Connect with us

ದಿನದ ಸುದ್ದಿ

ದಾವಣಗೆರೆ | ಸೋಮವಾರದಿಂದ ಲಾಕ್‌ಡೌನ್ ನಲ್ಲಿ ಮತ್ತಷ್ಟು ರಿಯಾಯಿತಿ : ಡಿಸಿ ಮಹಾಂತೇಶ್ ಬೀಳಗಿ ಆದೇಶ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ಪ್ರಮಾಣ ಶೇ.5 ರೊಳಗೆ ಬಂದಿರುವುದರಿಂದ ರಾಜ್ಯ ಸರ್ಕಾರ ದಾವಣಗೆರೆ ಜಿಲ್ಲೆಯನ್ನು ‘ಎ’ ವರ್ಗಕ್ಕೆ ಸೇರಿಸಿದೆ. ಈ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲಾಧಿಕಾರಿ ಲಾಕ್‌ಡೌನ್ ಅಲ್ಲಿ ಮತ್ತಷ್ಟು ರಿಯಾಯಿತಿಯನ್ನು ಸೇರ್ಪಡೆಮಾಡಿ ಆದೇಶ ಹೊರಡಿಸಿದ್ದಾರೆ. ಅದರಂತೆ ಎಲ್ಲ ಅಂಗಡಿಗಳು ಹಾಗೂ ಹೋಟೆಲ್‌ಗಳು ಜು.5 ರವರೆಗೆ ಅನ್ವಯವಾಗುವಂತೆ ಬೆಳಿಗ್ಗೆ 6 ರಿಂದ ಸಂಜೆ 5 ಗಂಟೆಯವರೆಗೆ ವಹಿವಾಟು ನಡೆಸಬಹುದು. ಆದರೆ, ಹವಾನಿಯಂತ್ರಿತ ಶಾಪಿಂಗ್ ಕಾಂಪ್ಲೆಕ್ಸ್, ಮಾಲ್‌ಗಳಿಗೆ ಅನುಮತಿ ನಿಂಡಿಲ್ಲ.

ಜುಲೈ 5 ರ ಬೆಳಿಗ್ಗೆ 5 ಗಂಟೆಯವರೆಗೆ ಲಾಕ್‌ಡೌನ್ ಮುಂದುವರೆಯಲಿದ್ದು ಕೋವಿಡ್-19 ರ ಮಾರ್ಗಸೂಚಿಗಳ ಪಾಲನೆಯ ಷರತ್ತಿಗೆ ಒಳಪಟ್ಟು ಬಸ್‌ಗಳ ಆಸನದ ಗರಿಷ್ಠ ಶೇ.50 ರ ಸಾಮರ್ಥ್ಯದೊಂದಿಗೆ ಬಸ್ ಸಂಚಾರಕ್ಕೆ ಅನುಮತಿಸಿದೆ. ಪ್ರಯಾಣಿಕರು ಬಸ್‌ಗಳಲ್ಲಿ ನಿಂತು ಪ್ರಯಾಣಿಸಲು ಅವಕಾಶವಿರುವುದಿಲ್ಲ.

ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಆದರೆ, ಸರಕು ಸಾಗಾಣಿಕೆ ವಾಹನಗಳ ಸಂಚಾರಕ್ಕೆ ಅವಕಾಶವಿರುವ ಹಿನ್ನೆಲೆಯಲ್ಲಿ ವಾಹನಗಳು ಸರಕುಗಳನ್ನು ರಶೀದಿಯಲ್ಲಿ ನಮೂಧಿತ ವಿಳಾಸದ ಅಂಗಡಿ ಮತ್ತು ಗೋದಾಮುಗಳಲ್ಲಿ ಇಳಿಸಲು ಮತ್ತು ತೆಗೆದುಕೊಂಡು ಹೋಗಲು ಮಾತ್ರ ದಿನಪೂರ್ತಿ ಅವಕಾಶ ನೀಡಲಾಗಿದೆ.

