ದಿನದ ಸುದ್ದಿ

ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ; ವಿವಿಧ ಪಕ್ಷಗಳ ಪ್ರಚಾರ ಬಿರುಸು

Published

on

ಸುದ್ದಿದಿನ ಡೆಸ್ಕ್ : ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಪ್ರಚಾರ ಬಿರುಸುಗೊಂಡಿದೆ. ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳು ತಮ್ಮ ಪಕ್ಷದ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದಾರೆ.

ಬಿಜೆಪಿ ಹಿರಿಯ ಮುಖಂಡ ಹಾಗೂ ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ಮೈಸೂರಿನಲ್ಲಿ ರೋಡ್ ಶೋ ನಡೆಸುವ ಮೂಲಕ ಪಕ್ಷದ ಅಭ್ಯರ್ಥಿ ಪರ ಪ್ರಚಾರ ನಡೆಸಿದರು. ಇದಕ್ಕೂ ಮುನ್ನಾ ಅವರು, ಕೋಲಾರ, ಚನ್ನಪಟ್ಟಣ ಹಾಗೂ ಬೇಲೂರಿನಲ್ಲಿ ಆಯೋಜಿಸಿದ ಬಿಜೆಪಿ ಚುನಾವಣಾ ಸಮಾವೇಶದಲ್ಲಿ ಪಾಲ್ಗೊಂಡು ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದರು.

ರಾಯಚೂರಿನಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಿಜೆಪಿ ಪ್ರಚಾರ ಸಭೆಯಲ್ಲಿ ಪಾಲ್ಗೊಂಡರು. ಹಾವೇರಿ ಜಿಲ್ಲೆ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಚಾರ ನಡೆಸಿದರು.

ಶಿವಮೊಗ್ಗದಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಬೆಳಗಾವಿ ಜಿಲ್ಲೆ ಖಾನಾಪುರ ಮತಕ್ಷೇತ್ರದಲ್ಲಿ, ಪಕ್ಷದ ಮುಖಂಡ ರಾಹುಲ್ ಗಾಂಧಿ ಚಾಮರಾಜನಗರದಲ್ಲಿ, ಹಿರಿಯ ಮುಖಂಡ ಸಿದ್ದರಾಮಯ್ಯ ತುಮಕೂರಿನಲ್ಲಿ ಪಕ್ಷದ ಪರ ಪ್ರಚಾರ ನಡೆಸಿದರು.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸೇರಿದಂತೆ ಪಕ್ಷದ ವಿವಿಧ ನಾಯಕರು ವಿವಿಧ ಜಿಲ್ಲೆಗಳಲ್ಲಿ ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡರು. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಚಿತ್ರದುರ್ಗದಲ್ಲಿ ಆಮ್ ಆದ್ಮಿ ಪಕ್ಷದ ಪರ ಮತಯಾಚಿಸಿದರು. ಸಂಜೆ ಬೆಂಗಳೂರಿನಲ್ಲಿ ಆಯೋಜಿಸಿದ್ದ ರೋಡ್ ಶೋನಲ್ಲಿ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version