Connect with us

ದಿನದ ಸುದ್ದಿ

ವಿಧಾನ ಪರಿಷತ್ ಚುನಾವಣೆ | ಮತದಾರರಿಗೆ ವೋಟರ್ ಸ್ಲಿಪ್ ವಿತರಣೆಗೆ ಸೂಚನೆ : ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್

Published

on

ಸುದ್ದಿದಿನ,ದಾವಣಗೆರೆ : ರಾಜ್ಯ ವಿಧಾನ ಪರಿಷತ್ತಿನ ಸ್ಥಾನಗಳಿಗೆ ಜೂನ್ 3 ರಂದು ಚುನಾವಣೆ ನಡೆಯುತ್ತಿದ್ದು ಜಿಲ್ಲೆಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರ ಮತ್ತು ನೈರುತ್ತ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿರುವುದರಿಂದ ಮತದಾರರಿಗೆ ಮತಚೀಟಿ ಹಾಗೂ ವೋಟರ್ ಗೈಡ್ ವಿತರಣೆ ಮಾಡುವಂತೆ ಜಿಲ್ಲಾಧಿಕಾರಿ ಹಾಗೂ ವಿಧಾನ ಪರಿಷತ್ ಸಹಾಯಕ ಚುನಾವಣಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಶುಕ್ತವಾರ ಎಲ್ಲಾ ತಾಲ್ಲೂಕುಗಳ ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಸೂಚನೆ ನೀಡಿದರು. ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ದಾವಣಗೆರೆ, ಹರಿಹರ, ಜಗಳೂರು ತಾಲ್ಲೂಕುಗಳು ಮತ್ತು ನೈರುತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಕ್ಕೆ ಚನ್ನಗಿರಿ, ಹೊನ್ನಾಳಿ, ನ್ಯಾಮತಿ ತಾಲ್ಲೂಕುಗಳು ಸೇರಲಿದ್ದು ಇಲ್ಲಿನ ಮತದಾರರಿಗೆ ವೋಟರ್ ಸ್ಲಿಪ್ ಹಾಗೂ ವೋಟರ್ ಗೈಡ್ ವಿತರಣೆ ಮಾಡಲು ಸೂಚನೆ ನೀಡಿದರು. ಮತಚೀಟಿ ವಿತರಣೆಗೆ ಆಯಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ನೋಡಲ್ ಅಧಿಕಾರಿಗಳಾಗಿರುತ್ತಾರೆ ಎಂದರು.

ಮತಗಟ್ಟೆವಾರು ಮತದಾರರ ವಿವರ

ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಹರಿಹರದ ಸರ್ಕಾರಿ ಪ್ರೌಢಶಾಲೆ, ಗಾಂಧಿ ನಗರ ಇಲ್ಲಿ 461, ದಾವಣಗೆರೆಯ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಕೊಠಡಿ ಸಂಖ್ಯೆ.1 ರಲ್ಲಿ 707, ಇಲ್ಲಿನ ಎರಡನೇ ಮತಗಟ್ಟೆ ಕೊಠಡಿ ಸಂಖ್ಯೆ 2 ರಲ್ಲಿ 708, ಕೊಠಡಿ ಸಂಖ್ಯೆ 3 ರಲ್ಲಿ 708, ಕೊಠಡಿ 4 ರಲ್ಲಿ 708, ಕೊಠಡಿ ಸಂಖ್ಯೆ 5 ರಲ್ಲಿ 708 ಹಾಗೂ ಜಗಳೂರಿನ ತಾಲ್ಲೂಕು ಕಚೇರಿಯಲ್ಲಿ 351 ಮತದಾರರು ಸೇರಿ 4351 ಮತದಾರರಿದ್ದಾರೆ.

ನೈರುತ್ಯ ಶಿಕ್ಷಕರ ಕ್ಷೇತ್ರ

ನ್ಯಾಮತಿ ತಾಲ್ಲೂಕು ಕಚೇರಿ 79, ಹೊನ್ನಾಳಿ ತಾಲ್ಲೂಕು ಪಂಚಾಯತ್ ಸಾಮಥ್ರ್ಯಸೌಧ ಇಲ್ಲಿ 321, ಬಸವಾಪಟ್ಟಣ ಜನತಾ ಪ್ರೌಢಶಾಲೆ ಕೊಠಡಿ ಸಂಖ್ಯೆ 3 ರಲ್ಲಿ 246, ಚನ್ನಗಿರಿ ತಾಲ್ಲೂಕು ಪಂಚಾಯತ್ ಕೊಠಡಿ ಸಂಖ್ಯೆ 3 ರಲ್ಲಿ 322 ಮತದಾರರು ಸೇರಿ ಒಟ್ಟು 968.

