ದಿನದ ಸುದ್ದಿ
ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆ; ಬಿಜೆಪಿಯಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಸುದ್ದಿದಿನ ಡೆಸ್ಕ್ : ಜೂನ್ 13 ರಂದು ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿಯು ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಪರಿಷತ್ ಸ್ಥಾನಕ್ಕೆ ಮಾಜಿ ಸಚಿವ ಸಿ.ಟಿ.ರವಿ, ಪರಿಷತ್ ಮುಖ್ಯ ಸಚೇತಕ ಎನ್. ರವಿಕುಮಾರ್ ಹಾಗೂ ಮಾಜಿ ಶಾಸಕ ಎಂ.ಜಿ.ಮುಳೆ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ.
ಈ ಕುರಿತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಾಮಪತ್ರ ಸಲ್ಲಿಕೆಗೆ ನಾಳೆ ಕಡೆಯ ದಿನವಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243