ದಿನದ ಸುದ್ದಿ
ವಿಧಾನ ಪರಿಷತ್ ಚುನಾವಣೆ | ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ
ಸುದ್ದಿದಿನ,ದಾವಣಗೆರೆ : ವಿಧಾನ ಪರಿಷತ್‍ನ ಆಗ್ನೆಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಕ್ಕೆ ಜೂನ್ 3 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಮತದಾರರಾಗಿರುವ ಶಿಕ್ಷಕರಿಗೆ ಹಾಗೂ ಪದವೀಧರರಿಗೆ ಮತದಾನ ಮಾಡಲು ವಿಶೇಷ ಸಾಂದರ್ಭಿಕ ರಜೆಯನ್ನು ನೀಡಲಾಗಿರುತ್ತದೆ.
ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು ಉಳಿದ ಕೈಗಾರಿಕೆ ಸಂಸ್ಥೆಗಳು ಹಾಗೂ ಸಹಕಾರ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅಂತಹ ಅರ್ಹ ಮತದಾರರಿಗೆ ಸೀಮಿತವಾದಂತೆ ಚಲಾಯಿಸಲಿರುವ ಮತದಾರರಿಗೆ ಮತದಾನದ ದಿನವಾದ ಜೂನ್ 3 ರ ಸೋಮವಾರದಂದು ವಿಶೇಷ ಸಾಂದರ್ಭಿಕ ರಜೆ ಯನ್ನು ಮಂಜೂರು ಮಾಡಲು ಆದೇಶಿಸಲಾಗಿದೆ.
ಮತದಾನ ಮಾಡುವ ಸಮಯದಲ್ಲಿ ಮತದಾರರನ್ನು ಗುರುತಿಸಲು ಮತದಾರರ ಭಾವಚಿತ್ರವುಳ್ಳ ಗುರುತಿನ ಚೀಟಿ ಮುಖ್ಯ ದಾಖಲಾತಿಯಾಗಿ ಹಾಜರು ಪಡಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರಿದ್ದವರು ಗುರುತಿನ ಚೀಟಿ ಹೊಂದಿಲ್ಲದಿದ್ದಲ್ಲಿ ಅಂತಹವರು ಭಾರತ ಚುನಾವಣಾ ಆಯೋಗವು ನಿರ್ಧರಿಸಿರುವ ಪೂರಕ ದಾಖಲಾತಿಗಳ ಪೈಕಿ ಒಂದನ್ನು ಹಾಜರುಪಡಿಸಿ ಮತದಾನ ಮಾಡಲು ಅವಕಾಶವಿರುತ್ತದೆ.
ಪೂರಕ ದಾಖಲಾತಿ
ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾನ್‍ಕಾರ್ಡ್, ಇಂಡಿಯಾನ್ ಪಾಸ್ ಪೋರ್ಟ್, ಕೇಂದ್ರ, ರಾಜ್ಯ ಸರ್ಕಾರದ ಅಡಿಯಲ್ಲಿ ಬರುವ ಸ್ಥಳೀಯ ಸಂಸ್ಥೆಗಳು ಅಥವಾ ಇತರ ಖಾಸಗಿ ಕೈಗಾರಿಕಾ ಮನೆಗಳಿಂದ ಅದರ ಉದ್ಯೋಗಿಗಳಿಗೆ ನೀಡಲಾದ ಸೇವಾ ಗುರುತಿನ ಕಾರ್ಡ್, ಸಂಸದರು, ಶಾಸಕರು, ಎಂಎಲ್‍ಸಿಗಳಿಗೆ ಅಧಿಕೃತ ಗುರುತಿನ ಚೀಟಿ, ಶಿಕ್ಷಣ ಸಂಸ್ಥೆಗಳಿಂದ ನೀಡಲಾದ ಸೇವಾ ಗುರುತಿನ ಕಾರ್ಡ್‍ಗಳು, ಇದರಲ್ಲಿ ಶಿಕ್ಷಕರು, ಪದವೀಧರರ ಕ್ಷೇತ್ರದ ಮತದಾರರನ್ನು ನೇಮಿಸಿಕೊಳ್ಳಬಹುದು, ವಿಶ್ವವಿದ್ಯಾಲಯವು ನೀಡಿದ ಪದವಿ, ಡಿಪ್ಲೋಮಾ ಮೂಲ ಪ್ರಮಾಣ ಪತ್ರ, ಸಕ್ಷಮ ಪ್ರಾಧಿಕಾರದಿಂದ ನೀಡಿದ ದೈಹಿಕನ್ಯೂನತೆಯ ಪ್ರಮಾಣ ಪತ್ರ, ವಿಶಿಷ್ಟ ಅಂಗವೈಕಲ್ಯ ಕಾರ್ಡ್(UDID) ಮೂಲಕ ಮತದಾನ ಮಾಡಬಹುದು ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243