ದಿನದ ಸುದ್ದಿ

ಅಭಿವೃದ್ಧಿಯೇ ನನ್ನ ಗುರಿ, ಮಾದರಿ ಕ್ಷೇತ್ರವನ್ನಾಗಿ ಮಾಡುವೆ: ಶಾಸಕ ಬಸವರಾಜು ವಿ ಶಿವಗಂಗಾ

Published

on

ಸುದ್ದಿದಿನ,ಚನ್ನಗಿರಿ:ಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ಮಾಡುವ ಸಂಕಲ್ಪ ಹೊಂದಿದ್ದೇನೆ. ಅಭಿವೃದ್ಧಿ ಮಾಡುವುದೇ ನನ್ನ ಗುರಿಯಾಗಿದೆ ಎಂದು ಶಾಸಕರಾದ ಬಸವರಾಜು ವಿ ಶಿವಗಂಗಾ ತಿಳಿಸಿದರು.

ತಾಲ್ಲೂಕಿನ ಕೆರೆಬಿಳಚಿ ಗ್ರಾಮದ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲಾ ಆವರಣದಲ್ಲಿ ನೂತನ ವಿದ್ಯಾರ್ಥಿ ನಿಲಯ ಕಟ್ಟಡ ನಿರ್ಮಾಣದ ಕಾಮಗಾರಿಗೆ ಶಂಕುಸ್ಥಾಪನೆ ನೇರವೇರಿಸಿ ಮಾತನಾಡಿದ ಅವರು ನನ್ನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ನನ್ನ ಅಧಿಕಾರದ ಅವಧಿಯಲ್ಲಿ ಮಾದರಿ ತಾಲ್ಲೂಕು ಮಾಡುವ ಕನಸಿದೆ ಎಂದರು.

ತಾಲ್ಲೂಕಿನ ಶೈಕ್ಷಣಿಕ ಪ್ರಗತಿ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಬಡ ವಿದ್ಯಾರ್ಥಿಗಳು ಹೆಚ್ಚಿನದಾಗಿ ವಸತಿ ಶಾಲೆಗಳಿಗೆ ಅರ್ಜಿ ಹಾಕುತ್ತಿದ್ದಾರೆ. ಬಡ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯಬೇಕೆಂಬುದು ನನ್ನ ಆಸೆ. ಈ ಕಾರಣ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಬರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಜಿ+4 ವಿದ್ಯಾರ್ಥಿ ನಿಲಯ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ ಮಾಡಲಾಗಿದೆ. ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಿ ಬಡ ಮಕ್ಕಳಿಗೆ ಉತ್ತಮ ವಸತಿಯೊಂದಿಗೆ ಶಿಕ್ಷಣ ಒದಗಿಸಲಾಗುವುದು ಎಂದರು.

ಈ ವೇಳೆ ಗ್ರಾಮ ಪಂಚಾಯ್ತಿಯ ಅಧ್ಯಕ್ಷರು, ಸದಸ್ಯರು ಹಾಗೂ ಪಕ್ಷದ ಮುಖಂಡರು ಮತ್ತು ವಸತಿ ನಿಲಯದ ಪ್ರಾಚಾರ್ಯರು ಸಿಬ್ಬಂದಿಗಳು, ಕಾಂಗ್ರೆಸ್‌ ಮುಖಂಡರುಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version