ಎಲ್ಲಾ ವಿಧದ ಉತ್ಪಾದಿತ ಘಟಕಗಳು ,ಸಂಸ್ಥೆಗಳು, ಕೈಗಾರಿಕೆಗಳು, ಕೋವಿಡ್ ನಿಯಮಾವಳಿಯ ಮೇಲೆ ಶೇ.50 ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಬಹುದು. ಹಾಗೂ ಗಾರ್ಮೆಂಟ್ಸ್ ಗಳಲ್ಲಿ ಶೇ.30 ರ ಸಿಬ್ಬಂದಿಯೊAದಿಗೆ ಕೋವಿಡ್ ಕ್ರಮವನ್ನು ಅನುಸರಿಸಿ ಕಾರ್ಯನಿರ್ವಹಿಸಬಹುದಾಗಿದೆ.

ಸಾರ್ವಜನಿಕರು ಹೊರಗಡೆ ಓಡಾಡುವುದನ್ನು ನಿಯಂತ್ರಿಸುವುದಕ್ಕಾಗಿ ಕೋವಿಡ್-19 ನಿರ್ವಹಣೆಯ ಕಾರ್ಯಾಚರಣೆಗಳನ್ನು ರಾಷ್ಟ್ರೀಯ ನಿರ್ದೇಶನಗಳಿಗೆ ಒಳಪಟ್ಟು ಎಲ್ಲಾ ಅವಶ್ಯಕ ವಸ್ತುಗಳನ್ನು ಮನೆ ಮನೆಗೆ 24*7 ಅವಧಿಯಲ್ಲಿ ಪೂರೈಸಲು ಅನುಮತಿಸಲಾಗಿದೆ.

ಎಲ್ಲಾ ಹೋಟೆಲ್, ರೆಸ್ಟೋರೆಂಟ್, ಬಾರ್ ಹಾಗೂ ಕ್ಲಬ್‌ಗಳು ಬೆಳಿಗ್ಗೆ 6 ರಿಂದ ಸಂಜೆ 5 ರವರೆಗೆ ಶೇ.50 ರ ಸಾಮರ್ಥ್ಯದಲ್ಲಿ ಗ್ರಾಹಕರಿಗೆ ಸ್ಥಳದಲ್ಲೇ ಸೇವೆ ಸಲ್ಲಿಸಲು ಅನುಮತಿ ನೀಡಲಾಗಿದೆ. ಆದರೆ, ಊಟದ ಜೊತೆಗೆ ಮದ್ಯವನ್ನು ಪೂರೈಸುವಂತಿಲ್ಲ. ಹವಾನಿಯಂತ್ರಿತ ಹೋಟೆಲ್ ಇತ್ಯಾದಿಗಳು ಕಾರ್ಯನಿರ್ವಹಿಸುವಂತಿಲ್ಲ.

ಲಾಡ್ಜ್, ರೆಸಾರ್ಟ್ ಇತ್ಯಾದಿಗಳು ಶೇ.50 ರ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಪ್ರೇಕ್ಷಕರ ರಹಿತವಾಗಿ ಎಲ್ಲಾ ಹೊರಾಂಗಣ ಕ್ರೀಡಾ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ.

ಆರೋಗ್ಯ ಕ್ಷೇತ್ರದ ಕೌಶಲ್ಯ ತರಬೇತಿ ಹಾಗೂ ಘನತ್ಯಾಜ್ಯ ನಿರ್ವಹಣೆ ಸಂಬAಧಿತ ತರಬೇತಿಗೆ ಅವಕಾಶ. ಗರಿಷ್ಠ ಇಬ್ಬರು ಪ್ರಯಾಣಿಕರ ಸಾಮರ್ಥ್ಯದೊಂದಿಗೆ ಆಟೋ ರಿಕ್ಷಾ ಮತ್ತು ಟ್ಯಾಕ್ಸಿಗಳು ಸಂಚರಿಸಲು ಅನುಮತಿಸಿದೆ. ವಾಕಿಂಗ್ ಮತ್ತು ಜಾಗಿಂಗ್ ಉದ್ದೇಶಕ್ಕಾಗಿ ಮಾತ್ರ ಉದ್ಯಾನವನಗಳನ್ನು ಬೆಳಿಗ್ಗೆ 5 ರಿಂದ ಸಂಜೆ 6 ರವರೆಗೆ ಮಾತ್ರ ತೆರೆಯಲು ಅನುಮತಿಸಿದೆ. ಆದರೆ, ಯಾವುದೇ ಗುಂಪು ಚಟುವಟಿಕೆಗಳಿಗೆ ಅವಕಾಶವಿಲ್ಲ.

