ದಿನದ ಸುದ್ದಿ
ಪರಿಶಿಷ್ಠ ಸಮುದಾಯದ ಕಲ್ಯಾಣ ಕಾರ್ಯಕ್ರಮಗಳಿಗೆ ಹೆಚ್ಚಿನ ಆರ್ಥಿಕ ನೆರವು : ಸಿಎಂ ಬೊಮ್ಮಾಯಿ
ಸುದ್ದಿದಿನ, ಬೆಂಗಳೂರು: ಪರಿಶಿಷ್ಠ ಸಮುದಾಯದ ಜನ ಕಲ್ಯಾಣ ಕಾರ್ಯಕ್ರಮಗಳಿಗೆ ಹೆಚ್ಚಿನ ಆರ್ಥಿಕ ನೆರವು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಸಮಾಜ ಕಲ್ಯಾಣ ಇಲಾಖೆ ವಿಧಾನಸೌಧ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಲ್ಯಾಣ ಮಿತ್ರ ಸಹಾಯವಾಣಿ ಹಾಗೂ ಅಭಿವೃದ್ಧಿ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು. ಪರಿಶಿಷ್ಟ ಸಮುದಾಯ ಹಾಗೂ ಇತರೆ ಹಿಂದುಳಿದ ವರ್ಗಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿ ಕೆಲಸ ಮಾಡುತ್ತಿದೆ ಎಂದರು.
ಮೈಸೂರು, ಮಂಗಳೂರು, ಕಲಬುರಗಿ, ಬೆಂಗಳೂರು, ಧಾರವಾಡ, ಶಿವಮೊಗ್ಗ ಮುಂತಾದ ನಗರಗಳಲ್ಲಿ ಪರಿಶಿಷ್ಠ ಸಮುದಾಯ ಮತ್ತು ಹಿಂದುಳಿದ ಸಮುದಾಯದ ವಿದ್ಯಾರ್ಥಿಗಳಿಗೆ ಕ್ಲಸ್ಟರ್ ಹಾಸ್ಟಲ್‌ಗಳನ್ನು ನಿರ್ಮಾಣ ಮಾಡಲು ಸರ್ಕಾರ ಬಜೆಟ್‌ನಲ್ಲಿ ಹಣ ನಿಗದಿ ಪಡಿಸಿದೆ.
ಈ ನಗರಗಳಲ್ಲಿ ತಲಾ ಒಂದು ಸಾವಿರ ವಿದ್ಯಾರ್ಥಿಗಳಿಗೆ ಹಾಸ್ಟಲ್ ಸೌಲಭ್ಯ ಒದಗಿಸಲಾಗುವುದು ಎಂದರು. ಪರಿಶಿಷ್ಠ ಸಮುದಾಯಕ್ಕೆ ಭೂಮಿ ಕೊಳ್ಳಲು ಹಣಕಾಸಿನ ನೆರವು ಹೆಚ್ಚಿಸಲಾಗಿದೆ. 75ಯುನಿಟ್ ವರೆಗೆ ಉಚಿತ ವಿದ್ಯುತ್ ಒದಗಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243