ದಿನದ ಸುದ್ದಿ
ವಿಡಿಯೋ | ಬಿಜೆಪಿ ಶಾಸಕ ಸಿ.ಟಿ.ರವಿ ಕಾರು ಡಿಕ್ಕಿ : ಇಬ್ಬರ ದುರ್ಮರಣ
ಸುದ್ದಿದಿನ, ಕುಣಿಗಲ್ : ರಾಷ್ಟ್ರೀಯ ಹೆದ್ದಾರಿ 75ರ ಪಕ್ಕದಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ಇಬ್ಬರಿಗೆ ಶಾಸಕ ಸಿಟಿ ರವಿ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲಿ ನಡೆದಿದೆ.
ಸಿ.ಟಿ.ರವಿ ಅವರ ಕಾರಿನಲ್ಲಿ ಮೂರು ಜನ ಇದ್ದರು. ಘಟನೆಯ ಬಳಿಕ ಶಾಸಕರು ಬೇರೆ ಕಾರು ಹತ್ತಿ ಹೊರಟು ಹೋಗಿದ್ದಾರೆ. ಆದ್ರೆ ಬಳಿಕ ನಮ್ಮನ್ನು ಯಾರೂ ಕೆಳೋಕೆ ಬಂದಿಲ್ಲ ಎಂದು ಗಾಯಾಳು ಪುನೀತ್ ಆರೋಪಿಸಿದ್ದಾರೆ.
ಕನಕಪುರ ತಾಲೂಕಿನ ಸೂರನಹಳ್ಳಿ ಗ್ರಾಮದ ಯುವಕರು ಕೊಲ್ಲೂರು, ಧರ್ಮಸ್ಥಳ ದೇವಾಲಯಗಳ ದರ್ಶನ ಮಾಡಿ ವಾಪಸ್ ತೆರಳುವಾಗ ಈ ಘಟನೆ ಸಂಭವಿಸಿದೆ. ಮಂಗಳೂರು ಕಡೆಯಿಂದ ಬಂದ ಸಿಟಿ ರವಿ ಅವರ ಫಾರ್ಚೂನರ್ ಕಾರು ರಸ್ತೆ ಬದಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ಸುನಿಲ್ ಗೌಡ ಮತ್ತು ಶಶಿಕುಮಾರ್ ಎಂಬವರಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401