Connect with us

ದಿನದ ಸುದ್ದಿ

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ ಪಠ್ಯವಾಗಿ ಎಂ.ಕೆ.ಶೇಖ್ ಅವರ ಕಥೆ ಆಯ್ಕೆ

Published

on

ಸುದ್ದಿದಿನ ಡೆಸ್ಕ್ : ಎಂ.ಕೆ.ಶೇಖ್ ಅವರ ‘ನೂಲು’ ಕಥಾ ಸಂಕಲನದಿಂದ ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯವೂ ‘ಮನುಷ್ಯತ್ವದೆಡೆಗೆ ಅವ್ಹಾನ’ ಎನ್ನುವ ಕಥೆಯನ್ನು ಬಿ.ಕಾಂ. ವಿದ್ಯಾರ್ಥಿಗಳಿಗೆ ಪಠ್ಯಾವಾಗಿ ಸ್ವೀಕರಿಸಿದೆ.ಎಂದು ಕನ್ನಡ ಸಾಂಸ್ಕೃತಿಕ ಗತವೈಭವ ಅಕಾಡೆಮಿಯ ಮುಖ್ಯಸ್ಥರಾದ ಡಾ. ಷಕೀಬ್ ಎಸ್ ಕಣದ್ಮನೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ‌.

ಎಂ.ಕೆ.ಶೇಖ್ ಅವರ ಪರಿಚಯ

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದಲ್ಲಿ 20-07-1980 ರಂದು ಜನಿಸಿ,ಮೌಕುಶೇ ಎನ್ನುವ ಕಾವ್ಯನಾಮದಿಂದ ಪರಿಚಿತರಾದ ಮೌಲಾಲಿ.ಕುತುಬುದ್ದೀನ್ .ಶೇಖ್ ಅವರು ಶ್ರೀ ಕುತಬುದ್ದೀನ್ ಶೇಖ್ ಹಾಗೂ ಶ್ರೀಮತಿ ಭೂಮಾ ಶೇಖ್ ಇವರ ಎಂಟನೆ ಪುತ್ರ.ಇವರು ತಮ್ಮ ಪ್ರಾಥಮಿಕ,ಪ್ರೌಢ ಹಾಗೂ ಮಾಧ್ಯಮಿಕ ಶಿಕ್ಷಣವನ್ನು ಮಹಾರಾಷ್ಟ್ರ ಗಡಿಯ ಸಾಂಗಲಿ ಜಿಲ್ಲೆಯ ಜತ್ತ ತಾಲೂಕಿನ ಬೆಳ್ಳುಂಡಗಿ ಗ್ರಾಮದಲ್ಲಿ ಓದಿ ಮುಗಿಸುತ್ತಾರೆ.

ತಮ್ಮ ಪ್ರಾಥಮಿಕ ಶಾಲಾ ಪದವಿ (ಡಿ.ಎಡ್) ನ್ನು ಕೋಲಾರ ಜಿಲ್ಲೆಯ ಕೆಜಿಎಫ್ ನಲ್ಲಿ ಓದಿದ್ದಾರೆ. ನಂತರ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ಖಾಸಗಿ ಶಾಲಾ ಶಿಕ್ಷಕ ವೃತ್ತಿಯೊಂದಿಗೆ ತಮ್ಮ ಸಾಹಿತ್ಯ ಕೃಷಿಯನ್ನು ಮಾಡುತ್ತಾರೆ. ಸದ್ಯ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಗ್ರಾಮದಲ್ಲಿ ಜುನ್ನೇದಿಯಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ಭಾಷಾ ಶಿಕ್ಷಕರಾಗಿ ಸೇವೆ ಸಲ್ಲಿಸುತಿದ್ದಾರೆ.

