ದಿನದ ಸುದ್ದಿ
ವಿಧಾನಪರಿಷತ್ ಶಿಕ್ಷಕರ, ಪದವೀಧರ ಕ್ಷೇತ್ರಗಳಿಗೆ ನಾಳೆ ಚುನಾವಣೆ ; ಕಣದಲ್ಲಿರುವ ಅಭ್ಯರ್ಥಿಗಳೆಷ್ಟು..?
ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್ತಿನ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳಿಗೆ ನಾಳೆ ಮತದಾನ ನಡೆಯಲಿದೆ. ಆರು ಕ್ಷೇತ್ರಗಳಲ್ಲಿ ಒಟ್ಟು 78 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಒಟ್ಟು ಮೂರು ಲಕ್ಷದ 63ಸಾವಿರದ 573ಮಂದಿ ಮತದಾರದಿದ್ದಾರೆ.
ನೊಂದಾಯಿತ ಮತದಾರರು ಆಧಾರ್ ಕಾರ್ಡ್, ಪಾನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ ಸೇರಿದಂತೆ ಇತರೇ ದಾಖಲೆಗಳ ಮೂಲಕ ಮತದಾನ ಮಾಡಬಹುದಾಗಿದೆ.
ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ಧತೆ ಕೈಗೊಂಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243