ದಿನದ ಸುದ್ದಿ
ದಾವಣಗೆರೆ | ಸೋಮವಾರದಿಂದ ಲಾಕ್‌ಡೌನ್ ನಲ್ಲಿ ಮತ್ತಷ್ಟು ರಿಯಾಯಿತಿ : ಡಿಸಿ ಮಹಾಂತೇಶ್ ಬೀಳಗಿ ಆದೇಶ
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ಪ್ರಮಾಣ ಶೇ.5 ರೊಳಗೆ ಬಂದಿರುವುದರಿಂದ ರಾಜ್ಯ ಸರ್ಕಾರ ದಾವಣಗೆರೆ ಜಿಲ್ಲೆಯನ್ನು ‘ಎ’ ವರ್ಗಕ್ಕೆ ಸೇರಿಸಿದೆ. ಈ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲಾಧಿಕಾರಿ ಲಾಕ್‌ಡೌನ್ ಅಲ್ಲಿ ಮತ್ತಷ್ಟು ರಿಯಾಯಿತಿಯನ್ನು ಸೇರ್ಪಡೆಮಾಡಿ ಆದೇಶ ಹೊರಡಿಸಿದ್ದಾರೆ. ಅದರಂತೆ ಎಲ್ಲ ಅಂಗಡಿಗಳು ಹಾಗೂ ಹೋಟೆಲ್‌ಗಳು ಜು.5 ರವರೆಗೆ ಅನ್ವಯವಾಗುವಂತೆ ಬೆಳಿಗ್ಗೆ 6 ರಿಂದ ಸಂಜೆ 5 ಗಂಟೆಯವರೆಗೆ ವಹಿವಾಟು ನಡೆಸಬಹುದು. ಆದರೆ, ಹವಾನಿಯಂತ್ರಿತ ಶಾಪಿಂಗ್ ಕಾಂಪ್ಲೆಕ್ಸ್, ಮಾಲ್‌ಗಳಿಗೆ ಅನುಮತಿ ನಿಂಡಿಲ್ಲ.
ಜುಲೈ 5 ರ ಬೆಳಿಗ್ಗೆ 5 ಗಂಟೆಯವರೆಗೆ ಲಾಕ್‌ಡೌನ್ ಮುಂದುವರೆಯಲಿದ್ದು ಕೋವಿಡ್-19 ರ ಮಾರ್ಗಸೂಚಿಗಳ ಪಾಲನೆಯ ಷರತ್ತಿಗೆ ಒಳಪಟ್ಟು ಬಸ್‌ಗಳ ಆಸನದ ಗರಿಷ್ಠ ಶೇ.50 ರ ಸಾಮರ್ಥ್ಯದೊಂದಿಗೆ ಬಸ್ ಸಂಚಾರಕ್ಕೆ ಅನುಮತಿಸಿದೆ. ಪ್ರಯಾಣಿಕರು ಬಸ್‌ಗಳಲ್ಲಿ ನಿಂತು ಪ್ರಯಾಣಿಸಲು ಅವಕಾಶವಿರುವುದಿಲ್ಲ.
ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಆದರೆ, ಸರಕು ಸಾಗಾಣಿಕೆ ವಾಹನಗಳ ಸಂಚಾರಕ್ಕೆ ಅವಕಾಶವಿರುವ ಹಿನ್ನೆಲೆಯಲ್ಲಿ ವಾಹನಗಳು ಸರಕುಗಳನ್ನು ರಶೀದಿಯಲ್ಲಿ ನಮೂಧಿತ ವಿಳಾಸದ ಅಂಗಡಿ ಮತ್ತು ಗೋದಾಮುಗಳಲ್ಲಿ ಇಳಿಸಲು ಮತ್ತು ತೆಗೆದುಕೊಂಡು ಹೋಗಲು ಮಾತ್ರ ದಿನಪೂರ್ತಿ ಅವಕಾಶ ನೀಡಲಾಗಿದೆ.
ಎಲ್ಲಾ ವಿಧದ ಉತ್ಪಾದಿತ ಘಟಕಗಳು ,ಸಂಸ್ಥೆಗಳು, ಕೈಗಾರಿಕೆಗಳು, ಕೋವಿಡ್ ನಿಯಮಾವಳಿಯ ಮೇಲೆ ಶೇ.50 ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಬಹುದು. ಹಾಗೂ ಗಾರ್ಮೆಂಟ್ಸ್ ಗಳಲ್ಲಿ ಶೇ.30 ರ ಸಿಬ್ಬಂದಿಯೊAದಿಗೆ ಕೋವಿಡ್ ಕ್ರಮವನ್ನು ಅನುಸರಿಸಿ ಕಾರ್ಯನಿರ್ವಹಿಸಬಹುದಾಗಿದೆ.