ತಮ್ಮ ಪ್ರೌಢ ಶಾಲಾ ಜೀವನದಿಂದಲೂ ಕಾವ್ಯ, ಸಾಹಿತ್ಯದ ಗೀಳು ಹಚ್ಚಿಕೊಂಡ ಇವರು ಇಲ್ಲಿಯವರೆಗೆ ಏಳು ಕೃತಿಗಳನ್ನು ರಚಿಸಿದ್ದಾರೆ. ಭೂಮಾತೆ ನನ್ನ ಮಾತೆ- ಕವನ ಸಂಕಲನ. ನನ್ನೂರಿಗೆ ಬೇಂದ್ರೆ ಹಾಗೂ ಇತರ ಕಥೆಗಳು- ಕಥಾ ಸಂಕಲನ. ಪ್ರತಿಕೃತಿ- ವಿಮರ್ಶಾ ಕೃತಿ. ಜಾತಿಗಳ ಜಾಲದಿಂದ- ಕಾದಂಬರಿ. ಭೂಮಾತೆಯ ಮಡಿಲಲ್ಲಿ- ಆಧುನಿಕ ವಚನ ಸಂಕಲನ. ನೂಲು- ಕಥಾ ಸಂಕಲನ. ಹಾಗೂ ಸಮಭಾವ- ಸಂಪಾದಿತ ಕವನ ಸಂಕಲನ. ಮುಂತಾದ ಕೃತಿಗಳನ್ನು ಹೊರ ತಂದಿದ್ದಾರೆ.ಇವಲ್ಲದೆ ದೇಶ ವಿದೇಶಗಳ ಆಧುನಿಕ ಪ್ರಾಚೀನ ನಾಣ್ಯ ನೋಟುಗಳನ್ನು,ಅಂಚೆ ಚೀಟಿಗಳನ್ನು ಮತ್ತು ವಿಶೇಷ ಚಿತ್ರಗಳನ್ನು ಸಂಗ್ರಹಿಸುವ ಹವ್ಯಾಸ ಹೊಂದಿದ್ದಾರೆ.

ಶ್ರೀ ಎಂ.ಕೆ.ಶೇಖ್ ಇವರಿಗೆ ಇಂಡಿ ತಾಲೂಕ ಕ.ಸಾ.ಪ ಉತ್ತಮ ಶಿಕ್ಷಕ ಪ್ರಶಸ್ತಿ, ವಿಜಯಪುರ ಜಿಲ್ಲಾ ಕಸಾಪ ಉತ್ತಮ ಶಿಕ್ಷಕ ಪ್ರಶಸ್ತಿ, ಚನ್ನಬಸವಶ್ರಿ ಸಂಶೋಧನಾ ಶಿಕ್ಷಕ ಪ್ರಶಸ್ತಿ, ಬಸವಶ್ರೀ ಕಲಾ ಶಿಕ್ಷಕ ಪ್ರಶಸ್ತಿ, ವಿಶ್ವಕವಿ ಕುವೆಂಪು ಕವಿಕಾವ್ಯ ಪ್ರಶಸ್ತಿ, ಕಾಶ್ಮೀರದ ಮೊಕದಮ್ ಸಾಹಿಬ್ ರಾಷ್ಟ್ರೀಯ ಸಾಹಿತ್ಯ ಪುರಸ್ಕಾರ, ವಿವೇಕಾನಂದ ಯುವ ಪುರಸ್ಕಾರ, ಕರ್ನಾಟಕ ಶಿಕ್ಷಣ ರತ್ನ ಪ್ರಶಸ್ತಿ, ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ, ಚನ್ನೈನ ಫ್ಯೂಚರ ಕಲಾಂ ಪ್ರಶಸ್ತಿ ಇನ್ನೂ ಹಲವಾರು ಪ್ರಶಸ್ತಿಗಳು ರಾಜ್ಯ ಹಾಗೂ ದೇಶಾದ್ಯಂತ ಅನೇಕ ಸಂಘ ಸಂಸ್ಥೆಗಳಿಂದ ಸಂದಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಬಿಜೆಪಿಯ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ಎನ್.ಬಿ.ಭಾರ್ಗವಿ ದ್ರಾವಿಡ್ ಆಯ್ಕೆ

Published

on

ಸುದ್ದಿದಿನ,ಚಿತ್ರದುರ್ಗ : ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಯಾಗಿ ಚಿತ್ರದುರ್ಗದ ಶ್ರೀಮತಿ ಎನ್.ಬಿ.ಭಾರ್ಗವಿ ದ್ರಾವಿಡ್ ಅವರನ್ನು ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಸಂಸದರಾದ ತೇಜಸ್ವಿ ಸೂರ್ಯ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ಶಾಸಕ ಧೀರಜ್ ಮುನಿರಾಜ್ ರವರು ಅಧಿಕೃತ ನೇಮಕ ಪತ್ರ ನೀಡುವುದರ ಮೂಲಕ ಆಯ್ಕೆ ಮಾಡಲಾಯಿತು.

ಭಾರ್ಗವಿ ದ್ರಾವಿಡ್ ಅವರು ಈ ಹಿಂದೆ ಭಾರತ ಸರ್ಕಾರವು ಚಿತ್ರದುರ್ಗ ನೆಹರು ಯುವ ಕೇಂದ್ರದ ಸಲಹಾ ಸಮಿತಿಯ ಸದಸ್ಯರಾಗಿ ನೇಮಕ ಮಾಡಿತ್ತು. ಹಾಗೂ ದಾವಣಗೆರೆ ವಿಶ್ವ ವಿದ್ಯಾನಿಲಯದಲ್ಲಿ ವಿದ್ಯಾವಿಷಯಕ ಪರಿಷತ್ತಿನ ಸದಸ್ಯರಾಗಿ ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಲಾಗಿತ್ತು.

ಎಸ್.ಸಿ.ಮೋರ್ಚಾದ ರಾಜ್ಯ ಕಾರ್ಯ ಕಾರಿಣಿ ಸದಸ್ಯರಾಗಿ ಪ್ರವಾಸ ಕೈಗೊಂಡು ಕೆಲಸ ಮಾಡಿದ್ದರು. ಎ.ಬಿ.ವಿ.ಪಿ ಸಂಘಟನೆಯಲ್ಲಿಯೂಸಹ ಸಾಕಷ್ಟು ರಾಜ್ಯ ಮಟ್ಟದ ಜವಾಬ್ದಾರಿ ಗಳನ್ನು ನಿಭಾಯಿಸಿದ್ದರು.ಬರುವ 2024 ರ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಆಕಾಂಕ್ಷಿ ಕೂಡ ಆಗಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಪಿಎಲ್, ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಎಪಿಎಲ್, ಬಿಪಿಎಲ್ ಪಡಿತರ ಚೀಟಿಗಳಿಗಾಗಿ ಹೊಸ ಅರ್ಜಿಗಳನ್ನು ಏಪ್ರಿಲ್ 1 ರಿಂದ ಸ್ವೀಕರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ ವಿಧಾನಸಭೆಗೆ ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ಕುಟುಂಬದ ಆದಾಯ1.20 ಲಕ್ಷ ರೂಪಾಯಿಗಿಂತ ಹೆಚ್ಚಿದ್ದರೆ ಅಂತಹವರನ್ನು ಬಿಪಿಎಲ್ ಚೀಟಿಯಿಂದ ಹೊರಗಿಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ : ಅವಧಿ ವಿಸ್ತರಣೆ

Published

on

ಸುದ್ದಿದಿನ ಡೆಸ್ಕ್ : ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವ ಗಡುವನ್ನು ಮತ್ತೆ ಮೂರು ತಿಂಗಳ ಕಾಲ ವಿಸ್ತರಣೆ ಮಾಡುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧಾನ ಪರಿಷತ್‌ಗಿಂದು ತಿಳಿಸಿದ್ದಾರೆ.

ಪ್ರಶ್ನೋತ್ತರ ಕಲಾಪದಲ್ಲಿ ಅವರು, ಕಾಂಗ್ರೆಸ್‌ನ ಮಾದೇಗೌಡ ಅವರ ಪ್ರಸ್ತಾಪಕ್ಕೆ ಉತ್ತರಿಸಿ, ಸುಪ್ರೀಂಕೋರ್ಟ್ ನಿರ್ದೇಶನದಂತೆ ರಾಜ್ಯದಲ್ಲಿ ಇದುವರೆಗೂ 18 ಲಕ್ಷ ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಸಲಾಗಿದೆ. ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಇದು ನಡೆಯಬೇಕಾಗಿರುವುದರಿಂದ ಮೂರು ತಿಂಗಳು ವಿಸ್ತರಣೆ ಮಾಡಲಾಗಿದೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending