ದಿನದ ಸುದ್ದಿ
ವಿಧಾನಪರಿಷತ್ ಚುನಾವಣೆ ; ಇಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನ
ಸುದ್ದಿದಿನ ಡೆಸ್ಕ್ : ಮೇಲ್ಮನೆ ಸದಸ್ಯರಾಗಿ ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಂದುವರಿದಿದ್ದು, ಈವರೆಗೆ ಒಟ್ಟು 29 ಅಭ್ಯರ್ಥಿಗಳಿಂದ 40 ನಾಮಪತ್ರಗಳು ಸಲ್ಲಿಕೆಯಾಗಿವೆ. ಈ ಪೈಕಿ ಆಡಳಿತಾರೂಢ ಕಾಂಗ್ರೆಸ್ 5, ಬಿಜೆಪಿ 3, ಜೆಡಿಎಸ್ 1 ಮತ್ತು ಪಕ್ಷೇತರರಿಂದ 21 ಉಮೇದುವಾರಿಕೆಗಳು ಸಲ್ಲಿಕೆಯಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಕಚೇರಿ ತಿಳಿಸಿದೆ.
ಮಂಗಳವಾರ 16 ಅಭ್ಯರ್ಥಿಗಳಿಂದ 21 ನಾಮಪತ್ರಗಳು ಸಲ್ಲಿಕೆಯಾಗಿವೆ. ಇದರಲ್ಲಿ ಕಾಂಗ್ರೆಸ್ 3 ಮತ್ತು ಪಕ್ಷೇತರರು 13ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಇಂದು ನಾಮಪತ್ರ ಸಲ್ಲಿಕೆಗೆ ಕಡೆ ದಿನವಾಗಿದ್ದು, 17ರಂದು ಪರಿಶೀಲನೆ ನಡೆಯಲಿದೆ. ಇದೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು, ಜೂನ್ 3ರಂದು ಚುನಾವಣೆ ನಡೆಯಲಿದೆ. ಜೂನ್ 6 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243