ದಿನದ ಸುದ್ದಿ

ಮೋದಿ ರೋಡ್ ಶೋ | ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಪೋಲಿಸರೇ ತಲುಪಿಸ್ತಾರೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳಿಂದ ಪ್ರಚಾರ ಬಿರುಸುಗೊಂಡಿದೆ.

ಬಿಜೆಪಿ ಹಿರಿಯ ನಾಯಕ, ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ಮತ್ತು ನಾಳೆ ರಾಜಧಾನಿ ಬೆಂಗಳೂರಿನಲ್ಲಿ ರೋಡ್ ಶೋ ನಡೆಸಿ ಪಕ್ಷದ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ.

ನಾಳೆ ನೀಟ್ ಪರೀಕ್ಷೆ ಇರುವುದರಿಂದ ಪ್ರಧಾನಿ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಲಾಗಿದ್ದು, ವಿದ್ಯಾರ್ಥಿಗಳು ತೊಂದರೆಗೆ ಸಿಲುಕಿದರೆ ಅಂತಹ ವಿದ್ಯಾರ್ಥಿಗಳು ಪ್ರವೇಶ ಪತ್ರ ತೋರಿಸಿದರೆ, ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಿಗೆ ಪೋಲಿಸರೇ ತಲುಪಿಸುತ್ತಾರೆ ಎಂದು ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಪ್ರಧಾನಿ ರೋಡ್ ಶೋ ಹಿನ್ನೆಲೆಯಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದ್ದು, ಸಾರ್ವಜನಿಕರು ಬದಲಿ ಮಾರ್ಗ ಬಳಸುವಂತೆ ಟ್ರಾಫಿಕ್ ಪೊಲೀಸರು ಮನವಿ ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version