ನೈರುತ್ಯ ಪದವೀಧರರ ಕ್ಷೇತ್ರ

ನ್ಯಾಮತಿ ತಾಲ್ಲೂಕು ಕಚೇರಿ ಕೊಠಡಿ ಸಂಖ್ಯೆ 2 ರಲ್ಲಿ 1012, ಹೊನ್ನಾಳಿ ತಾಲ್ಲೂಕು ಆಡಳಿತಸೌಧ ಕೊಠಡಿ 1 ರಲ್ಲಿ 751, ಇಲ್ಲಿನ ಕೊಠಡಿ 2 ರಲ್ಲಿ 729, ಕೊಠಡಿ 3 ರಲ್ಲಿ 724, ಬಸವಾಪಟ್ಟಣ ಜನತಾ ಪ್ರೌಢಶಾಲೆ ಪೂರ್ವ ವಿಭಾಗದ ಕೊಠಡಿ 1 ರಲ್ಲಿ 765, ಇಲ್ಲಿನ ಕೊಠಡಿ 2 ರಲ್ಲಿ 764, ಚನ್ನಗಿರಿ ತಾಲ್ಲೂಕು ಪಂಚಾಯಿತಿ ಕಟ್ಟಡದ ಪೂರ್ವ ವಿಭಾಗದ ಕೊಠಡಿ 1 ರಲ್ಲಿ 907 ಹಾಗೂ ಇಲ್ಲಿನ ಕೊಠಡಿ 2 ರಲ್ಲಿ 906 ಸೇರಿ 6558 ಮತದಾರರಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಸೆಪ್ಟೆಂಬರ್ 22 ರಿಂದ ನೂತನ ನವೀಕೃತ ಕೆಎಸ್‍ಆರ್‍ ಟಿ ಸಿ ಬಸ್ ನಿಲ್ದಾಣದಿಂದ ಬಸ್ ಗಳ ಕಾರ್ಯಾಚರಣೆ

Published

on

ಸುದ್ದಿದಿನ,ದಾವಣಗೆರೆ:ನೂತನ ನವೀಕೃತ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಿಂದ ಸೆಪ್ಟೆಂಬರ್ 22 ರಿಂದ ಬಸ್ ಕಾರ್ಯಾಚರಣೆಗೆ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಚಾಲನೆ ನೀಡುವರು.

ಸೆ.22 ರಿಂದ ಪ್ರಸ್ತುತ ಸ್ಮಾರ್ಟ್ ಸಿಟಿ ಲಿಮಿಟೆಡ್ ಮತ್ತು ಕ.ರಾ.ರ.ಸಾ.ನಿಗಮದ ವತಿಯಿಂದ ನಿರ್ಮಿತವಾಗಿರುವ ಪಿ.ಬಿ.ರಸ್ತೆಯ ಮರುನಿರ್ಮಿತ ಬಸ್ ನಿಲ್ದಾಣ ಮತ್ತು ಬೇತೂರು ರಸ್ತೆಯ ನೂತನ ಮಾರ್ಗಗಳ ಬಸ್ ನಿಲ್ದಾಣದಿಂದ ಸಂಸ್ಥೆಯ ವಾಹನಗಳ ಕಾರ್ಯಾಚರಣೆ ಆರಂಭವಾಗಲಿದೆ. ಸೆ.22 ರಿಂದ ಹೈಸ್ಕೂಲ್ ಬಸ್ ನಿಲ್ದಾಣದಿಂದ ಸಂಸ್ಥೆಯ ಎಲ್ಲಾ ವಾಹನಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ವರ್ ಎನ್ ಹೆಬ್ಬಾರ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಕಲಿ ಸೇವಾ ಪ್ರಮಾಣಪತ್ರ : ಅತಿಥಿ ಉಪನ್ಯಾಸಕ ಎಸ್. ಸಿದ್ಧನಗೌಡ ವಿರುದ್ಧ ಎಫ್.ಐ.ಆರ್ ದಾಖಲು

Published

on

ಸುದ್ದಿದಿನ,ಕೂಡ್ಲಿಗಿ:ಪಟ್ಟಣದ ಎಸ್.ಎ.ವಿ.ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಕಲಿ ಸೀಲು ಹಾಗೂ ನಕಲಿ ಸೇವಾ ಪ್ರಮಾಣಪತ್ರ ಸಿದ್ಧಪಡಿಸಿಕೊಂಡು ಅತಿಥಿ ಉಪನ್ಯಾಸಕನಾಗಿ ಕಾರ್ಯನಿರ್ವಹಿಸಿದ್ದ ಎಸ್.ಸಿದ್ಧನಗೌಡ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ನಾಲ್ಕು ವರ್ಷಗಳ ನಕಲಿ ಸೇವಾ ಪ್ರಮಾಣಪತ್ರ ತಯಾರಿಸಿಕೊಂಡ ಕೂಡ್ಲಿಗಿ ತಾಲ್ಲೂಕಿನ ಸೂಲದಹಳ್ಳಿ ಅಗ್ರಹಾರ ಗ್ರಾಮದ ಎಸ್.ಸಿದ್ಧನಗೌಡ ಎಂಬ ಅತಿಥಿ ಉಪನ್ಯಾಸಕನ ಮೇಲೆ ಕಾಲೇಜಿನ ನಿಕಟಪೂರ್ವ ಪ್ರಾಂಶುಪಾಲರಾದ ಎನ್.ಕಲ್ಲಪ್ಪ ಇವರು ಕೂಡ್ಲಿಗಿ ನಗರದ ಪೋಲಿಸ್ ಠಾಣೆಯಲ್ಲಿ ಐ.ಪಿಸಿ ಸೆಕ್ಷನ್ 1860 ಕಲಂ 420, 465, 468, 471 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ಹಿಂದೆ ಎಸ್.ಸಿದ್ಧನಗೌಡ ಅವರು ನಕಲಿ ಸೇವಾ ಪ್ರಮಾಣಪತ್ರ ಸಿದ್ಧಪಡಿಸಿಕೊಂಡು 2023ನೇ ಸಾಲಿನಲ್ಲಿ ನಡೆದ ಅತಿಥಿ ಉಪನ್ಯಾಸಕರ ಕೌನ್ಸಿಲಿಂಗ್ ನಲ್ಲಿ ಕನ್ನಡ ಉಪನ್ಯಾಸಕರಾಗಿ ದಾವಣಗೆರೆ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜನ್ನು ಆಯ್ದುಕೊಂಡು ಸೇವೆಗೆ ವರದಿ‌ ಮಾಡಿಕೊಂಡಿದ್ದರು. ಇವರ ಸೇವೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ-ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಡಾ.ಕೆ.ಎ.ಓಬಳೇಶ್ ಅವರು ಮಾಹಿತಿಹಕ್ಕು ಅಧಿನಿಯಮ ಅಡಿಯಲ್ಲಿ ಮಾಹಿತಿ ಪಡೆದು, ಕೂಡ್ಲಿಗಿ ಪಟ್ಟಣದ ಸರ್ಕಾರಿ ಪ್ರಥಮ‌ ದರ್ಜೆ ಕಾಲೇಜಿನ‌ ಪ್ರಾಂಶುಪಾಲರಾದ ಎನ್.ಕಲ್ಲಪ್ಪ ಇವರ ವಿರುದ್ಧ ಲೋಕಾಯುಕ್ತಾಗೆ ದೂರು ನೀಡಿದ್ದರು.

ವಿಚಾರಣೆಯನ್ನು ಕೈಗೆತ್ತಿಕೊಂಡ ಲೋಕಾಯುಕ್ತ ನ್ಯಾಯಾಲಯವು ಪ್ರಾಂಶುಪಾಲರಿಗೆ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಆದೇಶಿಸಿದ ಹಿನ್ನೆಲೆಯಲ್ಲಿ ನಕಲಿ ಸೀಲು, ನಕಲಿ‌ ಪ್ರಮಾಣಪತ್ರ ಸಿದ್ಧಪಡಿಸಿಕೊಂಡ ಎಸ್.ಸಿದ್ಧನಗೌಡ ವಿರುದ್ಧ ಪ್ರಕರಣ ದಾಖಲಿಸಿದ್ದು, ಪೋಲಿಸರು ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಭಾರತವನ್ನು ವಿಶ್ವದ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿಸುವಂತೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಕರೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನಡೆಸ್ಕ್:ಆಧುನಿಕ ಜ್ಞಾನವನ್ನು ಮೌಲ್ಯಗಳೊಂದಿಗೆ ಸಂಯೋಜಿಸುವ ಮೂಲಕ ಶಿಕ್ಷಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವುದು ನಮ್ಮೆಲ್ಲರ ನೈತಿಕ ಕರ್ತವ್ಯವಾಗಿದೆ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ನಿನ್ನೆ ಆಯೋಜಿಸಿದ್ದ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆಮಂಡಳಿಯ 30ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಭಾರತದ ಉನ್ನತ ಶಿಕ್ಷಣ ವ್ಯವಸ್ಥೆಯು 1ಸಾವಿರದ 700 ವಿಶ್ವವಿದ್ಯಾಲಯಗಳು 45 ಸಾವಿರ ಕಾಲೇಜುಗಳನ್ನು ಹೊಂದಿರುವ ವಿಶ್ವದ ಅತಿ ದೊಡ್ಡ ಶಿಕ್ಷಣ ವ್ಯವಸ್ಥೆಗಳಲ್ಲಿ ಒಂದಾಗಿದೆ ಎಂದು ಹೇಳಿದರು.

ಭಾರತವು ಅಭಿವೃದ್ದಿ ಹೊಂದಿದ ರಾಷ್ಟ್ರವಾಗುವತ್ತ ಸಾಗುತ್ತಿದ್ದು, ಮುಂಬರುವ ದಿನಗಳಲ್ಲಿ ದೇಶವನ್ನು ವಿಶ್ವದ ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಸಾಲಿಗೆ ತರಲು ಪ್ರಯತ್ನ ಮಾಡಬೇಕಾಗಿದೆ ಎಂದು ರಾಜ್ಯಪಾಲರು ಕರೆ ನೀಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending