ಕ್ರೀಡೆ
ಸೋಮವಾರ | ಬೆಳಗಿನ ಪ್ರಮುಖ ಸುದ್ದಿಗಳು
ಸೋಮವಾರ | ಬೆಳಗಿನ ಪ್ರಮುಖ ಸುದ್ದಿಗಳು
- ದಾವೋಸ್ ನಲ್ಲಿ ಐದು ದಿನಗಳ ವಿಶ್ವ ಆರ್ಥಿಕ ಒಕ್ಕೂಟದ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಮುರುಗೇಶ್ ನಿರಾಣಿ, ಡಾ||ಸಿ.ಎನ್.ಅಶ್ವತ್ಥನಾರಾಯಣ್ ಭಾಗಿಯಾಗಿ ವಿದೇಶಿ ಬಂಡವಾಳ ಹೂಡಿಕೆ ಸೆಳೆಯಲು ಪ್ರಯತ್ನ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
- ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಕಡಿತ ಮಾಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಹಿಂದೆ ಕೇಂದ್ರ ಸರ್ಕಾರ ತೈಲದ ಮೇಲಿನ ಸುಂಕ ಕಡಿತಗೊಳಿಸಿದಾಗ ರಾಜ್ಯ ಸರ್ಕಾರ ತೆರಿಗೆ ಕಡಿತಗೊಳಿಸಿತ್ತು. ಅದೇ ರೀತಿ ಈ ಬಾರಿಯೂ ತೆರಿಗೆ ಕಡಿತ ಮಾಡುವ ಬಗ್ಗೆ ಪರಿಶೀಲಿಸಲಾಗವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
- ಕಲಬುರಗಿ ಉಪವಿಭಾಗ ಕಾರ್ಮಿಕ ಅಧಿಕಾರಿಗಳ ಕಚೇರಿ ವ್ಯಾಪ್ತಿಯಲ್ಲಿ 2021-22ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 600ಅಂಕಗಳಿಗಿಂತ ಹೆಚ್ಚು ಅಂಕ ಪಡೆದು ವಿಶೇಷ ಸಾಧನೆ ಮಾಡಿರುವ ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳನ್ನು ಗುರುತಿಸಿ ವಿಶೇಷ ಪ್ರೋತ್ಸಾಹಧನ ನೀಡಲು ಅರ್ಹ ಕಾರ್ಮಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಇದೇ 27 ಕೊನೆ ದಿನ.
- ಈ ವರ್ಷದಿಂದ ಗೆಜಿಟೆಡ್‌ಯೇತರ ಹುದ್ದೆಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ ಸಿಇಟಿ ನಡೆಸಲು ನಿರ್ಧರಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಸಾರ್ವಜನಿಕ ಕುಂದುಕೊರತೆಗಳ ಖಾತೆ ಸಚಿವ ಡಾ||ಜಿತೇಂದ್ರ ಸಿಂಗ್ ಹೇಳಿದ್ದಾರೆ. ಒಂದೇ ಪರೀಕ್ಷೆ ನಡೆಯುವುದರಿಂದ ಅಭ್ಯರ್ಥಿಗಳು ಪರೀಕ್ಷೆಗಾಗಿ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಅಲೆಯುವುದು ತಪ್ಪುತ್ತದೆ. ಇದರಿಂದ ದುರ್ಗಮ ಪ್ರದೇಶಗಳಲ್ಲಿ ವಾಸಿಸುವವರಿಗೆ ಹೆಚ್ಚಿನ ಅನುಕೂಲವಾಗುವುದು ಎಂದು ಸಚಿವರು ತಿಳಿಸಿದ್ದಾರೆ.
- ಸ್ವಿಡಜರ್ಲೆಂಡ್‌ನ ದಾವೋಸ್‌ನಲ್ಲಿ ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಭೆ ನಿನ್ನೆ ರಾತ್ರಿ ಆರಂಭವಾಗಿದೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಭಾರತ ನಿಯೋಗದ ನೇತೃತ್ವ ವಹಿಸಿದ್ದಾರೆ. ಇದೇ 26 ರವರೆಗೆ ನಡೆಯಲಿರುವ ಸಭೆಯಲ್ಲಿ ಕೇಂದ್ರ ಸಚಿವರಾದ ಮನ್ಸುಖ್ ಮಾಂಡವಿಯಾ, ಹರ್ದೀಪ್ ಸಿಂಗ್ ಪುರಿ, ಕರ್ನಾಟಕ, ಮಧ್ಯಪ್ರದೇಶ, ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ ಮತ್ತು ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಹಿರಿಯ ಸಚಿವರು, ಉದ್ಯಮ ನಾಯಕರು ಭಾಗವಹಿಸಲಿದ್ದಾರೆ.
