ರಾಜಕೀಯ
ಪ್ರಧಾನಿ ಮೋದಿ ಸಂಪುಟದಲ್ಲಿ ಕ್ಯಾಬಿನೆಟ್ ದರ್ಜೆಯ 25 ಸಚಿವರು ಮತ್ತು ಅವರ ಖಾತೆಗಳು
ಸುದ್ದಿದಿನ,ನವದೆಹಲಿ: ನಿನ್ನೆಯಷ್ಟೇ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ, ತಮ್ಮ ಟೀಂಗೆ ಜವಾಬ್ದಾರಿಯನ್ನ ಹಂಚಿಕೆ ಮಾಡಿದ್ದಾರೆ. ಮೋದಿಯನ್ನ ಸೇರಿ ಒಟ್ಟು 58 ಸಂಸದರು ನಿನ್ನೆ ಪ್ರತಿಜ್ಞಾವಿಧಿ ಸ್ವೀಕಾರ ಮಾಡಿದ್ದರು. ಇದರಲ್ಲಿ 25 ಸಂಸದರು ಕ್ಯಾಬಿನೆಟ್ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು. ಅವರೆಲ್ಲರಿಗೂ ಖಾತೆಗಳನ್ನ ಹಂಚಿಕೆ ಮಾಡಲಾಗಿದೆ. ಅದರ ವಿವರ ಹೀಗಿದೆ.
ಕ್ಯಾಬಿನೆಟ್ ದರ್ಜೆಯ ಸಚಿವರು
- ನರೇಂದ್ರ ಮೋದಿ – ಪ್ರಧಾನ ಮಂತ್ರಿ
- ರಾಜನಾಥ್ ಸಿಂಗ್ – ರಕ್ಷಣಾ ಖಾತೆ
- ಅಮಿತ್ ಶಾ – ಗೃಹ ಖಾತೆ
- ಸುಬ್ರಮಣಿಯನ್ ಜಯಶಂಕರ್ – ವಿದೇಶಾಂಗ ವ್ಯವಹಾರಗಳ ಖಾತೆ
- ನಿರ್ಮಲಾ ಸೀತಾರಾಮನ್ – ಹಣಕಾಸು ಖಾತೆ
- ನಿತಿನ್ ಗಡ್ಕರಿ – ಸಾರಿಗೆ ಇಲಾಖೆ ಮತ್ತು ಅತಿ ಸಣ್ಣ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆ
- ಸದಾನಂದಗೌಡ – ರಾಸಾಯನಿಕ ಮತ್ತು ರಸಗೊಬ್ಬರ ಖಾತೆ
- ರಾಮ್ ವಿಲಾಸ್ ಪಾಸ್ವಾನ್ – ಗ್ರಾಹಕರ ವ್ಯವಹಾರ, ಆಹಾರ ಮತ್ತು ವಿತರಣಾ ಇಲಾಖೆ
- ನರೇಂದ್ರ ಸಿಂಗ್ ತೋಮರ್ -ಕೃಷಿ ಮತ್ತು ರೈತ ಕಲ್ಯಾಣ, ಗಾಮೀಣ ಅಭಿವೃದ್ಧಿ ಇಲಾಖೆ, ಪಂಚಾಯತ್ ರಾಜ್ ಇಲಾಖೆ
- ರವಿಶಂಕರ್ ಪ್ರಸಾದ್ – ಲಾ ಆ್ಯಂಡ್ ಜಸ್ಟಿಸ್, ಕಮ್ಯುನಿಕೇಷನ್, ಎಲೆಕ್ಟ್ರಾನಿಕ್ಸ್ ಅಂಡ್ ಇನ್ಫಾರ್ಮೇಷನ್ ಟೆಕ್ನಾಲಜಿ
- ಹರ್ಸಿಮ್ರತ್ ಕೌರ್ – ಆಹಾರ ಮತ್ತು ಸಂಸ್ಕರಣೆ ಕೈಗಾರಿಕೆ ಇಲಾಖೆ
- ಥಾವರ್ ಚಂದ್ ಗೆಲ್ಹೋಟ್ – ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ
- ಡಾ. ರಮೇಶ್ ಪೋಖ್ರಿಯಾಲ್ – ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ
- ಅರ್ಜುನ್ ಮುಂಡಾ – ಬುಡಕಟ್ಟು ಸಮುದಾಯದ ವ್ಯವಹಾರಗಳ ಖಾತೆ
- ಸ್ಮೃತಿ ಇರಾನಿ – ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜವಳಿ ಖಾತೆ
- ಡಾ.ಹರ್ಷವರ್ಧನ್ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಮತ್ತು ಭೂ-ವಿಜ್ಞಾನ ಖಾತೆ
- ಪ್ರಕಾಶ್ ಜಾವ್ಡೇಕರ್ – ಪರಿಸರ, ಅರಣ್ಯ ಮತ್ತು ಕ್ಲೈಮೇಟ್ ಚೇಂಜ್ ಖಾತೆ ಮತ್ತು ಮಾಹಿತಿ ಮತ್ತು ಪ್ರಸಾರ ಇಲಾಖೆ ಖಾತೆ
- ಪಿಯೂಷ್ ಗೋಯಲ್ – ರೈಲೇ ಇಲಾಖೆ ಸಚಿವ, ವಾಣಿಜ್ಯ ಮತ್ತು ಕೈಗಾರಿಕಾ ಸಚಿವ
- ಧರ್ಮೇಂದ್ರ ಪ್ರಧಾನ್ – ಪೆಟ್ರೋಲಿಯಂ ಹಾಗೂ ನ್ಯಾಚುರಲ್ ಗ್ಯಾಸ್ ಮತ್ತು ಮಿನಿಸ್ಟರಿ ಆಫ್ ಸ್ಟೀಲ್
- ಮುಕ್ತಾರ್ ಅಬ್ಬಾಸ್ ನಖ್ವಿ – ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
- ಪ್ರಹ್ಲಾದ್ ಜೋಶಿ – ಸಂಸದೀಯ ವ್ಯವಹಾರಗಳ ಖಾತೆ, ಕಲ್ಲಿದ್ದಲು ಮತ್ತು ಗಣಿಗಾರಿಕೆ
- ಮಹೇಂದ್ರನಾಥ್ ಪಾಂಡೆ – ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲ ಖಾತೆ
- ಡಾ.ಅರವಿಂದ್ ಗಣಪತ್ ಸಾವಂತ್ – ಭಾರೀ ಇಂಡಸ್ಟ್ರಿ ಮತ್ತು ಸಾರ್ವಜನಿಕ ಉದ್ಯಮ ಇಲಾಖೆ
- ಗಿರಿರಾಜ್ ಸಿಂಗ್ -ಪಶು ಸಂಗೋಪನೆ, ಮೀನುಗಾರಿಕೆ ಇಲಾಖೆ
- ಗಜೇಂದ್ರ ಸಿಂಗ್ ಶೇಖಾವತ್ – ಜಲ ಶಕ್ತಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
AI ವಲಯದಲ್ಲಿ ಜಗತ್ತಿನ ನೂರು ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿ ಪ್ರಕಟ
ಸುದ್ದಿದಿನಡೆಸ್ಕ್:ಕೃತಕ ಬುದ್ಧಿಮತ್ತೆ ವಲಯದಲ್ಲಿ ಜಗತ್ತಿನ ನೂರು ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿಯನ್ನು ಟೈಮ್ ಪತ್ರಿಕೆ ಪ್ರಕಟಿಸಿದ್ದು, ಅದರಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಹಾಗೂ ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ಸ್ಥಾನ ಪಡೆದಿದ್ದಾರೆ.
ಅಶ್ವಿನಿ ವೈಷ್ಣವ್ ಅವರನ್ನು ಶಾರ್ಪರ್ ವರ್ಗದಲ್ಲಿ ಹೆಸರಿಸಲಾಗಿದ್ದು, ಅವರ ನಾಯಕತ್ವದಲ್ಲಿ ಮುಂದಿನ 5 ವರ್ಷಗಳಲ್ಲಿ ಸೆಮಿಕಂಡಕ್ಟರ್ ತಯಾರಿಕಾ ಕ್ಷೇತ್ರದ ಮೊದಲ 5 ದೇಶಗಳಲ್ಲಿ ಭಾರತ ಸ್ಥಾನ ಪಡೆಯುವ ಆಶಯದಲ್ಲಿದೆ ಎಂದು ಟೈಮ್ ಮ್ಯಾಗ್‌ಜೀನ್ ಬರೆದಿದೆ.
ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಭಾರತವನ್ನು ಪ್ರಮುಖ ಶಕ್ತಿಯಾಗಿ ಹೊರಹೊಮ್ಮಿಸುವ ಪ್ರಯತ್ನದಲ್ಲಿ ಸಚಿವರು ನಿರ್ವಹಿಸಿದ ಮಹತ್ವದ ಪಾತ್ರದ ಹಿನ್ನೆಲೆಯಲ್ಲಿ ಪಟ್ಟಿಯಲ್ಲಿ ಅವರ ಹೆಸರು ನಮೂದಿತವಾಗಿದೆ ಎಂದು ವಾರ್ತಾ ಮತ್ತು ಪ್ರಸಾರ ಸಚಿವಾಲಯ ತಿಳಿಸಿದೆ.
ಕೃತಕ ಬುದ್ಧಿಮತ್ತೆ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಪ್ರಮುಖ ಕೊಡುಗೆ ನೀಡಿದ ಇನ್ಫೋಸೀಸ್‌ನ ಸಹ ಸಂಸ್ಥಾಪಕ ನಂದನ್ ನಿಲೇಕಣಿ, ಸಿಇಓಗಳಾದ ಗೂಗಲ್‌ನ ಸುಂದರ್ ಪಿಚಾಯಿ, ಮೈಕ್ರೋಸಾಫ್ಟ್‌ನ ಸತ್ಯ ನಾದೆಲ್ಲಾ, ಓಪನ್‌ಎಐ ನ ಸ್ಯಾಮ್ ಅಲ್ಟ್‌ಮನ್, ಮೆಟಾದ ಮಾರ್ಕ್ ಝುಕೇರ್‌ಬರ್ಗ್ ಟೈಮ್ ಪ್ರಕಟಿಸಿದ ಪಟ್ಟಿಯಲ್ಲಿ ಸೇರಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರಾಜಧಾನಿಯಲ್ಲಿ ಅಪಾಯಕಾರಿ ಮರಗಳನ್ನು ಕತ್ತರಿಸುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ
ಸುದ್ದಿದಿನಡೆಸ್ಕ್:ರಾಜಧಾನಿ ಬೆಂಗಳೂರಿನಲ್ಲಿ 15 ದಿನದೊಳಗೆ ಗುಂಡಿ ಮುಚ್ಚುವಂತೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ ಶಿವಕುಮಾರ್ ಸೂಚಿಸಿದ್ದಾರೆ.
ವಿದೇಶ ಪ್ರವಾಸಕ್ಕೂ ಮುನ್ನ ವೈಯಾಲಿಕಾವಲ್ ಬಿಬಿಎಂಪಿ ಕಚೇರಿಯಲ್ಲಿ ಅಧಿಕಾರಿಗಳ ಜತೆ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚುವುದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಇಂದು ಸಭೆ ನಡೆಸಿದ ಅವರು ಸರಿಯಾಗಿ ಕಾರ್ಯನಿವಹಿಸದ ಅಧಿಕಾರಿಗಳನ್ನು ಅಮಾನತುಗೊಳಿಸುವ ಎಚ್ಚರಿಕೆ ನೀಡಿದ್ದಾರೆ.
ಸೆಪ್ಟಂಬರ್‌ನಲ್ಲಿ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಅಧಿಕಾರಿಗಳು ಎಚ್ಚೆತ್ತುಕೊಳ್ಳುವಂತೆ ತಿಳಿಸಿದ ಅವರು, ಅಪಾಯಕಾರಿ ಮರಗಳಿದ್ದರೆ, ಕತ್ತರಿಸುವಂತೆ ಸೂಚಿಸಿದ್ದಾರೆ.
ಯಾವುದೇ ದೂರು ಬಂದರೆ ಅಧಿಕಾರಿಗಳೇ ನೇರ ಹೊಣೆ ಎಂದಿದ್ದಾರೆ. ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ವಿಶೇಷ ಆಯುಕ್ತ ಮೌನೀಶ್ ಮೌದ್ಗೀಲ್, ಬಿಎಂಆರ್ಡಿಎ ಆಯುಕ್ತ, ಉಪಮುಖ್ಯಮಂತ್ರಿಗಳ ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಮಹದಾಯಿ ವಿಚಾರದಲ್ಲಿ ತಪ್ಪು ದಾರಿಗೆ ಎಳೆಯುವ ಪ್ರಯತ್ನ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪ
ಸುದ್ದಿದಿನಡೆಸ್ಕ್:ಮಹದಾಯಿ ವಿಚಾರದಲ್ಲಿ ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮಹದಾಯಿ ಯೋಜನೆಯ ಹಿನ್ನಡೆಗೆ ಕಾಂಗ್ರೆಸ್ ಕಾರಣ ಎಂದು ದೂರಿದ್ದಾರೆ. ಜುಲೈನಲ್ಲಿ ನಡೆದ ಸಭೆ ತಮ್ಮ ಗಮನಕ್ಕೆ ಬಂದಿಲ್ಲ ಎಂದು ತಿಳಿಸಿದ ಅವರು, ರಾಜ್ಯದ ಜನರ ಹಿತ ಕಾಪಾಡಲು ಬದ್ಧ ಎಂದು ಹೇಳಿದ್ದಾರೆ. ಮಹದಾಯಿ ಕೇವಲ ಗೋವಾ ಸಂಬಂಧಿ ಯೋಜನೆ ಅಲ್ಲ. ಅಲ್ಲಿ ಹುಲಿ ಸಂರಕ್ಷಿತ ಪ್ರದೇಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ5 days ago
ಪರಿಶಿಷ್ಟ ಜಾತಿ ಯುವಕ , ಯುವತಿಯರಿಗೆ ಜಿಮ್ ಫಿಟ್ನೆಸ್, ಬ್ಯೂಟೀಷಿಯನ್, ಚಾಟ್ಸ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ರಾಯಚೂರು | ಶಾಲಾ ಬಸ್ ಅಪಘಾತ ; ಇಬ್ಬರು ವಿದ್ಯಾರ್ಥಿಗಳು ಸಾವು
-
ದಿನದ ಸುದ್ದಿ4 days ago
ಇಂದು ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ
-
ದಿನದ ಸುದ್ದಿ3 days ago
ಆತ್ಮಕತೆ | ಸರಳ ಹಾಗೂ ಒಲವಿನ ಮದುವೆಗಳ ಸಾಲುಸಾಲು
-
ದಿನದ ಸುದ್ದಿ5 days ago
ಸರ್ಕಾರಿ ಐಟಿಐ ಪ್ರವೇಶಕ್ಕೆ ಆಹ್ವಾನ
-
ದಿನದ ಸುದ್ದಿ4 days ago
ಭಾನುವಾರವೂ ಕ್ಯಾಶ್ ಕೌಟರ್ ಓಪನ್ ; ವಿದ್ಯುತ್ ಬಿಲ್ ಬಾಕಿ ಪಾವತಿಸಿ : ಬೆಸ್ಕಾಂ
-
ದಿನದ ಸುದ್ದಿ3 days ago
ರಿವರ್ ಕ್ರಾಸಿಂಗ್ ತರಬೇತಿ ; ಬೋಟ್ ಮುಳುಗಿ ಇಬ್ಬರು ಕಮಾಂಡೋಗಳು ಸಾವು
-
ದಿನದ ಸುದ್ದಿ4 days ago
ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