Connect with us

ದಿನದ ಸುದ್ದಿ

ಆನ್‌ಲೈನ್ ವಂಚನೆ ಬಗ್ಗೆ ಜಾಗೃತರಾಗಿರಿ; ಮನ್ ಕೀ ಬಾತ್ ಕರ್ನಾಟಕ ಸೈಬರ್ ಕ್ರೈಮ್ ವಂಚನ ಪ್ರಕರಣ ಉಲ್ಲೇಖಿಸಿ ಪ್ರಧಾನಿ

Published

on

ಸುದ್ದಿದಿನಡೆಸ್ಕ್:‘ಕಾನೂನಿನಲ್ಲಿ ಡಿಜಿಟಲ್ ಅರೆಸ್ಟ್ ಅನ್ನೋ ವ್ಯವಸ್ಥೆಯೇ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ತಮ್ಮ ಜನಪ್ರಿಯ ಮನ್ ಕಿ ಬಾತ್ ಬಾನುಲಿ ರ‍್ಯಕ್ರಮದಲ್ಲಿ ದೇಶವಾಸಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಡಿಜಿಟಲ್ ಅರೆಸ್ಟ್ ಮಾಡಿದ್ದೇವೆ ಎನ್ನುವುದು ಬರೀ ಸುಳ್ಳು. ಕ್ರಿಮಿನಲ್ ಗ್ಯಾಂಗ್‌ಗಳು, ವಂಚಕರು ಮಾಡುವ ಕೆಲಸವದು ಎಂದು ಹೇಳಿದರು.

ಆನ್ಲೈನ್ ಫ್ರಾಡ್ ಹೇಗಿರುತ್ತದೆ ಎನ್ನುವ ನರ‍್ಶನಗಳನ್ನೂ ದೇಶದ ಜನತೆಗೆ ಪ್ರಧಾನಿ ನೀಡಿದರು. ರ‍್ನಾಟಕ ಸೈಬರ್ ಕ್ರೈಮ್ ವಂಚನೆ ಪ್ರಕರಣ ಉಲ್ಲೇಖಿಸಿ ಮನದ ಮಾತಿನಲ್ಲಿ ಪ್ರಧಾನಿ ಜಾಗೃತಿ ಮೂಡಿಸಿದರು.

ಪೊಲೀಸ್, ಸಿಬಿಐ, ರ‍್ಕೋಟಿಕ್ಸ್, ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ ವಂಚಕರು ನಿಮಗೂ ಫೋನ್ ಮಾಡಬಹುದು. ನಿಮ್ಮ ಮೇಲೆ ಕೇಸ್ ದಾಖಲಿಸಲಾಗುತ್ತದೆ ಇತ್ಯಾದಿ ಬೆದರಿಕೆ ಹಾಕಬಹುದು ಎಂದು ಅವರು ಉದಾಹರಣೆ ಸಮೇತ ಜನರಿಗೆ ಎಚ್ಚರಿಕೆ ನೀಡಿದ್ದಾರೆ.

ಸೈಬರ್ ಕ್ರೈಮ್ ಹೆಲ್ಪ್ಲೈನ್ ನಂಬರ್ 1930 ಮತ್ತು cybercrime.gov.inವೆಬ್‌ಸೈಟ್‌ನಲ್ಲಿ ದೂರು ನೀಡುವಂತೆ ಹಾಗೂ #SaveDigitalIndia ಅನ್ನೋ ಹ್ಯಾಷ್‌ಟ್ಯಾಗ್ ಮೂಲಕ ಸೋಷಿಯಲ್ ಮೀಡಿಯಾದಲ್ಲಿ ಜಾಗ್ರತೆ ಮೂಡಿಸಿ ಎಂದು ಪ್ರಧಾನಿ ಮನ್ ಕೀ ಬಾತ್‌ನಲ್ಲಿ ತಿಳಿಸಿದರು.