- ಎರಡು ದಿನಗಳ ಕ್ವಾಡ್ ದೇಶಗಳ ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಮಂತ್ರಿ ನರೇಂದ್ರ ಮೋದಿ ನಿನ್ನೆ ರಾತ್ರಿ ಟೋಕಿಯೋ ತಲುಪಿದ್ದಾರೆ. ಭಾರತ, ಜಪಾನ್, ಆಸ್ಟ್ರೇಲಿಯಾ ಮತ್ತು ಅಮೆರಿಕ ಕ್ವಾಡ್ ರಾಷ್ಟ್ರಗಳಾಗಿದ್ದು ಇಂಡೋ-ಪೆಸಿಫಿಕ್ ಪ್ರದೇಶದಲ್ಲಿನ ಬೆಳವಣಿಗೆಗಳು ಮತ್ತು ಪರಸ್ಪರ ಹಿತಾಸಕ್ತಿಯ ಜಾಗತಿಕ ಸಮಸ್ಯೆಗಳ ಬಗ್ಗೆ ಅಭಿಪ್ರಾಯ ವಿನಿಮಯಕ್ಕೆ ಇದು ಉತ್ತಮ ಅವಕಾಶವಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
- ಲಂಡನ್ ನ ಲ್ಯಾಂಬೆತ್ ನಲ್ಲಿ ಥೇಮ್ಸ್ ನದಿಯ ತಟದಲ್ಲಿರುವ ಬಸವೇಶ್ವರರ ಪ್ರತಿಮೆಗೆ ಉನ್ನತ ಶಿಕ್ಷಣ ಸಚಿವ ಡಾ||ಸಿ.ಎನ್.ಅಶ್ವತ್ಥನಾರಾಯಣ ನಿನ್ನೆ ಗೌರವ ನಮನ ಸಲ್ಲಿಸಿದರು. ಬಸವಣ್ಣನವರ ತತ್ವ, ಚಿಂತನೆಗಳಿಂದ ಪ್ರೇರಣೆ ಪಡೆದು ರಾಜ್ಯ ಮುಂದಿನ 25 ವರ್ಷಗಳಲ್ಲಿ ಶೈಕ್ಷಣಿಕ ಮತ್ತು ಆರ್ಥಿಕ ವಲಯಗಳಲ್ಲಿ ಅಭೂತಪೂರ್ವ ಪ್ರಗತಿ ಸಾಧಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
- ಮಳೆ ಅನಾಹುತ ಮತ್ತು ಅದಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ 8 ವಲಯಗಳಿಗೆ ಬೆಂಗಳೂರಿನ ಸಚಿವರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಲಾಗಿದೆ. ಈ ಕಾರ್ಯಪಡೆಯಲ್ಲಿ ಸಂಬಂಧಪಟ್ಟ ವಲಯಗಳ ಶಾಸಕರು, ಸಂಸದರು ಮತ್ತು ಬಿಬಿಎಂಪಿ ಅಧಿಕಾರಿಗಳು ಸದಸ್ಯರಾಗಿರುತ್ತಾರೆ. ವಲಯಗಳ ಜಂಟಿ ಆಯುಕ್ತರು ಕಾರ್ಯಪಡೆಯ ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಾರೆ.
- ಮುಂಬೈನ ವಾಂಖಡೆ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಐಪಿಎಲ್ ಕ್ರಿಕೆಟ್ ಪಂದ್ಯದಲ್ಲಿ ಸನ್ ರೈಸರ‍್ಸ್ ಹೈದರಾಬಾದ್ ತಂಡದ ವೊರಿದ್ಧ ಪಂಜಾಬ್ ಕಿಂಗ್ಸ್ ತಂಡ 5 ವಿಕೆಟ್‌ಗಳ ಜಯಗಳಿಸಿದೆ. ಮೊದಲು ಬ್ಯಾಟ್ ಮಾಡಿದ ಸನ್‌ರೈಸರ‍್ಸ್ ಹೈದರಾಬಾದ್ 20ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ157 ರನ್ ಗಳಿಸಿದರೆ, ಪಂಜಾಬ್ ಕಿಂಗ್ಸ್ .೧ 15.1ಓವರ್‌ಗಳಲ್ಲಿ 5 ವಿಕಟ್ ನಷ್ಟಕ್ಕೆ 160ರನ್‌ಗಳಿಸಿ ಪಂದ್ಯವನ್ನು ಗೆದ್ದುಕೊಂಡಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
2024ರ ಕ್ರೀಡಾ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಸುದ್ದಿದಿನಡೆಸ್ಕ್:ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ 2025ರ ಕ್ರೀಡಾ ಪ್ರಶಸ್ತಿಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
ಕ್ರೀಡೆಗಳಲ್ಲಿನ ಶ್ರೇಷ್ಠತೆಯನ್ನು ಗುರುತಿಸಲು ಮತ್ತು ಗೌರವಿಸಲು ಪ್ರತಿ ವರ್ಷ ಕ್ರೀಡಾ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ಕ್ರೀಡಾ ಕ್ಷೇತ್ರದಲ್ಲಿ ಅದ್ಭುತ ಮತ್ತು ಅತ್ಯುತ್ತಮ ಪ್ರದರ್ಶನಕ್ಕಾಗಿ ನೀಡಲಾಗುತ್ತದೆ. ಕ್ರೀಡೆಯಲ್ಲಿ ಜೀವಮಾನದ ಕೊಡುಗೆಗಾಗಿ ಅರ್ಜುನ ಪ್ರಶಸ್ತಿಯನ್ನು ಪರಿಚಯಿಸಲಾಗಿದೆ.
ಪ್ರತಿಷ್ಠಿತ ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರನ್ನು ತರಬೇತಿ ನೀಡಿದ ತರಬೇತುದಾರರಿಗೆ ದ್ರೋಣಾಚಾರ್ಯ ಪ್ರಶಸ್ತಿ ನೀಡಲಾಗುತ್ತದೆ. ಪ್ರಶಸ್ತಿಗಾಗಿ ಅರ್ಹ ಕ್ರೀಡಾಪಟುಗಳು, ತರಬೇತುದಾರರು ಮತ್ತು ಸಂಘಗಳು ಅರ್ಜಿಗಳನ್ನು ಆನ್‌ಲೈನ್ ಪೋರ್ಟಲ್ https://dbtyas-sports.gov.in/ ನಲ್ಲಿ ನವೆಂಬರ್ 14 ರೊಳಗೆ ಸಲ್ಲಿಸಬೇಕು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ದಾವಣಗೆರೆ | ಜೂಡೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ; ರಾಜ್ಯ ಮಟ್ಟಕ್ಕೆ ಆಯ್ಕೆ
ಸುದ್ದಿದಿನ,ದಾವಣಗೆರೆ:2024 -25 ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಮಹಿಳಾ ಸೇವಾ ಸಮಾಜದ ಟಿ.ಎಂ. ಚಿನ್ನಮ್ಮ ಮಹೇಶ್ವರಯ್ಯ ಮೆಮೋರಿಯಲ್ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಪೂರ್ಣಿಮ ಎಂ ರವರು ಜಿಲ್ಲಾಮಟ್ಟದ ಜೂಡೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ಹಾಗೂ ರಾಜನಹಳ್ಳಿ ಸೀತಮ್ಮ ಬಾಲಕಿಯರ ಪದವಿ ಪೂರ್ವ ಕಾಲೇಜು ದಾವಣಗೆರೆ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿತ್ತು.
ದೈಹಿಕ ಶಿಕ್ಷಕರಾದ ಎಂ ಎನ್ ಮರಳ ಸಿದ್ದಪ್ಪರವರ ಮಾರ್ಗದರ್ಶನದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
Olympic Games Paris 2024 | ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ ; ಇಲ್ಲಿದೆ ಇಂದಿನ ಆಟಗಳ ಸಂಪೂರ್ಣ ಮಾಹಿತಿ
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಎರಡನೇ ದಿನವಾದ ಇಂದು ಮಹಿಳೆಯರ 10 ಮೀಟರ್ ಏರ್ ರೈಫಲ್ ಫೈನಲ್ಸ್ ಪಂದ್ಯದಲ್ಲಿ ಮನು ಭಾಕರ್ ಕಂಚು ಪದಕ ಗೆಲ್ಲುವ ಮೂಲಕ ಭಾರತಕ್ಕೆ ಮೊದಲ ಪದಕ ಗೆದ್ದುಕೊಟ್ಟಿದ್ದಾರೆ.