ಸಾರ್ವಜನಿಕರು ಹೊರಗಡೆ ಓಡಾಡುವುದನ್ನು ನಿಯಂತ್ರಿಸುವುದಕ್ಕಾಗಿ ಕೋವಿಡ್-19 ನಿರ್ವಹಣೆಯ ಕಾರ್ಯಾಚರಣೆಗಳನ್ನು ರಾಷ್ಟ್ರೀಯ ನಿರ್ದೇಶನಗಳಿಗೆ ಒಳಪಟ್ಟು ಎಲ್ಲಾ ಅವಶ್ಯಕ ವಸ್ತುಗಳನ್ನು ಮನೆ ಮನೆಗೆ 24*7 ಅವಧಿಯಲ್ಲಿ ಪೂರೈಸಲು ಅನುಮತಿಸಲಾಗಿದೆ.
ಎಲ್ಲಾ ಹೋಟೆಲ್, ರೆಸ್ಟೋರೆಂಟ್, ಬಾರ್ ಹಾಗೂ ಕ್ಲಬ್‌ಗಳು ಬೆಳಿಗ್ಗೆ 6 ರಿಂದ ಸಂಜೆ 5 ರವರೆಗೆ ಶೇ.50 ರ ಸಾಮರ್ಥ್ಯದಲ್ಲಿ ಗ್ರಾಹಕರಿಗೆ ಸ್ಥಳದಲ್ಲೇ ಸೇವೆ ಸಲ್ಲಿಸಲು ಅನುಮತಿ ನೀಡಲಾಗಿದೆ. ಆದರೆ, ಊಟದ ಜೊತೆಗೆ ಮದ್ಯವನ್ನು ಪೂರೈಸುವಂತಿಲ್ಲ. ಹವಾನಿಯಂತ್ರಿತ ಹೋಟೆಲ್ ಇತ್ಯಾದಿಗಳು ಕಾರ್ಯನಿರ್ವಹಿಸುವಂತಿಲ್ಲ.
ಲಾಡ್ಜ್, ರೆಸಾರ್ಟ್ ಇತ್ಯಾದಿಗಳು ಶೇ.50 ರ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಪ್ರೇಕ್ಷಕರ ರಹಿತವಾಗಿ ಎಲ್ಲಾ ಹೊರಾಂಗಣ ಕ್ರೀಡಾ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ.
ಆರೋಗ್ಯ ಕ್ಷೇತ್ರದ ಕೌಶಲ್ಯ ತರಬೇತಿ ಹಾಗೂ ಘನತ್ಯಾಜ್ಯ ನಿರ್ವಹಣೆ ಸಂಬAಧಿತ ತರಬೇತಿಗೆ ಅವಕಾಶ. ಗರಿಷ್ಠ ಇಬ್ಬರು ಪ್ರಯಾಣಿಕರ ಸಾಮರ್ಥ್ಯದೊಂದಿಗೆ ಆಟೋ ರಿಕ್ಷಾ ಮತ್ತು ಟ್ಯಾಕ್ಸಿಗಳು ಸಂಚರಿಸಲು ಅನುಮತಿಸಿದೆ. ವಾಕಿಂಗ್ ಮತ್ತು ಜಾಗಿಂಗ್ ಉದ್ದೇಶಕ್ಕಾಗಿ ಮಾತ್ರ ಉದ್ಯಾನವನಗಳನ್ನು ಬೆಳಿಗ್ಗೆ 5 ರಿಂದ ಸಂಜೆ 6 ರವರೆಗೆ ಮಾತ್ರ ತೆರೆಯಲು ಅನುಮತಿಸಿದೆ. ಆದರೆ, ಯಾವುದೇ ಗುಂಪು ಚಟುವಟಿಕೆಗಳಿಗೆ ಅವಕಾಶವಿಲ್ಲ.
ಎಲ್ಲ ಸರ್ಕಾರಿ ಮತ್ತು ಖಾಸಗಿ ಕಚೇರಿಗಳಇಗೆ ಸಿಬ್ಬಂದಿಯ ಶೇ.50 ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಹಾಗೂ ಘನ ತ್ಯಾಜ್ಯ ವಿಲೇವಾರಿ ಸೇರಿದಂತೆ ಆರೋಗ್ಯ ವಲಯಕ್ಕೆ ಸಂಬAಧಿಸಿದ ಕೌಶಲ್ಯ ತರಬೇತಿಗಳಿಗೆ ಅನುಮತಿಸಿದೆ. ಕೋವಿಡ್-19 ಮಾರ್ಗಸೂಚಿಯನ್ವಯ ಹೊರಾಂಗಣ ಚಿತ್ರಿಕರಣಕ್ಕೆ ಹಾಗೂ ಸೀರಿಯಲ್‌ಗಳಿಗೆ ಅವಕಾಶ ಕಲ್ಪಿಸಲಾಗಿದೆ.
ಶನಿವಾರ ಮತ್ತು ಭಾನುವಾರ ವಾರಂತ್ಯದ ಕರ್ಫ್ಯೂ ಇರುವುದರಿಂದ ಸೋಮವಾರದಿಂದ ವಿನಾಯಿತಿಗಳು ದೊರೆಯಲಿವೆ. ವಾರಂತ್ಯದ ಕಫ್ಯೂ ಅವಧಿಯಲ್ಲಿ ಆಹಾರ, ದಿನಸಿ, ಹಣ್ಣು, ತರಕಾರಿ, ಮಾಂಸ, ಮೀನು, ಹಾಲು, ಕಾಲಿನ ಬೂತ್‌ಗಳು ಮತ್ತು ಜಾನುವಾರು ಮೇವಿನ ಅಂಗಡಿಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ಕಾರ್ಯ ನಿರ್ವಹಿಸಬಹುದು. ಮದ್ಯದ ಅಂಗಡಿಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ಪಾರ್ಸೆಲ್ ನೀಡಬಹುದು.
ತುರ್ತು ಹಾಗೂ ಅಗತ್ಯ ಸೇವೆಗಳಿಗೆ ಹಿಂದಿನಂತೆಯೇ ಅನುಮತಿ ಇದೆ. ಬಸ್, ರೈಲು ಹಾಗೂ ವಿಮಾನಯಾನಗಳಿಗೆ ಅನುಮತಿ ಇದೆ. ನಿಗದಿಯಾದ ಮದುವೆಗಳು ಹಾಗೂ ಅಂತ್ಯಕ್ರಿಯೆಗಳಿಗೆ ನಿರ್ಬಂಧಿತ ಅನುಮತಿ ಇದೆ.
ಈ ಮೇಲೆ ತಿಳಿಸಿದ ಮಾರ್ಗಸೂಚಿ ಅಥವಾ ನಿಬಂಧನೆಗಳನ್ನು ಉಲ್ಲಂಘಿಸಿದ ಪಕ್ಷದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆ ಅಣುಕು ಅಭ್ಯಾಸ
ಸುದ್ದಿದಿನ, ಹರಿಹರ :ಇದೇ 14 ರಂದು ಗುರುವಾರ (ನಾಳೆ) ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆಯ ಅಣುಕು ಅಭ್ಯಾಸವನ್ನು ಬೆಳಗ್ಗೆ 8:30 ಕ್ಕೆ ನಡೆಸಲಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳ ಸಮನ್ವಯದಲ್ಲಿ ಅಣಕು ಅಭ್ಯಾಸವು ನಡೆಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು
ಸುದ್ದಿದಿನಡೆಸ್ಕ್:ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ (47) ಅವರ ಅಕಾಲಿಕ ನಿಧನವು ಇಡೀ ಸ್ಯಾಂಡಲ್‌ವುಡ್ ಅನ್ನು ದಿಗ್ಭ್ರಮೆಗೊಳಿಸಿದೆ. ಕೇವಲ 47 ವರ್ಷ ವಯಸ್ಸಿನ ಈ ಪ್ರತಿಭಾನ್ವಿತ ಕಲಾವಿದ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಆದರೆ ಅವರ ಈ ಸಾವಿನ ಹಿಂದೆ ಒಂದು ಬೇಸರದ ಸಂಗತಿಯೂ ಅಡಗಿದೆ, ಅದೇನೆಂದರೆ ಅವರ ಆರೋಗ್ಯದ ಕುರಿತು ತೋರಿದ ಒಂದು ನಿರ್ಲಕ್ಷ್ಯ!
ನಟ ನಿರ್ಮಾಪಕ ದಿಲೀಪ್ ರಾಜ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಇಡೀ ಸ್ಯಾಂಡಲ್‌ವುಡ್ ದಿಗ್ಭ್ರಮೆಗೊಂಡಿದೆ. ಕೆಲವು ದಿನಗಳ ಹಿಂದೆ ಗೋವಾ ಪ್ರವಾಸದಲ್ಲಿದ್ದಾಗಲೇ ಅವರಿಗೆ ಆಗಾಗ ಎದೆನೋವು ಕಾಣಿಸಿಕೊಂಡಿತ್ತು, ಆದರೆ ಪ್ರವಾಸದ ಖುಷಿಯಲ್ಲಿದ್ದ ಅವರು ಅದನ್ನ ಗಂಭೀರವಾಗಿ ಪರಿಗಣಿಸಿರಲಿಲ್ಲ.. ಬೆಂಗಳೂರಿಗೆ ಮರಳಿದ ನಂತರ ಇಂದು ವೈದ್ಯಕೀಯ ತಪಾಸಣೆಗೆ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು;
ತಪಾಸಣೆಗೆ ಹೋಗುವ ಮುನ್ನವೇ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡು ಕುಮಾರಸ್ವಾಮಿ ಲೇಔಟ್‌ನ ಅಪೋಲೋ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.ನೋವು ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಗೆ ದಾಖಲಾಗಿದ್ದರೆ ಇಂದು ಪರಿಸ್ಥಿತಿ ಬೇರೆಯೇ ಇರುತ್ತಿತ್ತು ಎಂದು ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ.
ನಟ ದಿಲೀಪ್ ರಾಜ್ ಅವರು ಕೆಲವೇ ದಿನಗಳ ಹಿಂದೆ ಗೋವಾಗೆ ಪ್ರವಾಸ ತೆರಳಿದ್ದರು.
ಅಲ್ಲಿ ಗೆಳೆಯರೊಂದಿಗೆ ಕಾಲ ಕಳೆಯುವಾಗಲೇ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು ಎನ್ನಲಾಗುತ್ತಿದೆ. ಅಂದೇ ಹೃದಯವು ಅಪಾಯದ ಮುನ್ಸೂಚನೆ ನೀಡಿದ್ದರೂ, ದಿಲೀಪ್ ಅವರು ಅದನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ತೋರಿದ್ದರು. ಗೋವಾ ಟ್ರಿಪ್‌ನಲ್ಲಿದ್ದಾಗಲೇ ಆಗಾಗ ನೋವು ಕಾಣಿಸಿಕೊಂಡರೂ, ಅವರು ಅದನ್ನು ಕೇರ್ ಮಾಡಿರಲಿಲ್ಲ.
ಬೆಂಗಳೂರಿಗೆ ಮರಳಿದ ನಂತರ ಅವರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ನಿರ್ಧರಿಸಿದ್ದರು. ವಿಪರ್ಯಾಸವೆಂದರೆ, ಇಂದು ಅವರು ಆಸ್ಪತ್ರೆಗೆ ತೆರಳಿ ಹೃದಯ ತಪಾಸಣೆ ಮಾಡಿಸಿಕೊಳ್ಳಬೇಕಿತ್ತು ಮತ್ತು ಅದಕ್ಕಾಗಿ ವೈದ್ಯರ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು. ನಿನ್ನೆ ರಾತ್ರಿ ಕೂಡ ಧಾರಾವಾಹಿ ಕಲಾವಿದರ ಜೊತೆ ಫೋನ್‌ನಲ್ಲಿ ಆತ್ಮೀಯವಾಗಿ ಮಾತನಾಡಿದ್ದ ನಟನಿಗೆ, ಮಧ್ಯರಾತ್ರಿ ತೀವ್ರವಾದ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ತೆರಳುವ ಮುನ್ನವೇ ಅವರು ಏಕಾಏಕಿ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.
ನಡೆದಿದ್ದೇನು?
ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.
ಡೆತ್ ನೋಟ್‌ನಲ್ಲಿತ್ತು ಕೊನೆಯ ಆಸೆ
ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.
ತಮಿಳುನಾಡಿನಲ್ಲಿ ಅಂತ್ಯಕ್ರಿಯೆ
ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.
ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ3 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ6 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ3 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ಅಂಕಣ2 days agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ಕ್ರೀಡೆ6 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
-
ದಿನದ ಸುದ್ದಿ2 days agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
-
ದಿನದ ಸುದ್ದಿ3 days agoಮಾನಸಿಕ ಆರೋಗ್ಯ ಅರಿವು ಅಗತ್ಯ : ಡಾ. ಪ್ರಭು ಎಂ. ಬಿಸ್ಲೇರಿ