ದೇಶದಲ್ಲಿನ ಶಾಲೆಗಳು, ಮಕ್ಕಳ ಫಿಟ್ನೆಸ್ ಬಗ್ಗೆ ಈಗ ಮತ್ತಷ್ಟು ಹೆಚ್ಚಿನ ಗಮನ ನೀಡುತ್ತಿರುವುದನ್ನು ನೋಡಿ ಬಹಳ ಸಂತೋಷವಾಗುತ್ತಿದೆ. Fit India School Hours ಕೂಡಾ ಒಂದು ವಿಶಿಷ್ಟ ಉಪಕ್ರಮವಾಗಿದೆ.

ದೇಶದೆಲ್ಲೆಡೆ ಶಾಲೆಗಳಲ್ಲಿ ರ‍್ನಾಟಕದಲ್ಲಿ ಮನೆಮಾತಾಗಿರುವ ಖೋ ಖೋ ಕಬಡ್ಡಿಯಂತಹ ಸಾಂಪ್ರದಾಯಿಕ ಆಟಗಳನ್ನು ಆಡಿಸಲಾಗುತ್ತಿದೆ. ಇವುಗಳ ಪರಿಣಾಮ ಬಹಳ ಅದ್ಭುತವಾಗಿದೆ. ಹಾಜರಾತಿ ಪ್ರಮಾಣ ಉತ್ತಮವಾಗುವುದರ ಜೊತೆಗೆ ಮಕ್ಕಳ ಏಕಾಗ್ರತೆ ಹೆಚ್ಚಾಗುತ್ತಿದೆ ಎಂದು ಹೇಳಿದರು.
ಇದೇ ವೇಳೆ ದೇಶದ ಜನತೆಗೆ ಧನ್ ತೇರಸ್, ದೀಪಾವಳಿ, ಛಟ್ ಪೂಜಾ, ಗುರುನಾನಕ್ ಜಯಂತಿ ಶುಭಾಶಯಗಳನ್ನು ಪ್ರಧಾನಿ ತಿಳಿಸಿದ್ದಾರೆ.

ಎಲ್ಲರೂ ಬಹಳ ಸಂತೋಷ ಉಲ್ಲಾಸಗಳಿಂದ ಹಬ್ಬಗಳನ್ನು ಆಚರಿಸಿ. ವೋಕಲ್ ಫಾರ್ ಲೋಕಲ್ ಮಂತ್ರದೊಂದಿಗೆ ಹಬ್ಬಗಳ ಸರ‍್ಭದಲ್ಲಿ ಸ್ಥಳೀಯ ಅಂಗಡಿಗಳಿಂದ ಖರೀದಿಸಿದ ವಸ್ತುಗಳು ನಿಮ್ಮ ಮನೆಗಳಿಗೆ ಬರಲಿ ಎಂದು ಮನ್ ಕೀ ಬಾತ್ ನಲ್ಲಿ ಮನವಿ ಮಾಡಿದ್ದಾರೆ.

