ದಿನದ ಸುದ್ದಿ

ಮೋದಿ, ಯೋಗಿ ಆದಿತ್ಯ ನಾಥ ಮತಯಾಚನೆ

Published

on

ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನಸಭೆ ಚುನಾವಣೆಗಾಗಿ ವಿವಿಧ ರಾಜಕೀಯ ಪಕ್ಷಗಳ ನಾಯಕರಿಂದ ಪ್ರಚಾರ ಬಿರುಸುಗೊಂಡಿದೆ.

ಯಾದಗಿರಿಯಲ್ಲಿ ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಜೆಪಿ ಅಭ್ಯರ್ಥಿಗಳ ಪರವಾಗಿ ರೋಡ್ ಶೋ ನಡೆಸಿದರು. ಇದಕ್ಕೂ ಮುನ್ನ ಅವರು, ಬಾಗಲಕೋಟೆ ಜಿಲ್ಲೆಯ ತೇರದಾಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚಿಸಿದರು.

ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಕೇಂದ್ರ ಸಚಿವ ಕಿಶನ್ ಪಾಲ್ ಗುರ್ಜರ್, ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿವಿಧ ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ರೋಡ್ ಶೋ ಮೂಲಕ ಮತ ಯಾಚಿಸಿದರು.

ಇದೇ28ರ ನಂತರ ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ವಿವಿಧ ಜಿಲ್ಲೆಗಳಲ್ಲಿ ಮತಯಾಚನೆ ಮಾಡಲಿದ್ದಾರೆ ಎಂದು ಅವರು ಹೇಳಿದರು.

ಇಂದು ಮಂಡ್ಯ ಜಿಲ್ಲೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಪಕ್ಷದ ಪರವಾಗಿ ಪ್ರಚಾರ ಮಾಡಲಿದ್ದಾರೆ. ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ಬಿಜೆಪಿ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ರಾಜನಾಥ್ ಸಿಂಗ್ ಇಂದು ಬಿಜೆಪಿ ಪರ ಪ್ರಚಾರ ನಡೆಸಲಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದರು. ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಮತಯಾಚಿಸಿದರು. ಜೆಡಿಎಸ್ ವರಿಷ್ಠ ನಾಯಕರಾದ ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ. ಕುಮಾರಸ್ವಾಮಿ, ಮೈಸೂರು ಜಿಲ್ಲೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಮತಯಾಚಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version