ದಿನದ ಸುದ್ದಿ

ರಾಜ್ಯದಲ್ಲಿ ಮಂಕಿಪಾಕ್ಸ್ ಸೋಂಕು ದೃಢಪಟ್ಟಿಲ್ಲ : ಸಚಿವ ಡಾ. ಕೆ. ಸುಧಾಕರ್

Published

on

ಸುದ್ದಿದಿನ ಡೆಸ್ಕ್ : ಇಥಿಯೋಪಿಯಾದಿಂದ (Ethiopia) ಕಳೆದ ಮೂರು ದಿನಗಳ ಹಿಂದೆ ರಾಜ್ಯಕ್ಕೆ ಬಂದಿದ್ದ ವ್ಯಕ್ತಿಗೆ ಮಂಕಿಪಾಕ್ಸ್ ಸೋಂಕು ( Monkeypox Virus) ತಗುಲಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ( Dr.K.Sudhakar) ಸ್ಪಷ್ಟಪಡಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿಂದು (Chikkaballapur)
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದೇಶದಿಂದ ಬಂದ ವ್ಯಕ್ತಿಗೆ ಮಂಕಿಪಾಕ್ಸ್ ಸೋಂಕು ತಗುಲಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ನೆಗಟಿವ್ ವರದಿ ಬಂದಿದೆ ಎಂದು ಹೇಳಿದರು.

ಇದನ್ನೂ ಓದಿ | ಅಧಿಕಾರದ ಉನ್ನತ ಸ್ಥಾನದಲ್ಲಿರುವವರಿಂದ ಈ ತೆರನಾದ ಮತಧಾರ್ಮಿಕ ಪಕ್ಷಪಾತದ ನಡವಳಿಕೆ ಸರಿಯೇ..?

ಆದರೂ ರಾಜ್ಯದ ವಿಮಾನ, ರೈಲ್ವೆ ನಿಲ್ದಾಣ ಬಂದರುಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಆರೋಗ್ಯ ಇಲಾಖೆಯ ತಂಡಗಳು ದಿನದ 24 ಗಂಟೆ ಸರದಿಯಲ್ಲಿ ಕೆಲಸ ಮಾಡುತ್ತಿವೆ. ರಾಜ್ಯದಲ್ಲಿ ಈವರೆಗೆ ಯಾವುದೇ ಮಂಕಿಪಾಕ್ಸ್ ಸೋಂಕು ದೃಢಪಟ್ಟಿಲ್ಲ ಎಂದು ಸಚಿವ ಸುಧಾಕರ್ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version