ದಿನದ ಸುದ್ದಿ
ಶಿಕ್ಷಕರ, ಪದವೀಧರ ಕ್ಷೇತ್ರದ ಚುನಾವಣೆ ಫಲಿತಾಂಶ ; ಅಭ್ಯರ್ಥಿಗಳು ಪಡೆದ ಮತಗಳಿಷ್ಟು..
ಸುದ್ದಿದಿನಡೆಸ್ಕ್: ಜೂನ್ 3 ರಂದು ಮೂರು ಪದವೀಧರ ಹಾಗೂ ಮೂರು ಶಿಕ್ಷಕರ ಕ್ಷೇತ್ರಕ್ಕೆ ನಡೆದಿದ್ದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಈಗಾಗಲೇ ಪ್ರಕಟಗೊಂಡಿದ್ದು, 6 ಕ್ಷೇತ್ರಗಳಲ್ಲಿ ಮೂರು ಕಾಂಗ್ರೆಸ್ ಮತ್ತು ಮೂರು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪಾಲಾಗಿದೆ.
ಈಶಾನ್ಯ ಪದವೀಧರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಡಾ. ಚಂದ್ರಶೇಖರ್ ಪಾಟೀಲ್ 43 ಸಾವಿರದ 484 ಮತಗಳನ್ನು ಪಡೆದು ಗೆಲುವು ಸಾಧಿಸಿದರು. ಬೆಂಗಳೂರು ಪದವೀಧರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ರಾಮೋಜಿ ಗೌಡ 36 ಸಾವಿರದ 729 ಮತಗಳನ್ನು ಪಡೆದು ಜಯಶಾಲಿಯಾಗಿದ್ದರೆ, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್‌ನ ಡಿ.ಟಿ. ಶ್ರೀನಿವಾಸ್ 8 ಸಾವಿರದ 909 ಮತಗಳನ್ನು ಪಡೆದು ಜಯಗಳಿಸಿದ್ದಾರೆ.
ನೈಋತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ್ ಸರ್ಜಿ, 37 ಸಾವಿರದ 627 ಮತಗಳನ್ನು ಪಡೆದು ಗೆಲುವು ಸಾಧಿಸಿದರು. ಅವರ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ 13 ಸಾವಿರದ 516 ಹಾಗೂ ಪಕ್ಷೇತರ ಅಭ್ಯರ್ಥಿ ಕೆ. ರಘುಪತಿ ಭಟ್ 7 ಸಾವಿರದ 39 ಮತಗಳನ್ನು ಪಡೆದರು.
ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ 9 ಸಾವಿರದ 829 ಮತಗಳನ್ನು ಪಡೆದು ಗೆದ್ದರೆ, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಕೆ. ವಿವೇಕಾನಂದ 10 ಸಾವಿರದ 823 ಮತಗಳನ್ನು ಪಡೆದು ಜಯಶಾಲಿಯಾಗಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243