Connect with us

ದಿನದ ಸುದ್ದಿ

ಭಾರತದ ಇತಿಹಾಸ, ಸಂಸ್ಕೃತಿಯ ಬಗ್ಗೆ ಇನ್ನಷ್ಟು ಸಂಶೋಧನೆಯಾಗಲಿ‌ : ಪ್ರೊ. ಎಂ ಬಿ ಪುರಾಣಿಕ್

Published

on

ಸುದ್ದಿದಿನ,ಮಂಗಳೂರು: ಒಂದು ದೇಶದ ಇತಿಹಾಸವನ್ನು ತಿಳಿಯಲಾಗಲಿಲ್ಲ ಎಂದರೆ ಇತಿಹಾಸವನ್ನು ಪ್ರಾಮಾಣಿಕವಾಗಿ ದಾಖಲಿಸಲಾಗಿಲ್ಲ ಎಂದರ್ಥ. ಭಾರತದ ನಾಗರಿಕತೆ, ಸಂಸ್ಕೃತಿ, ಚರಿತ್ರೆ ಶ್ರೀಮಂತವಾಗಿದೆ. ಈ ಬಗ್ಗೆ ಇನ್ನಷ್ಟು ಸಂಶೋಧನೆಯ ಅಗತ್ಯವಿದೆ, ಶಾರದಾ ವಿದ್ಯಾಲಯ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಪ್ರೊ. ಎಂ ಬಿ ಪುರಾಣಿಕ್ ಅಭಿಪ್ರಾಯಪಟ್ಟಿದ್ದಾರೆ.

‘ಆಜಾದಿ ಕಾ ಅಮೃತ ಮಹೋತ್ಸವ’ದ ಅಂಗವಾಗಿ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರಗಳ ಸಂಯುಕ್ತಾಶ್ರಯದಲ್ಲಿ ರವೀಂದ್ರ ಕಲಾಭವನದಲ್ಲಿ ಆಯೋಜಿಸಲಾಗಿದ್ದ “ಕರಾವಳಿ ಕರ್ನಾಟಕದಲ್ಲಿ ಸ್ವಾತಂತ್ರ್ಯ ಹೋರಾಟ” ಎಂಬ ವಿಚಾರ ಸಂಕಿರಣದ ಸಮಾರೋಪ ಭಾಷಣ ಮಾಡಿದ ಅವರು, ಸಮಾಜದಿಂದ ನಾವು ಏನು ಪಡೆದಿದ್ದೇವೆ ಎಂಬುದಕ್ಕಿಂದ ಏನು ಕೊಟ್ಟಿದ್ದೇವೆ ಎಂಬುದು ಮುಖ್ಯ, ಎಂದರು.

ಮುಖ್ಯ ಅತಿಥಿಯಾಗಿದ್ದ, ಬ್ಯಾಂಕ್ ಆಫ್ ಬರೋಡಾದ ಪ್ರಾದೇಶಿಕ ಕಛೇರಿಯ ಉಪ ಪ್ರಧಾನ ವ್ಯವಸ್ಥಾಪಕ ವಿನಯ್ ಗುಪ್ತಾ, ಈ ಮಹೋತ್ಸವವನ್ನು ಶಾಲಾ ಕಾಲೇಜುಗಳು ಮಾತ್ರವಲ್ಲದೆ ಬ್ಯಾಂಕುಗಳು ಹಾಗೂ ಇತರ ಸಂಸ್ಥೆಗಳಲ್ಲಿಯೂ ಆಚರಿಸಲಾಗುತ್ತಿದೆ. ಏಕೆಂದರೆ ಸ್ವಾತಂತ್ರ್ಯ ವೀರರ ಬಗ್ಗೆ ತಿಳಿದುಕೊಳ್ಳುವುದು ಎಲ್ಲರ ಕರ್ತವ್ಯವಾಗಿದೆ, ಎಂದರು.

ಕಾರ್ಯಕ್ರಮದ ಸಂಚಾಲಕಿ, ಪ್ರಾಂಶುಪಾಲೆ ಡಾ. ಸುಭಾಷಿಣಿ ಶ್ರೀವತ್ಸ ಅತಿಥಿಗಳನ್ನು ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕ ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿದರು. ಸಂಘಟನಾ ಸಮಿತಿ ಕಾರ್ಯದರ್ಶಿ ವೆಂಕಟೇಶ್ ನಾಯಕ್ ಧನ್ಯವಾದ ಸಮರ್ಪಿಸಿದರು. ವಿಚಾರ ಸಂಕಿರಣದ ಸಲಹಾ ಸಮಿತಿ, ಸಂಘಟನಾ ಸಮಿತಿಗಳ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

*ಗುಂಪು ಚರ್ಚೆ, ಪ್ರಬಂಧ ಮಂಡನೆ*
ವಿಚಾರ ಸಂಕಿರಣದ ಎರಡನೇ ದಿನ ಸಂಶೋಧಕರು ಪ್ರಬಂಧಗಳನ್ನು ಮಂಡಿಸಿದರು. ‘ಪಠ್ಯಕ್ರಮದಲ್ಲಿ ಸ್ವಾತಂತ್ರ್ಯ ಚಳವಳಿಯ ಪ್ರತಿಬಿಂಬಗಳು’ ಎಂಬ ವಿಷಯದ ಮೇಲೆ ನಡೆದ ಗುಂಪು ಚರ್ಚೆಯನ್ನು ಬೆಸೆಂಟ್ ಮಹಿಳಾ ಕಾಲೇಜಿನ ಕನ್ನಡ ವಿಭಾಗದ ನಿವೃತ್ತ ಪ್ರಾಧ್ಯಾಪಿಕೆ ಡಾ. ಮೀನಾಕ್ಷಿ ರಾಮಚಂದ್ರ ಹಾಗೂ ಮೂಡಬಿದಿರೆಯ ಜೈನ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಡಾ.ಪ್ರಭಾತ್ ಬಲ್ನಾಡ್ ಮುನ್ನಡೆಸಿದರು. ಭಾರತ್ ಫೌಂಡೇಶನ್ನ ಟ್ರಸ್ಟಿ ಹಾಗೂ ಲಿಟ್ ಫೆಸ್ಟ್ನ ಸಂಯೋಜಕ ಸುನೀಲ್ ಕುಲಕರ್ಣಿ ಕಾರ್ಯಕ್ರಮ ನಿರ್ವಹಿಸಿದರು.

*ವರ್ಣರಂಜಿತ ಉದ್ಘಾಟನೆ (For only those who could not cover Inaugural function)*
ರಾಣಿ ಅಬ್ಬಕ್ಕನ ಸಾಹಸ ಸಾರುವ ನೃತ್ಯ ರೂಪಕದಲ್ಲಿ ಆರಂಭಗೊಂಡ ಉದ್ಘಾಟನಾ ಕಾರ್ಯಕ್ರಮ ಗಮನ ಸೆಳೆಯಿತು. ಉದ್ಘಾಟಿನೆ ನೆರವೇರಿಸಿ ಮಾತನಾಡಿದ ಶಾಸಕ ಡಿ ವೇದವ್ಯಾಸ ಕಾಮತ್, ಸ್ವಾತಂತ್ರ್ಯ ಹೋರಾಟದಲ್ಲಿ ಕರಾವಳಿಗರು ನೀಡಿರುವ ಕೊಡುಗೆ ಎಲ್ಲರಿಗೂ ತಿಳಿಯಬೇಕು, ಎಂದರು.

ಪ್ರಧಾನ ಭಾಷಣಕಾರ ಮೈಸೂರಿನ ಮಹಾರಾಜ ಸರ್ಕಾರಿ ಪಿಯು ಕಾಲೇಜಿನ ಎಲೆಕ್ಟ್ರಾನಿಕ್ಸ್ ವಿಭಾಗದ ಮುಖ್ಯಸ್ಥ ಶಿವಾನಂದ ಸಿಂಧನಕೇರ, ಭಾರತ ಸಾಕಷ್ಟು ಆಕ್ರಮಣಗಳನ್ನು ಎದುರಿಸಿಯೂ ಯಾರ ಮೇಲೂ ಆಕ್ರಮಣ ಮಾಡದೆ ಶಾಂತಿ, ಜ್ಞಾನದಿಂದಲೇ ಜಗತ್ತನ್ನು ಗೆದ್ದ ದೇಶ. ಗಣಿತಶಾಸ್ತ್ರ ಸೇರಿದಂತೆ ವಿಜ್ಞಾನಕ್ಕೆ ಭಾರತದ ಕೊಡುಗೆ ಅಮೂಲ್ಯ, ಎಂದು ಅಭಿಪ್ರಾಯಪಟ್ಟರು.

ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ, ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ಇತಿಹಾಸ ಓದದವನು ಇತಿಹಾಸ ನಿರ್ಮಿಸಲಾರ. ನಾವು ನಮ್ಮ ಇತಿಹಾಸದ ಬಗ್ಗೆ ಎಚ್ಚೆತ್ತುಕೊಂಡು ಅದನ್ನು ಉಳಿಸಲು, ತಿಳಿಸಲು ‘ಆಜಾದಿ ಕಾ ಅಮೃತ ಮಹೋತ್ಸವ’ ಒಂದು ಉತ್ತಮ ಅವಕಾಶ, ಎಂದರು. ಮಂಗಳೂರು ವಿಶ್ವವಿದ್ಯಾನಿಲಯದ ಇತಿಹಾಸ ವಿಭಾಗದ ಪ್ರಾಧ್ಯಾಪಕ ಡಾ.ಲೋಕೇಶ್ ಕೆ.ಎಂ ಮೊದಲಾದವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಬಿಜೆಪಿಯ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ಎನ್.ಬಿ.ಭಾರ್ಗವಿ ದ್ರಾವಿಡ್ ಆಯ್ಕೆ

