ದಿನದ ಸುದ್ದಿ

ನರೇಂದ್ರ ಮೋದಿ ಹರಿಯಾಣದ ಗುರುಗ್ರಾಮಕ್ಕೆ ಭೇಟಿ, ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಗುರುಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ವಿವಿಧ ರಾಜ್ಯಗಳಿಗೆ ಸುಮಾರು ಒಂದು ಲಕ್ಷ ಕೋಟಿ ರೂಪಾಯಿ ಮೌಲ್ಯದ 112 ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಈ ಯೋಜನೆಗಳು ರಾಷ್ಟ್ರೀಯ ಹೆದ್ದಾರಿ ಜಾಲದ ಬೆಳವಣಿಗೆಗೆ ಗಮನಾರ್ಹ ಕೊಡುಗೆ ನೀಡುತ್ತವೆ ಮತ್ತು ದೇಶಾದ್ಯಂತ ಸಾಮಾಜಿಕ-ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ. ಸುಮಾರು 4 ಸಾವಿರದ 100 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ 8 ಪಥದ ದ್ವಾರಕಾ ಎಕ್ಸ್ ಪ್ರೆಸ್ ವೇಯ 19ಕಿಲೋಮೀಟರ್ ಉದ್ದದ ಹರಿಯಾಣ ವಿಭಾಗವನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ. ಇದು ದೆಹಲಿಯ ಐಜಿಐ ವಿಮಾನ ನಿಲ್ದಾಣ ಮತ್ತು ಗುರುಗ್ರಾಮ್ ಬೈಪಾಸ್ ಗೆ ನೇರ ಸಂಪರ್ಕವನ್ನು ಒದಗಿಸುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version