ದಿನದ ಸುದ್ದಿ

ಮೊಬೈಲ್ ರಿಪೇರಿ | ಉಚಿತ ತರಬೇತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿ ಸೆಪ್ಟೆಂಬರ್ 11 ರಿಂದ ಪ್ರಾರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಆಗಸ್ಟ್ 20 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9740982585 ಗೆ ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Trending

Exit mobile version