ದಿನದ ಸುದ್ದಿ
ಪ್ರಧಾನಿ ಮೋದಿಗೆ ನಾಚಿಕೆ ಆಗಬೇಕು : ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಕಿಡಿ
ಸುದ್ದಿದಿನ ಡೆಸ್ಕ್ : ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಕಡಿಮೆ ಮಾಡಲು ಹಾಗೂ ಇಂಧನಗಳ ಮೇಲಿನ ತೆರಿಗೆ ಕಡಿತಗೊಳಿಸಲು ಬಿಜೆಪಿಯೇತರ ರಾಜ್ಯ ಸರ್ಕಾರಗಳಿಗೆ ಒತ್ತಾಯಿಸಿದ್ದರು.
ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಗೆ ತರಾಟೆ ತೆಗೆದುಕೊಂಡ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರು, ಪ್ರಧಾನಿಗೆ ನಾಚಿಕೆಯಾಗಬೇಕು ಎಂದು ಕಿಡಿ ಕಾರಿದ್ದಾರೆ. ಅಲ್ಲದೇ ತನ್ನ ರಾಜ್ಯದಲ್ಲಿ 2015 ರಿಂದ ಇಂಧನ ತೆರಿಗೆಯಲ್ಲಿ ಇದುವರೆಗೆ ಹೆಚ್ಚಳವಾಗಿಲ್ಲ ಎಂದು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243