ಈ ಮೂಲಕ ಅವರು, ಒಲಿಂಪಿಕ್ಸ್ನ ಮಹಿಳೆಯರ ಶೂಟಿಂಗ್ ವಿಭಾಗದಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಫೈನಲ್ ಪಂದ್ಯದಲ್ಲಿ ಹೆಚ್ಚಿನ ಕಾಲ 2ನೇ ಸ್ಥಾನದಲ್ಲಿದ್ದು, ಬೆಳ್ಳಿ ಗೆಲ್ಲುವ ಸನಿಹದಲ್ಲಿದ್ದ ಅವರನ್ನು ಕೊನೆ ಕ್ಷಣದಲ್ಲಿ ಕೊರಿಯಾದ ಕಿಮ್‌ಯೆಜಿ ಹಿಂದಿಕ್ಕಿದರು. ಫೈನಲ್ಸ್ನಲ್ಲಿ ಮನುಬಾಕರ್ 221.7 ಅಂಕಗಳ ಮೂಲಕ ಕಂಚು ಪದಕ ಗೆದ್ದರೆ ದಕ್ಷಿಣ ಕೊರಿಯಾದ ಕಿಮ್‌ಯೆಜಿ 241.3 ಅಂಕಗಳ ಮೂಲಕ ಬೆಳ್ಳಿ ಹಾಗೂ ಅದೇ ರಾಷ್ಟ್ರದ ಒಹ್ ಯೆ ಜಿನ್, ದಾಖಲೆಯ 243.2 ಅಂಕಗಳ ಮೂಲಕ ಸ್ವರ್ಣ ಪದಕ ತಮ್ಮದಾಗಿಸಿಕೊಂಡರು. ಮನು ಭಾಕರ್ ಅವರ ಈ ಸಾಧನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಮಹಿಳೆಯರ ಶೂಟಿಂಗ್ ಸ್ಪರ್ಧೆಯಲ್ಲಿ ಪದಕ ಗೆದ್ದ ಭಾರತದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಮನು ಭಾಕರ್ ಪಾತ್ರರಾಗಿದ್ದಾರೆ. ಅವರ ಈ ಸಾಧನೆಯ ಕುರಿತು ಭಾರತಕ್ಕೆ ಹೆಮ್ಮೆಯಿದ್ದು, ಅವರು ಅನೇಕ ಕ್ರೀಡಾಪಟುಗಳು ಹಾಗೂ ವಿಶೇಷವಾಗಿ ಮಹಿಳೆಯರಿಗೆ ಸ್ಫೂರ್ತಿದಾಯಕರಾಗಿದ್ದಾರೆ ಎಂದು ರಾಷ್ಟ್ರಪತಿಯವರು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮನು ಭಾಕರ್ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದು, ಭಾರತಕ್ಕೆ ಇದು ಐತಿಹಾಸಿಕ ಪದಕವಾಗಿದೆ. ಮಹಿಳಾ ಶೂಟಿಂಗ್‌ನಲ್ಲಿ ಭಾರತಕ್ಕೆ ಮೊದಲ ಪದಕ ತಂಡುಕೊಟ್ಟಿರುವುದರಿAದ ಇದೊಂದು ಅಸಾಮಾನ್ಯ ಹಾಗೂ ವಿಶೇಷ ಸಾಧನೆಯಾಗಿದೆ ಎಂದು ತಿಳಿಸಿದ್ದಾರೆ.
ಇಂದು ನಡೆದ ಪುರುಷರ 10 ಮೀಟರ್ ಏರ್ ರೈಫಲ್‌ನಲ್ಲಿ ಭಾರತದ ಅರ್ಜುನ್ ಬಬೂಟ 630.1 ಅಂಕಗಳೊAದಿಗೆ 7ನೇ ಸ್ಥಾನಗಳಿಸಿ ಫೈನಲ್ ಪ್ರವೇಶಿಸಿದ್ದಾರೆ. ಹಾಗೆಯೇ ಮಹಿಳೆಯರ 10 ಮೀಟರ್ ಏರ್ ರೈಫಲ್‌ನಲ್ಲಿ ರಮಿತಾ ಜಿಂದಾಲ್ ಫೈನಲ್ ಪ್ರವೇಶಿಸಿದ್ದಾರೆ. ರಮಿತಾ ಜಿಂದಾಲ್, 631.5 ಅಂಕಗಳೊAದಿಗೆ 5ನೇ ಸ್ಥಾನ ಪಡೆದು ಫೈನಲ್‌ಗೆ ಅರ್ಹತೆ ಪಡೆದರು. ಮತ್ತೊರ್ವ ಮಹಿಳಾ ಶೂಟರ್ ಎಲವೆನಿಲ್ ವಲರಿವನ್ 630.7 ಅಂಕಗಳೊAದಿಗೆ 10ನೇ ಸ್ಥಾನ ಪಡೆದು ಫೈನಲ್ ಪ್ರವೇಶಿಸಲು ವಿಫಲರಾದರು.
ಇಂದು ನಡೆದ ಮಹಿಳೆಯರ ಬ್ಯಾಡ್ಮಿಂಟನ್‌ನ ಸಿಂಗಲ್ಸ್ ವಿಭಾಗದ ತಮ್ಮ ಮೊದಲ ಪಂದ್ಯದಲ್ಲಿ 2 ಒಲಿಂಪಿಕ್ ಪದಕ ವಿಜೇತೆ ಭಾರತದ ಪಿ.ವಿ. ಸಿಂಧೂ, ಮಾಲ್ಡೀವ್ಸ್ನ ಫಾತಿಮತ್ ನಬಾಹ ಅಬ್ದುಲ್ ರಜಾಕ್ ಅವರನ್ನು 21-9, 21-6 ಅಂಕಗಳ ಅಂತರದಲ್ಲಿ ಮಣಿಸಿ ಶುಭಾರಂಭ ಕಂಡಿದ್ದಾರೆ. ಟೆಬಲ್ ಟೆನಿಸ್‌ನ 64ರ ಸುತ್ತಿನಲ್ಲಿ ಭಾರತದ ಶ್ರೀಜಾ ಅಕುಲಾ, ಸ್ವೀಡನ್‌ನ ಕ್ರಿಸ್ಟಿನಾ ಕಾಲ್ಬರ್ಗ್ ವಿರುದ್ಧ ಗೆಲುವು ಸಾಧಿಸಿ ಮುಂದಿನ ಹಂತಕ್ಕೆ ಅರ್ಹತೆ ಪಡೆದರು.
ಮಹಿಳಾ ಬಿಲ್ಲುಗಾರಿಕೆಯಲ್ಲಿ ದೀಪಿಕಾ ಕುಮಾರಿ, ಅಂಕಿತಾ ಭಕತ್ ಹಾಗೂ ಭಜನ್ ಕೌರ್ ಈ ಮೂವರನ್ನೊಳಗೊಂಡ ಭಾರತೀಯ ತಂಡ ಕ್ವಾಟರ್ ಫೈನಲ್‌ನಲ್ಲಿ ನೆದರ್‌ಲ್ಯಾಂಡ್ ತಂಡದ ವಿರುದ್ಧ 0-6 ಅಂಕಗಳಿಂದ ಪರಾಭವಗೊಂಡಿದೆ. ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ವಿಭಾಗದಲ್ಲಿ ಎಚ್.ಎಸ್. ಪ್ರಣೋಯ್, ಜರ್ಮನಿಯ ಫೇಬಿಯನ್ ರೋತ್ ವಿರುದ್ಧ ಹೋರಾಟ ನಡೆಸಲಿದ್ದಾರೆ.
ಪುರುಷರ ಡಬಲ್ಸ್ ವಿಭಾಗದ ಮೊದಲ ಸುತ್ತಿನಲ್ಲಿ ಭಾರತದ ಅನುಭವಿ ಆಟಗಾರರಾದ ರೋಹನ್ ಬೋಪಣ್ಣ ಹಾಗೂ ಶ್ರೀರಾಂ ಬಾಲಾಜಿ ಜೋಡಿ ಫ್ರಾನ್ಸ್ನ ಗೇಲ್ ಮೋನ್ಫಿಲ್ಸ್ ಮತ್ತು ಎಡ್ವರ್ಡ್ ರೋಜರ್ ವ್ಯಾಸೆಲಿನ್ ಜೋಡಿ ವಿರುದ್ಧ ಸೆಣಸಲಿದೆ. ಪ್ಯಾರಿಸ್ ಒಲಿಂಪಿಕ್ಸ್ನ ಟೇಬಲ್ ಟಿನ್ನಿಸ್ ಪಂದ್ಯದ ಮಹಿಳಾ ಸಿಂಗಲ್ಸ್ನಲ್ಲಿ ಭಾರತದ ಶ್ರೀಜಾ ಅಕುಲಾ ಹಾಗೂ ಮಹಿಳಾ ಬಾಕ್ಸಿಂಗ್‌ನ 50 ಕೆಜಿ ವಿಭಾಗದಲ್ಲಿ ನಿಕತ್ ಝರೀನ್ ಮುಂದಿನ ಸುತ್ತಿಗೆ ಪ್ರವೇಶ ಪಡೆದಿದ್ದಾರೆ.
https://x.com/siddaramaiah/status/1817536595970650154?t=otcDD00kQUBeN84H7DvrEA&s=19
ಸುದ್ದಿದಿನ.ಕಾಂ|ವಾಟ್ಸಾಪ್|9980346243