ಇದೇ ವೇಳೆ, ಆತ್ಮರ‍್ಭರ್ ಭಾರತ್ ಅಭಿಯಾನ ಯಶಸ್ವಿಯಾಗಿದೆ ಎಂದು ಪ್ರಧಾನಿ ಸಂತಸ ವ್ಯಕ್ತಪಡಿಸಿದರು. ಸ್ವಾವಲಂಬಿ ಭಾರತವು ಪ್ರತಿಯೊಂದು ಕ್ಷೇತ್ರದಲ್ಲೂ ಅದ್ಭುತ ಸಾಧನೆಗಳನ್ನು ಮಾಡುತ್ತಿದೆ ಎಂದ ಅವರು ವಿಶ್ವದಲ್ಲೇ ಅತಿ ಹೆಚ್ಚು ರಕ್ಷಣಾ ಸಾಧನಗಳನ್ನು ಖರೀದಿಸುವ ದೇಶವಾಗಿದ್ದ ಭಾರತ ಈಗ 85 ದೇಶಗಳಿಗೆ ರಕ್ಷಣಾ ಸಾಧನಗಳನ್ನು ರಫ್ತು ಮಾಡುತ್ತಿದೆ ಎಂದು ಹೇಳಿದರು. ಏಷ್ಯಾದ ಅತಿದೊಡ್ಡ ’ಇಮೇಜಿಂಗ್ ಟೆಲಿಸ್ಕೋಪ್ ಒಂಅಇ’ ಅನ್ನು ಲಡಾಖ್‌ನ ಹಾನ್ಲೆಯಲ್ಲಿ ಉದ್ಘಾಟಿಸಲಾಗಿದ್ದು ಇದನ್ನು ಭಾರತದಲ್ಲೇ ತಯಾರಿಸಲಾಗಿದೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ “ಕುಕಿಂಗ್ ವಿಥೌಟ್ ಫೈರ್” ಎಂಬ ಬೆಂಕಿ ರಹಿತ ಆಹಾರ ತಯಾರಿ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಹಲವಾರು ತಂಡಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ಅಂಗವಾಗಿ ಆಹಾರ ಮೇಳವೂ ಏರ್ಪಡಿಸಲಾಯಿತು. ವಿದ್ಯಾರ್ಥಿನಿಯರು ಕಾರಟ್ ಹಲ್ವಾ, ಫ್ರೂಟ್ ಸಲಾಡ್, ಚುರಿ ಮುರಿ, ಮೊಸರು ಅವಲಕ್ಕಿ, ವಿವಿಧ ರುಚಿಯ ಜ್ಯೂಸ್‌ಗಳು, ಕೊಕೊನೆಟ್ ಬರ್ಫಿ, ಕುಕುಂಬರ್ ಬೋಟ್, ಟೊಮೇಟೊ ಚಾಟ್, ಆಪಲ್ ಪೇಡ ಮತ್ತು ಅವಲಕ್ಕಿ ಚಿತ್ರಾನ್ನ ಸೇರಿದಂತೆ ಹಲವಾರು ಪೌಷ್ಟಿಕ ಹಾಗೂ ರುಚಿಕರ ಆಹಾರಗಳನ್ನು ತಯಾರಿಸಿ ಪ್ರದರ್ಶನೆ ಮತ್ತು ಮಾರಾಟ ಮಾಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು ಪಾಲ್ಗೊಂಡು ಯಶಸ್ವಿ ಕಾರ್ಯಕ್ರಮವನ್ನಾಗಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ

Published

on

ಸುದ್ದಿದಿನ,ದಾವಣಗೆರೆ: ಜಿಲ್ಲೆಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್‌ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30, 2026 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ.

ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ.

ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಮತ್ತು ಪೂರಕ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಪೋಷಕರು ಈ ಜವಾಬ್ದಾರಿಯನ್ನು ಅರಿತು, ನಿಗದಿತ ಅವಧಿಯೊಳಗೆ ತಮ್ಮ ಮಕ್ಕಳ ಆಧಾರ್ ನವೀಕರಿಸುವ ಮೂಲಕ ಸರ್ಕಾರದ ಯೋಜನೆಗಳು ತಲುಪಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಹಿರಿಯ ಕ್ರಿಕೆಟ್ ಪಟು ಎನ್ಆರ್‌ಎಚ್ ರಮೇಶ್ ನಿಧನ

Published

on

ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್‌ಎಚ್‌ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್‌ನ ನಾಯಕನಾಗಿದ್ದ ಎನ್.ಆರ್‌.ಎಚ್‌.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್‌, 2ನೇ ಮೇನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.

90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್‌ ಬಾಲ್‌ ಕ್ರಿಕೆಟ್‌ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್‌ಎಚ್‌ ರಮೇಶ ನಿಧನಕ್ಕೆ ಎಫ್‌ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್‌ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್‌ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending