ದಿನದ ಸುದ್ದಿ
ರೈತರಿಗೂ ಮೊಬೈಲ್ ಬ್ಯಾಂಕಿಂಗ್ ಸೇವೆ
ಸುದ್ದಿದಿನ ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗಣೇಶ ಹಬ್ಬಕ್ಕೆ ರಾಜ್ಯದ ಜನತೆಗೆ ಶುಭ ಸುದ್ದಿ ನೀಡಲಿದ್ದು, ಸಣ್ಣ ವ್ಯಾಪಾರಿಗಳು, ರೈತರು, ಕೃಷಿ ಕಾರ್ಮಿಕರಿಗೆ ಅನುಕೂಲವಾಗುವಂತೆ ಮೊಬೈಲ್ ಬ್ಯಾಂಕಿಂಗ್ ಸೇವೆ ನೀಡಲು ಮುಂದಾಗಿದ್ದಾರೆ.
ಖಾಸಗಿ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಮೊಬೈಲ್ ಬ್ಯಾಂಕಿಂಗ್ ಸೇವೆ ಬಡವರ ಬಂಧು ಹೆಸರಿನಲ್ಲಿ ಅನುಷ್ಠಾನಗೊಳ್ಳಲಿದೆ. ವ್ಯಾಪಾರಿಸರಿಗೆ ಮತ್ತು ರೈತರಿಗೆ ಸಾಲ ವಾಪಸಾತಿ ನಿಯಮದಲ್ಲಿ ಸಣ್ಣ ಪ್ರಮಾಣದ ಬದಲಾವಣೆ ಇದ್ದು, ಇದಕ್ಕೆ ಸಂಬಂಧಿಸಿದಂತೆ ನಿಯಮಾವಳಿಗಳು ಸೆಪ್ಟೆಂಬರ್ 15ರಂದು ಪ್ರಕಟಿವಾಗಲಿವೆ.
ಮೊದಲ ಹಂತದಲ್ಲಿ 150 ಕೇಂದ್ರಗಳಲ್ಲಿ ಸಣ್ಣ ವ್ಯಾಪಾರಿಗಳು, ರೈತರು ಮತ್ತು ಕೃಷಿ ಕಾರ್ಮಿಕರು ಇದರ ಸೇವೆ ಪಡೆದುಕೊಳ್ಳಬಹುದು. ಇದಕ್ಕಾಗಿ ಮುಖ್ಯಮಂತ್ರಿ 50 ಕೋಟಿ ರೂ. ಮೀಸಲಿರಿಸಿದ್ದು, ಪ್ರಾರಂಭದಲ್ಲಿ 1000 ದಿಂದ 5000 ರೂ. ವರೆಗೆ ಸಣ್ಣ ಪ್ರಮಾಣದಲ್ಲಿ ಸಾಲ ಸೌಲಭ್ಯ ದೊರೆಯಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401