Published

on

ಸುದ್ದಿದಿನ,ಚಿತ್ರದುರ್ಗ : ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಯಾಗಿ ಚಿತ್ರದುರ್ಗದ ಶ್ರೀಮತಿ ಎನ್.ಬಿ.ಭಾರ್ಗವಿ ದ್ರಾವಿಡ್ ಅವರನ್ನು ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಸಂಸದರಾದ ತೇಜಸ್ವಿ ಸೂರ್ಯ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ಶಾಸಕ ಧೀರಜ್ ಮುನಿರಾಜ್ ರವರು ಅಧಿಕೃತ ನೇಮಕ ಪತ್ರ ನೀಡುವುದರ ಮೂಲಕ ಆಯ್ಕೆ ಮಾಡಲಾಯಿತು.

ಭಾರ್ಗವಿ ದ್ರಾವಿಡ್ ಅವರು ಈ ಹಿಂದೆ ಭಾರತ ಸರ್ಕಾರವು ಚಿತ್ರದುರ್ಗ ನೆಹರು ಯುವ ಕೇಂದ್ರದ ಸಲಹಾ ಸಮಿತಿಯ ಸದಸ್ಯರಾಗಿ ನೇಮಕ ಮಾಡಿತ್ತು. ಹಾಗೂ ದಾವಣಗೆರೆ ವಿಶ್ವ ವಿದ್ಯಾನಿಲಯದಲ್ಲಿ ವಿದ್ಯಾವಿಷಯಕ ಪರಿಷತ್ತಿನ ಸದಸ್ಯರಾಗಿ ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಲಾಗಿತ್ತು.

ಎಸ್.ಸಿ.ಮೋರ್ಚಾದ ರಾಜ್ಯ ಕಾರ್ಯ ಕಾರಿಣಿ ಸದಸ್ಯರಾಗಿ ಪ್ರವಾಸ ಕೈಗೊಂಡು ಕೆಲಸ ಮಾಡಿದ್ದರು. ಎ.ಬಿ.ವಿ.ಪಿ ಸಂಘಟನೆಯಲ್ಲಿಯೂಸಹ ಸಾಕಷ್ಟು ರಾಜ್ಯ ಮಟ್ಟದ ಜವಾಬ್ದಾರಿ ಗಳನ್ನು ನಿಭಾಯಿಸಿದ್ದರು.ಬರುವ 2024 ರ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಆಕಾಂಕ್ಷಿ ಕೂಡ ಆಗಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಪಿಎಲ್, ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಎಪಿಎಲ್, ಬಿಪಿಎಲ್ ಪಡಿತರ ಚೀಟಿಗಳಿಗಾಗಿ ಹೊಸ ಅರ್ಜಿಗಳನ್ನು ಏಪ್ರಿಲ್ 1 ರಿಂದ ಸ್ವೀಕರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ ವಿಧಾನಸಭೆಗೆ ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ಕುಟುಂಬದ ಆದಾಯ1.20 ಲಕ್ಷ ರೂಪಾಯಿಗಿಂತ ಹೆಚ್ಚಿದ್ದರೆ ಅಂತಹವರನ್ನು ಬಿಪಿಎಲ್ ಚೀಟಿಯಿಂದ ಹೊರಗಿಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ : ಅವಧಿ ವಿಸ್ತರಣೆ

Published

on

ಸುದ್ದಿದಿನ ಡೆಸ್ಕ್ : ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವ ಗಡುವನ್ನು ಮತ್ತೆ ಮೂರು ತಿಂಗಳ ಕಾಲ ವಿಸ್ತರಣೆ ಮಾಡುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧಾನ ಪರಿಷತ್‌ಗಿಂದು ತಿಳಿಸಿದ್ದಾರೆ.

ಪ್ರಶ್ನೋತ್ತರ ಕಲಾಪದಲ್ಲಿ ಅವರು, ಕಾಂಗ್ರೆಸ್‌ನ ಮಾದೇಗೌಡ ಅವರ ಪ್ರಸ್ತಾಪಕ್ಕೆ ಉತ್ತರಿಸಿ, ಸುಪ್ರೀಂಕೋರ್ಟ್ ನಿರ್ದೇಶನದಂತೆ ರಾಜ್ಯದಲ್ಲಿ ಇದುವರೆಗೂ 18 ಲಕ್ಷ ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಸಲಾಗಿದೆ. ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಇದು ನಡೆಯಬೇಕಾಗಿರುವುದರಿಂದ ಮೂರು ತಿಂಗಳು ವಿಸ್ತರಣೆ ಮಾಡಲಾಗಿದೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending