Connect with us

ದಿನದ ಸುದ್ದಿ

ಕೆರೆಬಿಳಚಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ; 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ಚನ್ನಗಿರಿ:ತಾಲೂಕಿನ ಕೆರೆಬಿಳಚಿಯಲ್ಲಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ ,ಕ್ರಿಶ್ಚಿಯನ್, ಜೈನ್ ,ಬೌದ್ಧ ಸಿಖ್ ಪಾರ್ಸಿ ಧರ್ಮದವರಿಗೆ 75% ಸ್ಥಾನ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ 25% ಸ್ಥಾನಗಳು ಮೀಸಲಾಗಿವೆ.ವಿದ್ಯಾರ್ಥಿಗಳನ್ನು ಪ್ರವೇಶ ಪರೀಕ್ಷೆಯ ಆಧಾರದ ಮೇಲೆ ಮತ್ತು ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://sevasindhuservices.karnataka.gov.in/

ಪ್ರವೇಶ ಪಡೆಯಲು ಅರ್ಹತೆಗಳು

  • 05 ನೇ ತರಗತಿಯಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
  • ಪೋಷಕರ ಆದಾಯದ ಮಿತಿ ಎಸ್.ಸಿ/ಎಸ್.ಟಿ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ
  • 1 ಲಕ್ಷ ರೂ.ಗಳು ಮತ್ತು ಅಲ್ಪಸಂಖ್ಯಾತರಿಗೆ 2.5ಲಕ್ಷ ರೂ.ಗಳು ಮತ್ತು ಹಿಂದುಳಿದ ವರ್ಗದವರಿಗೆ 44500/- ರೂ.ಗಳಿಗೆ ಮೀರಿರಬಾರದು.

ವಸತಿ ಶಾಲೆಯಲ್ಲಿ ದೊರೆಯುವ ಸೌಲಭ್ಯಗಳು

  • ಆಯ್ಕೆಯಾದ ವಿದ್ಯಾರ್ಥಿಗಳಿಗೆ 6ನೇ ತರಗತಿಯಿಂದ 12 ತರಗತಿಯವರೆಗೆ ಉಚಿತ ಶಿಕ್ಷಣ.
  • ಉಚಿತ ಪಠ್ಯ ಪುಸ್ತಕ, ಲೇಖನ ಸಾಮಗ್ರಿಗಳು, ಸಮವಸ್ತ್ರ, ಶೂ ಮತ್ತು ಸಾಕ್ಸ್, ಹಾಸಿಗೆ ಹೊದಿಕೆ ಜೊತೆಗೆ ಉತ್ತಮ ಮೂಲ ಸೌಲಭ್ಯ ಒದಗಿಸಲಾಗುವುದು.
  • ಸುಸಜ್ಜಿತ ಕೊಠಡಿ ಹಾಗೂ ವಸತಿ ನಿಲಯಗಳು, ವಿದ್ಯುತ್ ವ್ಯವಸ್ಥೆ, 24×7 ಬಿಸಿ ನೀರಿನ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇದೆ.
  • ನುರಿತ ಶಿಕ್ಷಕರು ಮತ್ತು ಉಪನ್ಯಾಸಕರಿಂದ ಭೋದನೆ, ಪ್ರತಿ ವಿಷಯಕ್ಕೆ ಸುಸಜ್ಜಿತ ಪ್ರಯೋಗಾಲಯ ಸೌಲಭ್ಯ ಹಾಗೂ ಡಿಜಿಟಲ್ ಗ್ರಂಥಾಲಯ ವ್ಯವಸ್ಥೆ ಇದೆ.
  • ಉಚಿತ ವಸತಿ ಮತ್ತು ಭೋಜನ ವ್ಯವಸ್ಥೆ ಇದೆ. ಜೊತೆಗೆ 24×7 CCTV ನಿರೀಕ್ಷಣೆಯಲ್ಲಿ ಇರುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.

ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.

ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ

Published

on

ಸುದ್ದಿದಿನಡೆಸ್ಕ್:ಜಪಾನ್‌ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.

ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!

ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಡಾಲಿಯ ಕನಸು ಒಂದೇ ಹೀರೋ ಆಗೋದು

Published

on

ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!

ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!

ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.

ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!

ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending