ರಾಜಕೀಯ
ಒಡಿಶಾದ ಸನ್ಯಾಸಿಗೆ ಒಲಿದ ಸಚಿವ ಸ್ಥಾನ
ಸುದ್ದಿದಿನ,ನವದೆಹಲಿ: ಸಜ್ಜನಿಕೆ, ಸರಳ ಜೀವಿ, ಸಾಮಾನ್ಯರ ನೇತಾ ಪ್ರತಾಪ್ ಸರಂಗಿ ಅವರಿಗೂ ಮೋದಿ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ. ಗುರುವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಒಡಿಶಾದ ಬಲಸೂರ್ ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸರಂಗಿ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮದಲ್ಲಿ ಇವರ ಹೆಸರನ್ನ ಹೇಳುತ್ತಿದ್ದಂತೆ ಗಣ್ಯರು ಚಪ್ಪಾಳಿ ತಟ್ಟಿ, ಹರ್ಷ ವ್ಯಕ್ತಪಡಿಸಿದರು.
ಒಡಿಶಾದ ‘ಮೋದಿ’
ಪ್ರತಾಪ್ ಸರಂಗಿ ಒಡಿಶಾದ ಮೋದಿ ಅಂತಾ ಫೇಮಸ್. ಪ್ರತಾಪ್ ಸರಂಗಿ ಶ್ರೀಮಂತರಂತೂ ಅಲ್ಲ. ನಿಲಗಿರಿ ವಿಧಾನಭಾ ಕ್ಷೇತ್ರದಿಂದ ಎರಡು ಬಾರಿ (2004-2009 & 2009-2014) ಶಾಸಕರಾಗಿ ಆಯ್ಕೆಯಾಗಿದ್ರೂ ಕೂಡಾ, ವಾಸಿಸಲು ಇವರಿಗೆ ಸ್ವಂತ ಮನೆಯೂ ಇಲ್ಲ.
ಅವಿವಾಹಿತ ಪ್ರತಾಪ್ ಸರಂಗಿ, ಕಳೆದ ವರ್ಷ ತನ್ನ ತಾಯಿಯನ್ನು ಕಳೆದುಕೊಂಡಿದ್ರು. ಬರೀ ಸೈಕಲ್ನಲ್ಲಿ ಕ್ಷೇತ್ರದೆಲ್ಲೆಡೆ ಸುತ್ತಿ, ತಳ ಮಟ್ಟದಿಂದ ಪಕ್ಷವನ್ನು ಸಂಘಟನೆ ಮಾಡಿದ್ರು. ಅವರ ಪರಿಶ್ರಮ ಮೆಚ್ಚಿದ ಬಿಜೆಪಿ ಈ ಬಾರಿ ಬಲಸೂರ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿಸಿತ್ತು. ಪ್ರತಾಪ್ ಸರಂಗಿಯವರ ಶಿಸ್ತು, ಕೆಲಸವನ್ನು ಮೆಚ್ಚಿದ್ದ ಕಾರ್ಯಕರ್ತರು ಹಾಗೂ ಮತದಾರರು ಈ ಬಾರಿ ಗೆಲ್ಲಿಸಿ, ಸಂಸತ್ಗೆ ಕಳುಹಿಸಿಕೊಟ್ಟಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಶಕಗಳ ಬಳಿಕ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ; ಕಲ್ಯಾಣ ಕರ್ನಾಟಕದಲ್ಲಿ ಅಭಿವೃದ್ಧಿಯ ನಿರೀಕ್ಷೆ
ಸುದ್ದಿದಿನಡೆಸ್ಕ್:ದಶಕಗಳ ಬಳಿಕ ನಾಳೆ ಕಲಬುರಗಿಯ ಮಿನಿ ವಿಧಾನಸೌಧದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಂಪುಟ ಸಭೆ ನಡೆಯಲಿದೆ. ಆಡಳಿತ ಪಕ್ಷದ ಶಾಸಕರು ಕ್ಷೇತ್ರದ ಅಭಿವೃದ್ಧಿ ಪಟ್ಟಿಯನ್ನು ಸಿದ್ದಪಡಿಸಿ ಈಗಾಗಲೇ ಸರ್ಕಾರಕ್ಕೆ ನೀಡಿದ್ದಾರೆ.
ಕಳೆದ ಒಂದು ದಶಕದ ಹಿಂದೆ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆದಿತ್ತು. ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಕಲಬುರಗಿಯಲ್ಲಿ ಮೊದಲ ಬಾರಿಗೆ 1982ರಲ್ಲಿ ಆರ್.ಗುಂಡೂರಾವ್ ಮುಖ್ಯಮಂತ್ರಿ ಆಗಿದ್ದ ವೇಳೆ ಸಚಿವ ಸಂಪುಟ ಸಭೆ ನಡೆದಿತ್ತು.
ಆ ಬಳಿಕ 2008ರಲ್ಲಿ ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ವೇಳೆ ಸಚಿವ ಸಂಪುಟ ಸಭೆ ನಡೆದಿತ್ತು. 2014ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ವೇಳೆ ಕಲಬುರಗಿಯಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆದಿತ್ತು, ಇದೀಗ 2024ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಎರಡನೇ ಬಾರಿ ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಕಲ್ಯಾಣ ಕರ್ನಾಟಕ ; ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ : ಸಚಿವ ಪ್ರಿಯಾಂಕ್ ಖರ್ಗೆ
ಸುದ್ದಿದಿನಡೆಸ್ಕ್:ಕಲ್ಯಾಣ ಕರ್ನಾಟಕ ಭಾಗದ ಜನರ ಬಹು ನಿರೀಕ್ಷೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಯುತ್ತಿದ್ದು,ಈ ಭಾಗದ ಇಲಾಖಾವಾರು ಸಮಗ್ರ ಅಭಿವೃದ್ಧಿಯ ಕುರಿತು ಚರ್ಚಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.
ಮುಂದಿನ ಎರಡು ವರ್ಷದಲ್ಲಿ ಕಲ್ಯಾಣ ಪಥ ಯೋಜನೆಯಡಿಯಲ್ಲಿ ರಸ್ತೆಗಳ ರಿಪೇರಿ ಹಾಗೂ ಉನ್ನತಿಕರಣ ಮಾಡಲಾಗುವುದು. ಈ ಭಾಗದ ಅಭಿವೃದ್ದಿ ವಿಚಾರದಲ್ಲಿ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಅವರು ಭರವಸೆ ನೀಡಿದ್ದಾರೆ. ಮುಂದಿನ ಒಂದು ವರ್ಷದ ಅವಧಿಯಲ್ಲಿ 6 ಸಾವಿರದ 500 ಶಿಕ್ಷಕರು ಸೇರಿದಂತೆ 15 ಸಾವಿರ ಖಾಲಿ ಹುದ್ದೆ ತುಂಬಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಪುಣೆಯಿಂದ ಹುಬ್ಬಳಿಗೆ ಇಂದಿನಿಂದ ವಂದೇ ಭಾರತ್ ರೈಲು ಸಂಚಾರ
ಸುದ್ದಿದಿನಡೆಸ್ಕ್:ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಠಿ ಯೋಜನೆಗಳ ಹಿನ್ನಲೆಯಲ್ಲಿ ರೈಲ್ವೆ ಇಲಾಖೆಯು ಅಭಿವೃದ್ಧಿ ಸಾಧಿಸುತ್ತಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಜನ ಸಾಮಾನ್ಯರಿಗೆ ಹೆಚ್ಚು ಅನುಕೂಲ ಒದಗಿಸುವ ನಿಟ್ಟಿನಲ್ಲಿ ಸುಗಮ ಸುರಕ್ಷಿತ ರೈಲು ಸೇವೆ ನೀಡಲಾಗುತ್ತಿದ್ದು, ಹಿಂದಿಗಿಂತ ಈಗ ರೈಲು ಸೇವೆ ನೂರುಪಟ್ಟು ಅಭಿವೃದ್ಧಿ ಸಾಧಿಸಿದೆ ಎಂದು ಹೇಳಿದ್ದಾರೆ. ಪುಣೆಯಿಂದ ಹುಬ್ಬಳ್ಳಿಗೆ ವಂದೇ ಭಾರತ್ ರೈಲು ಸಂಚಾರ ಆರಂಭಗೊಳ್ಳಲಿದ್ದು, ಈ ರೈಲಿಗೆ ಇಂದು ರಾತ್ರಿ 8 ಗಂಟೆಗೆ ಬೆಳಗಾವಿಯಲ್ಲಿ ಹಸಿರು ನಿಶಾನೆ ತೋರಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಇದೇ ವೇಳೆ ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲು ಬೆಳಗಾವಿವರೆಗೂ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಕಿತ್ತೂರು ಮಾರ್ಗದ ಬೆಳಗಾವಿ ಧಾರವಾಡ ನೇರ ರೈಲು ಸಂಚಾರ ಆರಂಭಿಸುವ ಬಗ್ಗೆ ಜಿಲ್ಲಾಧಿಕಾರಿ ಮತ್ತು ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಚರ್ಚಿಸಲಾಗಿದೆ. ಈಯೋಜನೆಯ ಕಾಮಗಾರಿಯನ್ನು ಶೀಘ್ರವೇ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.
ಸವದತ್ತಿ ಯಲ್ಲಮ್ಮ ದರ್ಶನಕ್ಕೆ ತೆರಳುವ ಭಕ್ತರಿಗೆ ಅನುಕೂಲವಾಗುವ ಹಿನ್ನಲೆಯಲ್ಲಿ ರೈಲು ಸಂಪರ್ಕ ಕಲ್ಪಿಸುವ ಬಗ್ಗೆ ಚರ್ಚೆ ನಡೆಸಲಾಗಿದ್ದು, ಈ ಯೋಜನೆಯ ಅನುಷ್ಠಾನಕ್ಕೆ ಸರ್ವೆ ಕಾರ್ಯ ನಡೆದಿದೆ ಎಂದು ಸಚಿವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ5 days ago
ನಕಲಿ ವೈದ್ಯರಿಗೆ ದಂಡ ; ಮೆಡಿಕಲ್ ಸ್ಟೋರ್ ಮುಚ್ಚಲು ಆದೇಶ
-
ದಿನದ ಸುದ್ದಿ4 days ago
ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
-
ದಿನದ ಸುದ್ದಿ9 hours ago
ಸಂತೇಬೆನ್ನೂರು | ಈಶ್ವರೀ ವಿ ವಿ ಯಲ್ಲಿ ಇಂಜಿನಿಯರ್ಸ್ ಡೇ ಆಚರಣೆ
-
ದಿನದ ಸುದ್ದಿ4 days ago
ಆರಗದಲ್ಲಿ ಗರುಡ ಪದ್ಧತಿಯ ಶಿರ ಛೇದನ ಸ್ಮಾರಕ ಶಿಲ್ಪ ಪತ್ತೆ
-
ದಿನದ ಸುದ್ದಿ1 day ago
HAL | ಅಪ್ರೆಂಟೀಸ್ ತರಬೇತಿಗಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago
ದಾವಣಗೆರೆ | ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ
-
ದಿನದ ಸುದ್ದಿ1 day ago
ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ ಅಹವಾಲು ಸ್ವೀಕಾರ
-
ದಿನದ ಸುದ್ದಿ1 day ago
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ | ಪ್ರಜಾಪ್ರಭುತ್ವ ಅತ್ಯಂತ ಬಲಿಷ್ಠ ಹಾಗೂ ಶ್ರೇಷ್ಠ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್