ರಾಜಕೀಯ
ಸರ್ಕಾರದ ಮೇಲೆ ಮುನಿಸು: ಕಾಂಗ್ರೆಸ್ ಗೆ ಗುಡ್ ಬೈ ಹೇಳುವರೇ ಎಂಎಲ್ ಸಿ ರಘು ಆಚಾರ್ ?
ಸುದ್ದಿದಿನ ಚಿತ್ರದುರ್ಗ: ಚುನಾವಣೆ ಹೊಸ್ತಿಲಲ್ಲಿ ರಾಜಕೀಯ ವಿದ್ಯಮಾನಗಳು ದಿನಕ್ಕೊಂದು ತಿರುವು ಪಡೆಯುತ್ತಿವೆ. ಈಗ ಸರ್ಕಾರದ ಮೇಲಿನ ಅಸಮಾಧಾನದಿಂದ ವಿಧಾನ ಪರಿಷತ್ ಸದಸ್ಯ ರಘು ಆಚಾರ್ ಕಾಂಗ್ರೆಸ್ ತೊರೆಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಕ್ಷೇತ್ರಕ್ಕೆ ಮೀಸಲಿರಿಸಿದ್ದ ಮೆಡಿಕಲ್ ಕಾಲೇಜನ್ನು ಕನಕಪುರಕ್ಕೆ ಶಿಫ್ಟ್ ಮಾಡಲಾಗಿದೆ ಎಂಬ ಕಾರಣಕ್ಕೆ ಕಾಂಗ್ರೆಸ್ ಪಕ್ಷ ತೊರೆಯುತ್ತಾರೆ ಎಂದು ಹೇಳಲಾಗುತ್ತಿದೆ. ರಾಜ್ಯ ಸಮ್ಮಿಶ್ರ ಸರ್ಕಾರ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಸರಿಯಾದ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂಬ ಕಾರಣಕ್ಕೆ ಅಸಮಾಧಾನ ಹೊಂದಿದ್ದಾರೆ ಎನ್ನಲಾಗುತ್ತಿದೆ. ಕಾಂಗ್ರೆಸ್ ತೊರೆದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧಾರ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಕುರಿತು ಸ್ಪಷ್ಟೀಕರಣ ಕೇಳಲು ಸ್ವತಃ ರಘು ಆಚಾರ್ ಅವರನ್ನು ದೂರವಾಣಿ ಮೂಲಕ ಸಂಪರ್ಕ ಮಾಡಿದ್ದು, ಸಂಪರ್ಕ ಸಾಧ್ಯವಾಗಿಲ್ಲ.