ಎಲ್ಲ ಸರ್ಕಾರಿ ಮತ್ತು ಖಾಸಗಿ ಕಚೇರಿಗಳಇಗೆ ಸಿಬ್ಬಂದಿಯ ಶೇ.50 ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಹಾಗೂ ಘನ ತ್ಯಾಜ್ಯ ವಿಲೇವಾರಿ ಸೇರಿದಂತೆ ಆರೋಗ್ಯ ವಲಯಕ್ಕೆ ಸಂಬAಧಿಸಿದ ಕೌಶಲ್ಯ ತರಬೇತಿಗಳಿಗೆ ಅನುಮತಿಸಿದೆ. ಕೋವಿಡ್-19 ಮಾರ್ಗಸೂಚಿಯನ್ವಯ ಹೊರಾಂಗಣ ಚಿತ್ರಿಕರಣಕ್ಕೆ ಹಾಗೂ ಸೀರಿಯಲ್‌ಗಳಿಗೆ ಅವಕಾಶ ಕಲ್ಪಿಸಲಾಗಿದೆ.

ಶನಿವಾರ ಮತ್ತು ಭಾನುವಾರ ವಾರಂತ್ಯದ ಕರ್ಫ್ಯೂ ಇರುವುದರಿಂದ ಸೋಮವಾರದಿಂದ ವಿನಾಯಿತಿಗಳು ದೊರೆಯಲಿವೆ. ವಾರಂತ್ಯದ ಕಫ್ಯೂ ಅವಧಿಯಲ್ಲಿ ಆಹಾರ, ದಿನಸಿ, ಹಣ್ಣು, ತರಕಾರಿ, ಮಾಂಸ, ಮೀನು, ಹಾಲು, ಕಾಲಿನ ಬೂತ್‌ಗಳು ಮತ್ತು ಜಾನುವಾರು ಮೇವಿನ ಅಂಗಡಿಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ಕಾರ್ಯ ನಿರ್ವಹಿಸಬಹುದು. ಮದ್ಯದ ಅಂಗಡಿಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ಪಾರ್ಸೆಲ್ ನೀಡಬಹುದು.

ತುರ್ತು ಹಾಗೂ ಅಗತ್ಯ ಸೇವೆಗಳಿಗೆ ಹಿಂದಿನಂತೆಯೇ ಅನುಮತಿ ಇದೆ. ಬಸ್, ರೈಲು ಹಾಗೂ ವಿಮಾನಯಾನಗಳಿಗೆ ಅನುಮತಿ ಇದೆ. ನಿಗದಿಯಾದ ಮದುವೆಗಳು ಹಾಗೂ ಅಂತ್ಯಕ್ರಿಯೆಗಳಿಗೆ ನಿರ್ಬಂಧಿತ ಅನುಮತಿ ಇದೆ.

ಈ ಮೇಲೆ ತಿಳಿಸಿದ ಮಾರ್ಗಸೂಚಿ ಅಥವಾ ನಿಬಂಧನೆಗಳನ್ನು ಉಲ್ಲಂಘಿಸಿದ ಪಕ್ಷದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

Published

on

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.

ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ

Published

on

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್‌ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.

ಕೆಎಸ್‌ಆರ್‌ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ

Published

on

ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ ದೊರಕುವಂತಾಗಲು ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಸಂತ್ರಸ್ಥರಿಗೆ ನ್ಯಾಯ ಒದಗಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.

ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending