ಕ್ಷೇತ್ರದ ಪರಿಣಿತರಿಗೆ ಆದ್ಯತೆ ನೀಡಲಿದ್ದು, ಸಚಿವ ಸಂಪುಟದಲ್ಲಿ ಸ್ವಲ್ಪ ಬದಲವಣೆಗೆ ಮುಂದಾಗಿದೆ. ಬ್ರಿಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ವಿ. ಕಾಮತ್ ಹಾಗೂ ನೀತಿ ಆಯೋಗದ ಸಿಇಒ ಅಮಿತಾಬ್ ಕಾಂತ್ ಶೀಘ್ರವೇ ಕೇಂದ್ರ ಸಚಿವ ಸಂಪುಟ ಸೇರಿಕೊಳ್ಳಲಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.